ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ನವದೆಹಲಿ: 2020ರ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪೂರಕ ಆರೋಪಪಟ್ಟಿ ಸಲ್ಲಿಸಲು ವಿಫಲವಾಗಿರುವ ದೆಹಲಿ ಪೊಲೀಸರನ್ನು ದೆಹಲಿ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ. ಸೆಪ್ಟೆಂಬರ್ 9-10ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸುವಲ್ಲಿ ತನಿಖಾಧಿಕಾರಿ(ಐಒ) ಕಾರ್ಯನಿರತವಾಗಿರುವುದು ವಿಳಂಬಕ್ಕೆ ಕಾರಣ ಎಂದು ದೆಹಲಿ ಪೊಲೀಸರು ಉಲ್ಲೇಖಿಸಿದ್ದರು. ಇದಕ್ಕೆ ಕರ್ಕರ್ಡೂಮಾ ನ್ಯಾಯಾಲಯದ

ಮಂಗಳೂರು: ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ನೀಡುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿರುವ ಕರಾವಳಿ ಮೂಲದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಕಳೆದ ತಡರಾತ್ರಿ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ)

ಬೆಂಗಳೂರು: ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಕೇರಳ ಆರೋಗ್ಯ ಇಲಾಖೆ ನಿಪಾ ವೈರಸ್‌ನಿಂದ ಕೋಯಿಕ್ಕೋಡ್‌ನಲ್ಲಿ ಇಬ್ಬರು ಸಾವಿಗೀಡಾಗಿರುವುದನ್ನು ದೃಢಪಡಿಸಿದ ನಂತರ, ಕರ್ನಾಟಕ ಆರೋಗ್ಯ ಇಲಾಖೆ ಇದೀಗ ಕೇರಳದ ಗಡಿ ಪ್ರದೇಶಗಳು ಮತ್ತು ಅಲ್ಲಿಂದ ಪ್ರಯಾಣಿಸುವ ಜನರನ್ನು ತಪಾಸಣೆಗೆ ಒಳಪಡಿಸಲು ಯೋಜಿಸುತ್ತಿದೆ. ಸೆಪ್ಟೆಂಬರ್ 13 ರಂದು ಕೇರಳದ ಗಡಿಗಳಲ್ಲಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು

ಬೆಂಗಳೂರು: ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಅಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸವಿದ್ದು, ಜನರ ಸೇವೆಗೆ ಲಭ್ಯರಿರಬೇಕು.

ಬೆಂಗಳೂರು: ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಆರೋಪಿಗಳ ಕಿಂಗ್‌ಪಿನ್ ಸೇರಿದಂತೆ ಪ್ರಮುಖ ಆರೋಪಿಗಳ ನಿವಾಸಗಳ ಮೇಲೆ ದಾಳಿ ವಿಶೇಷ ತನಿಖಾ ತಂಡ(ಎಸ್‌ಐಟಿ) ನಡೆಸುತ್ತಿದೆ. ಜಯನಗರದಲ್ಲಿರುವ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ ಅವರ ನಿವಾಸದ ಮೇಲೆ ದಾಳಿ ನಡೆಯುತ್ತಿದೆ. ಬೆಂಗಳೂರಿನ ಸದಾಶಿವನಗರ ಬಡಾವಣೆಯಲ್ಲಿರುವ ಇತರ ಆರೋಪಿಗಳಾದ ಸುನೀಶ್ ಹೆಗ್ಡೆ ಮತ್ತು ಪ್ರಸಿದ್ಧ್ ಅವರ

