ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಶಿಮ್ಲಾ:  ಹಿಮಾಚಲ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು, ಮತ್ತೆ ಮೇಘಸ್ಪೋಟ ಸಂಭವಿಸಿದೆ, ಇದರಲ್ಲಿ 7 ಮಂದಿ ಮೃತಪಟ್ಟಿದ್ದು, ಮೂವರು ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಹಿಮಾಚಲ ಪ್ರದೇಶದಲ್ಲಿ ವರುಣನ ಆರ್ಭಟ ಮತ್ತೆ ಜೋರಾಗಿದೆ. ಮೇಘಸ್ಫೋಟ ಸಂಭವಿಸಿ, ಸೋಲನ್‌ ಜಿಲ್ಲೆಯ ಕಂದಘಾಟ್ ಉಪ ವಿಭಾಗದ ಜಾಡೋನ್ ಗ್ರಾಮಕ್ಕೆ ನೀರು ನುಗ್ಗಿದೆ. ಕಂದಘಾಟ್‌

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜುಲೈ18ರಿ೦ದ ಅಗಸ್ಟ್ 17ರವರೆಗೆ ಜರಗುತ್ತಿರುವ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜುಲೈ 18ರ ಮ೦ಗಳವಾರದ೦ದು ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು ವಿವಿಧ ಭಜನಾ ಮ೦ಡಳಿಯ ಆಶ್ರಯದಲ್ಲಿ ಭಜನಾ ಕಾರ್ಯಕ್ರಮವು ಜರಗುತ್ತಿದೆ. ಈ ಕಾರ್ಯಕ್ರಮ ಅ೦ಗವಾಗಿ ಪ್ರತಿ ಭಾನುವಾರದ೦ದು ನಗರ ಭಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ೪ನೇ ಭಾನುವಾರದವಾದ

ಬೆಂಗಳೂರು: ಗಗನಕ್ಕೇರಿದ್ದ ಟೊಮ್ಯಾಟೋ ಬೆಲೆ ಇಳಿಮುಖವಾಗುತ್ತಿದೆ ಎಂದು ಸಮಾಧಾನಪಡುವಷ್ಟರಲ್ಲಿ ಈರುಳ್ಳಿ ಬೆಲೆ ಗಗನಕ್ಕೇರುತ್ತಿದ್ದು, ಈ ಬೆಳವಣಿಗೆ ಇದೀಗ ಆತಂಕ ಸೃಷ್ಟಿಸುತ್ತಿದೆ. ಕಳೆದ ವಾರ ಚಿಲ್ಲರೆ ಅಂಗಡಿಗಳಲ್ಲಿ ಕೆಜಿಗೆ 25 ರೂ.ಗಳಷ್ಟಿದ್ದ ಈರುಳ್ಳಿ ಬೆಲೆ, ಗುಣಮಟ್ಟಕ್ಕೆ ಅನುಗುಣವಾಗಿ 35-40 ರೂ.ಗೆ ತಲುಪಿದೆ, ಟಾಪ್ ಎಂಡ್ ಸೂಪರ್ಮಾರ್ಕೆಟ್‌ಗಳಲ್ಲಿ ಕೆಜಿಗೆ 45 ರೂಗಳಂತೆ ಮಾರಾಟ

ಉಡುಪಿ: ಕಲಾಭಿಮಾನಿ ಹಾಗೂ ಯಕ್ಷಗಾನ ‘ತಾಳಮದ್ದಳೆ’ ಸಂಘಟಕ ಸುಧಾಕರ ಆಚಾರ್ಯ ಅವರಿಗೆ ಭಾರತದ ಸ್ವಾತಂತ್ರ್ಯ ಹೋರಾಟದ ಬಗ್ಗೆ ಅಪಾರ ಗೌರವ. 62 ವರ್ಷದ ಸುಧಾಕರ್ ಆಚಾರ್ಯ ಅವರು ಸ್ವಾತಂತ್ರ್ಯ ಹೋರಾಟ, ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ ಸಂಭ್ರಮ, 1948 ರಲ್ಲಿ ಹೈದರಾಬಾದ್‌ನ ಪ್ರವೇಶ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು

ತುಮಕೂರು: ಕೈಕಾಲು ತೊಳೆಯಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳನ್ನು ರಕ್ಷಿಸಲು ಹೋಗಿ ಒಟ್ಟು ನಾಲ್ವರು ನೀರುಪಾಲಾಗಿರುವ ದಾರುಣ ಘಟನೆ ತುಮಕೂರಿನ  ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದ ಬಳಿ ನಡೆದಿದೆ. ಸಿದ್ದಗಂಗಾ ಮಠದ ಹಿಂಭಾಗದ ನೀರಿನ ಗೋಕಟ್ಟೆಯಲ್ಲಿ ಕೈಕಾಲು ತೊಳೆಯಲು ಹೋಗಿದ್ದ 11 ವರ್ಷದ ಶಂಕರ್ ಮತ್ತು ರಕ್ಷಿತ್ ಮುಳುಗಿದ್ದಾರೆ. ಈ ವೇಳೆ ಜೊತೆಯಲ್ಲಿ ಇದ್ದ ಲಕ್ಷ್ಮಿ

