ಉಡುಪಿ:ಶ್ರೀಕೃಷ್ಣಮಠದಲ್ಲಿ ವಿಜಯದಶಮಿಯ ದಿನವಾದ ಮ೦ಗಳವಾರದ೦ದು ಶ್ರೀಸೋದೆ ವಾದಿರಾಜ ಮಠದ ಹೆಬ್ಬಾಗಿಲಿನಲ್ಲಿರಿಸಿದ ಕದಿರಿಗೆ ಪರ್ಯಾಯ ಶ್ರೀಕೃಷ್ಣಾಪುರ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು ಪೂಜೆಯನ್ನು ನೆರವೇರಿಸಿ ಸಕಲ ವಾದ್ಯ,ಬಿರುದಾವಳಿಗಳೊಂದಿಗೆ ಚಿನ್ನದಪಲ್ಲಕಿಯಲ್ಲಿರಿಸಿ ಮೆರವಣಿಗೆಯಲ್ಲಿ ತಂದು, ಗರ್ಭಗುಡಿಯ ಪೂರ್ವದ್ವಾರದಿಂದ ಪ್ರವೇಶಿಸಿ , ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪೂಜೆ ನಡೆಸಲಾಯಿತು. ನಂತರ ಬಡಗುಮಾಳಿಗೆಯಲ್ಲಿರಿಸಿ
ಚೆನ್ನೈ: ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ಬಸ್ ಹಾಗೂ ಟಾಟಾ ಸುಮೋ ಮುಖಾಮುಖಿ ಢಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿ, 14 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂನಲ್ಲಿ ಈ ಘಟನೆ ನಡೆದಿದ್ದು, ಸರ್ಕಾರಿ ಬಸ್ ಮತ್ತು ಟಾಟಾ ಸುಮೋ ಮುಖಾಮುಖಿ ಡಿಕ್ಕಿಯಾಗಿದೆ. ಮೂಲಗಳ
ಹಾವೇರಿ: ಮುಕ್ಕೋಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್’ ಎಂದು ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಸುಕ್ಷೇತ್ರ ದೇವರಗುಡ್ಡದ ಮಾಲತೇಶ ದೇವರ ಕಾರ್ಣಿಕ ನುಡಿದಿದೆ. ನಾಗಪ್ಪಜ್ಜ ಉರ್ಮಿ ಗೊರವಯ್ಯಾ ನುಡಿದ ಕಾರ್ಣಿಕವನ್ನು ಬಳಿಕ ದೇಗುಲದ ಪ್ರಧಾನ ಅರ್ಚಕ ಸಂತೋಷ ಭಟ್ ವಿಶ್ಲೇಷಿಸಿದ್ದು, ಮುಕ್ಕೋಟಿ ಚಲ್ಲಿತಲೇ ಅಂದರೆ ರೈತರು ಕೋಟ್ಯಂತರ ರೂ. ಭೂಮಿಗೆ ಹಾಕುತ್ತಾರೆ. ರೈತರಿಗೆ
ಪಾಟ್ನಾ: ನವರಾತ್ರಿ ಅಂಗವಾಗಿ ಉತ್ತರ ಭಾರತದಲ್ಲಿ ದುರ್ಗಾಪೂಜೆ ಸಂಭ್ರಮಾಚರಣೆ ನಡೆಯುತ್ತಿದ್ದು, ಇದೇ ರೀತಿಯ ಪಂಡಾಲ್ ನಲ್ಲಿ ಕಾಲ್ತುಳಿತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಸೋಮವಾರ ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯ ದುರ್ಗಾಪೂಜಾ ಪಂಡಾಲ್ ನಲ್ಲಿ ನಡೆದ ಕಾಲ್ತುಳಿತದಲ್ಲಿ ಐದು ವರ್ಷದ ಬಾಲಕ ಮತ್ತು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದರೆ, ಹಲವರು ಗಾಯಗೊಂಡಿದ್ದಾರೆ
ಉಡುಪಿ:ಶ್ರೀಕೃಷ್ಣದೇವರಿಗೆ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ನವರಾತ್ರಿಯ ಪ್ರಯುಕ್ತ ಸೋಮವಾರದ೦ದು “ಗಜಲಕ್ಷ್ಮೀ "ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.