ಲಿಬಿಯಾ: ಸೆ 12.ಉತ್ತರ ಆಫ್ರಿಕಾದ ಲಿಬಿಯಾದಲ್ಲಿ ದೊಡ್ಡ ದುರಂತವೊಂದು ನಡೆದಿದೆ. ಭಾರೀ ಮಳೆ ಮತ್ತು ಪ್ರವಾಹದಿಂದ 2,000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಲಿಬಿಯಾ ದೇಶದ ಪ್ರಧಾನಿ ಒಸಾಮಾ ಹಮದ್ ತಿಳಿಸಿದ್ದಾರೆ. ಸುಮಾರು 5-6 ಸಾವಿರ ಜನರು ನಾಪತ್ತೆಯಾಗಿದ್ದಾರೆ. ಮೆಡಿಟರೇನಿಯನ್ ಸಮುದ್ರದಲ್ಲಿ ಡೇನಿಯಲ್ ಚಂಡಮಾರುತವು ಈ ಅನಾಹುತಕ್ಕೆ ಕಾರಣವಾಗಿದೆ. ಪ್ರಮುಖವಾಗಿ

ಮಣಿಪುರ: ಗಲಭೆ ಪೀಡಿತ ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು ಕುಕಿ-ಝೋ ಬುಡಕಟ್ಟು ಸಮುದಾಯದ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ನಿಷೇಧಿತ ಉಗ್ರ ಸಂಘಟನೆಯ ಉಗ್ರರು ಈ ಹತ್ಯೆ ಮಾಡಿದ್ದು, ಮಣಿಪುರದ ಕಂಗ್ಪೋಪ್ಕಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ವಾಹನದಲ್ಲಿ ಬಂದು ಇಂಫಾಲ್ ಪಶ್ಚಿಮ ಮತ್ತು ಕಾಂಗ್‌ಪೋಕಿ ಜಿಲ್ಲೆಗಳ ಗಡಿ ಭಾಗದಲ್ಲಿರುವ ಇರೆಂಗ್ ಮತ್ತು

ಹೈದರಾಬಾದ್: ಆಂಧ್ರಪ್ರದೇಶದ ಖ್ಯಾತ ವರಲಕ್ಷ್ಮಿ ಟಿಫನ್ಸ್ ನ ಮಾಲಿಕ ಪ್ರಭಾಕರ್ ರೆಡ್ದಿ ಹಾಗೂ ಅವರ ಸಹಾಯಕ ವೆಂಕಟ ಶಿವ ಸಾಯಿ ಕುಮಾರ್ (ಪಲ್ಲೇತುರು ಪುಲ್ಲಟ್ಲು ಮಾಲಿಕ) ಹಾಗೂ ಗ್ರಾಹಕ-ಪೆಡ್ಲರ್ ನ್ನು ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ್ದಾರೆ. ಕೊಕೆನ್, ಎಂಡಿಎಮ್ಎ ಮುಂತಾದ ಡ್ರಗ್ಸ್ ಗಳನ್ನು ಗೋವಾದಿಂದ ನಗರಕ್ಕೆ ಅಕ್ರಮ ಸಾಗಣೆ ಮಾಡುತ್ತಿದ್ದ ಆರೋಪದಲ್ಲಿ

ಮೈಸೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಅಲರ್ಟ್ ಆದ ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. ದೇವೇಗೌಡರಿಗೆ ಮಂಡಿಯೂರಿ ನಮಸ್ಕರಿಸಿದ ಪ್ರತಾಪ್ ಸಿಂಹ ಆಶೀರ್ವಾದ ಪಡೆದುಕೊಂಡಿದ್ದಾರೆ. ಭಾನುವಾರ ಆದಿಚುಂಚನಗಿರಿ ಶಾಖಾ ಮಠಕ್ಕೆ ದೇವೇಗೌಡರು ಭೇಟಿ ನೀಡಿದ ವೇಳೆ ಪ್ರತಾಪ್ ಸಿಂಹ

ಉಡುಪಿ:ಶ್ರೀ ಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿಯು ಶ್ರಿ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಾ. ರಾಜರ್ಷಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆದೇಶದಂತೆ ತಮ್ಮ ಚತುರ್ಥ ಪರ್ಯಾಯದ ಸ್ವಾಗತ ಸಮಿತಿಯ ಗೌರವ ಅಧ್ಯಕ್ಷರ ಸ್ಥಾನವನ್ನು ಅಲಂಕರಿಸುವಂತೆ ಹಾಗೂ ಇದೆ ದಿನಾಂಕ 16.9.23.ರ