ನವದೆಹಲಿ: ಕೆನಡಾದಲ್ಲಿ ಖಲಿಸ್ತಾನಿ ತೀವ್ರಗಾಮಿಗಳ ಅಟ್ಟಹಾಸ ಮುಂದುವರೆದಿದ್ದು, ಶನಿವಾರ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಲಾಗಿದೆ ಎಂದು ಆಸ್ಟ್ರೇಲಿಯಾ ಟುಡೇ ವರದಿ ಮಾಡಿದೆ. ಶನಿವಾರ ತಡರಾತ್ರಿ ಖಾಲಿಸ್ತಾನ್ ಜನಾಭಿಪ್ರಾಯ ಸಂಗ್ರಹಣೆಯ ಪೋಸ್ಟರ್‌ಗಳೊಂದಿಗೆ ಕೆನಡಾದಲ್ಲಿ ತೀವ್ರಗಾಮಿಗಳ ತಂಡವೊಂದು ಹಿಂದೂ ದೇವಾಲಯವನ್ನು ಧ್ವಂಸ ಮಾಡಿವೆ. ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. 'ಜೂನ್

ನವದೆಹಲಿ: ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಯಾವಾಗಲೂ ಒಂದಿಲ್ಲೊಂದು ವಿಚಾರಗಳಿಗೆ ಸುದ್ದಿಯಲ್ಲಿರುತ್ತಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಪೋಸ್ಟ್‌ಗೆ ಅತಿ ಹೆಚ್ಚು ಗಳಿಕೆ ಕಾಣುವವರ ಪೈಕಿ ವಿಶ್ವದಲ್ಲಿ 14ನೇ ಸ್ಥಾನ ಪಡೆದುಕೊಂಡಿದ್ದಾರೆ ಎನ್ನುವ ಸುದ್ದಿಗೆ ಇದೀಗ ಕೊಹ್ಲಿ ಅವರೇ ಸ್ಪಷ್ಟನೆ ನೀಡಿದ್ದಾರೆ. ವಿರಾಟ್ ಕೊಹ್ಲಿ ಅವರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡುವ ಪ್ರತಿ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ, ದೆಹಲಿ ಪೊಲೀಸರ ವಿಶೇಷ ಘಟಕ, 32 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದು, ಆತನಿಂದ 21 ಪಿಸ್ತೂಲ್‌ಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಮಧ್ಯಪ್ರದೇಶದ ಸಾಗರ್ ನಿವಾಸಿ ಲಾಲ್ ಸಿಂಗ್ ಚಾದರ್ ತನ್ನ ತವರು ರಾಜ್ಯದ ಬುರ್ಹಾನ್‌ಪುರದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳನ್ನು ಖರೀದಿಸಿ, ದೆಹಲಿ-ಎನ್‌ಸಿಆರ್‌ಗೆ ಸರಬರಾಜು ಮಾಡುತ್ತಿದ್ದ ಎಂದು

ಸಹರಾನ್‌ಪುರ: ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ಗಗಲ್ಹೇರಿ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ವಿಎಚ್‌ಪಿ ಪದಾಧಿಕಾರಿಯೊಬ್ಬರ ಮೇಲೆ ಗುಂಡು ಹಾರಿಸಿದ್ದು, ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ವಿಶ್ವ ಹಿಂದೂ ಪರಿಷತ್‌ನ (ವಿಎಚ್‌ಪಿ) ನಗರ ಘಟಕದ ಸಹ ಕಾರ್ಯದರ್ಶಿ ಅಭಿಷೇಕ್ ಪಂಡಿತ್ (28) ಶುಕ್ರವಾರ ತಡರಾತ್ರಿ ತನ್ನ ಮನೆಯ ಹೊರಗೆ ನಡೆದುಕೊಂಡು

ಉಡುಪಿ:ಆ. 12:ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ವರ್ಗಾವಣೆಗೊಂಡಿದ್ದು, ನೂತನ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕಗೊಂಡಿದ್ದಾರೆ. ನೂತನ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿಎಸ್ ಬೆಂಗಳೂರು ನೃಪತುಂಗ ವಿಶ್ವವಿದ್ಯಾನಿಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.