ಮಂಗಳೂರು:ಅ,23: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವದ ಭವ್ಯ ಮೆರವಣಿಗೆಯು 24 ರಂದು ಸಂಜೆ ಆರಂಭಗೊಂಡು 25 ರಂದು ಮುಂಜಾನೆ ಶಾರದೆ ಜಲಸ್ತಂಭನದೊಂದಿಗೆ ಮುಕ್ತಾಯಗೊಳ್ಳಲಿದೆ. ಈ ಭವ್ಯವಾದ ಮೆರವಣಿಗೆಯು ವಿವಿಧ ಟ್ಯಾಬ್ಲೋಗಳು, ರಾಜ್ಯದ ವಿವಿಧ ಭಾಗಗಳಿಂದ ಕಲಾತ್ಮಕ ಪ್ರದರ್ಶನಗಳು ಮತ್ತು ಹುಲಿ ವೇಷಭೂಷಣಗಳು ಮತ್ತು ಇತರ
ಕಾರ್ಕಳ:ಅ. 23, ಅಕ್ಟೋಬರ್ 19ರಂದು ಕಾಣೆಯಾಗಿದ್ದ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಅವರ ಮೃತದೇಹ ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಇಂದು ಪತ್ತೆಯಾಗಿದೆ. ಕಾರ್ಕಳ ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಶೃತಿನ್ ಶೆಟ್ಟಿ (35) ಮೃತದೇಹ ಪತ್ತೆ. ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ ಅ.19ರಂದು ಕಾಣೆಯಾಗಿದ್ದು,
ಬೆಂಗಳೂರು: ಹುಲಿ ಉಗುರಿನ ಲಾಕೆಟ್ ನ್ನು ಕುತ್ತಿಗೆ ಸರದಲ್ಲಿ ಧರಿಸಿದ ಆರೋಪದಲ್ಲಿ ಬಂಧನಕ್ಕೀಡಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು 2ನೇ ಎಸಿಜೆಎಂ ಕೋರ್ಟ್ ನ ಮ್ಯಾಜಿಸ್ಟ್ರೇಟ್ ನಿವಾಸಕ್ಕೆ ಇಂದು ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ಎಸಿಜೆಎಂ
ಗಾಜಾ: ಇಸ್ರೇಲ್ ಹಮಾಸ್ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಗಾಜಾದಲ್ಲಿ ಹಮಾಸ್ 222 ಮಂದಿಯನ್ನು ಒತ್ತೆಯಾಳುಗಳನ್ನಾಗಿಟ್ಟುಕೊಂಡಿದೆ ಎಂದು ಹೇಳಿದೆ. ಈ ಹಿಂದೆ ಅಂದಾಜಿಸಿದ್ದಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಒತ್ತೆಯಾಳುಗಳಿದ್ದಾರೆ ಎಂದು ಇಸ್ರೇಲ್ ಹೇಳಿದೆ. ಇಸ್ರೇಲ್ ನ ವಾಯುದಾಳಿಯ ಪರಿಣಾಮವಾಗಿ 13 ಒತ್ತೆಯಾಳುಗಳು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಆರೋಪಿಸಿದೆ. ಭಾನುವಾರದಂದು ಹಲವಾರು ವಿಶ್ವ ನಾಯಕರು ಇಸ್ರೇಲ್ ಮತ್ತು
ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಕೋಲಾರದಲ್ಲಿ ದುಷ್ಕರ್ಮಿಗಳು ಸುಪಾರಿ ಪಡೆದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಾಜಿ ಸ್ಟೀಕರ್ ರಮೇಶ್ ಕುಮಾರ್ ಬೆಂಬಲಿಗನನ್ನು ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (Murder Case) ಮಾಡಿದ್ದು, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ ಕೌನ್ಸಿಲರ್