ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಉಡುಪಿ:ಮಣಿಪುರದಲ್ಲಿ ನಡೆಯುತ್ತಿರುವ ಗಲಭೆ ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಅನಾಚಾರ ಇದನ್ನೆಲ್ಲ ಮರೆಮಾ ಮಾಚಲು ಉಡುಪಿಯ ಕಾಲೇಜಿನಲ್ಲಿ ನಡೆದಿದೆ ಎನ್ನಲಾದ ಬಿಜೆಪಿಯವರು ಸೃಷ್ಟಿಸಿದ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣ. ಬಿಜೆಪಿಯವರಿಗೆ ಹಾಗೂ ಸಂಘ ಪರಿವಾರದವರಿಗೆ ರಾಜ್ಯದಲ್ಲಿ ಅಧಿಕಾರವನ್ನು ಕಳೆದುಕೊಂಡು ಹುಚ್ಚರಂತಾಗಿದ್ದಾರೆ ಇದರಿ೦ದಾಗಿ ಸರಕಾರದ ಮೇಲೆ ಇಲ್ಲಸಲ್ಲದ ಆರೋಪವನ್ನು ಹೊರಿಸುತ್ತಿದ್ದಾರೆ೦ದು ಸುರೇಶ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತು ‘ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಮೂಲತಃ ಸಜಿಪ ಮುನ್ನೂರು ಗ್ರಾಮದ ಪ್ರಸ್ತುತ ಉಳ್ಳಾಲದ ಹಫೀಝ್ ಯಾನೆ ಅಪ್ಪಿ(35), ಸಜಿಪ ಮುನ್ನೂರಿನ ಅಮೀರ್ ಯಾನೆ ಅಮ್ಮಿ(34), ಸಜಿಪ

ಕಾರ್ಕಳ : ಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರನ್ನು ತಡೆದು ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಐವರು ಸಂಘ ಪರಿವಾರದ ಕಾರ್ಯಕರ್ತರನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.  ಬಂಧಿತ ಆರೋಪಿಗಳನ್ನು ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ

ಅಲಹಾಬಾದ್: ವಾರಾಣಸಿಯ ಜ್ಞಾನವಾಪಿ ಮಸೀದಿ(Gyanvapi Mosque)ಯಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್​ ಅನುಮತಿ ನೀಡಿದ್ದು, 'ನ್ಯಾಯಕ್ಕಾಗಿ ಸಮೀಕ್ಷೆ ಅನಿವಾರ್ಯ' ಎಂದು ಹೇಳಿದೆ. ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್‌ಐ ಸಮೀಕ್ಷೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದ್ದು, ವೈಜ್ಞಾನಿಕ ಸಮೀಕ್ಷೆಗೆ ಕೋರ್ಟ್​ ಸಮ್ಮತಿ ನೀಡಿದೆ. ಅಲಹಾಬಾದ್ ಹೈಕೋರ್ಟ್ ಜುಲೈ 27

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ. ಸಂಸತ್ ಭವನಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಈ ವೇಳೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮೋದಿಯವರಿಗೆ ಗಂಧದ ಹಾರ ಹಾಕಿ, ಮೈಸೂರು ಪೇಟ ಧರಿಸಿ, ಅಂಬಾರಿ ಕೊಟ್ಟು

ಚಿತ್ರದುರ್ಗ: ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟು 36 ಮಂದಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ಮೃತರನ್ನು ಚಿತ್ರದುರ್ಗದ ಹೊರವಲಯದ ಕವಾಡಿಗರಹಟ್ಟಿ ನಿವಾಸಿಗಳಾದ ಮಂಜುಳಾ (23 ವ) ಮತ್ತು ಯುವಕ ರಘು (27ವ) ಎಂದು ಗುರುತಿಸಲಾಗಿದೆ. ಮಂಜುಳಾ ನಿನ್ನೆ ಆಸ್ಪತ್ರೆಯಲ್ಲಿ ಮೃತಪಟ್ಟರೆ, ನೀರು ಸೇವಿಸಿ ಬೆಂಗಳೂರಿಗೆ ತೆರಳಿದ್ದ ರಘು ತೀವ್ರ

ಮಂಗಳೂರು: ಉಡುಪಿಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಕಡಲ್ಕೊರೆತದಿಂದ ಹಾನಿಗೊಳಗಾದ ಕರಾವಳಿ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿದರು. ಪಡುಬಿದ್ರಿ ಬೀಚ್ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಿಂದ ವ್ಯಾಪಕ ಹಾನಿ ಸಂಭವಿಸಿದ್ದು ಅಲ್ಲಿಗೆ ಭೇಟಿ ನೀಡಿ ಸಿಎಂ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಡಲ್ಕೊರೆತ ಸಮಸ್ಯೆಗೆ

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಘರ್ಷಣೆಗೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಧ್ಯಂತರ ಶಿಫಾರಸುಗಳನ್ನು ಕಳುಹಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಇಬ್ಬರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಬಿಂಬಿಸುವ ವೈರಲ್ ವೀಡಿಯೊ ವೈರಲ್ ಆದ ಬಳಿಕ ಸ್ವಾತಿ ಮಲಿವಾಲ್,

ನವದೆಹಲಿ: ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಹಾಗೂ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ಕುರಿತು ಎಫ್ ಐಆರ್ ದಾಖಲಿಸುವಲ್ಲಿ ವಿಳಂಬವಾಗಿರುವುದಕ್ಕೆ ಕಿಡಿಕಾರಿರುವ ಸುಪ್ರೀಂಕೋರ್ಟ್, ಮುಂದಿನ ವಿಚಾರಣೆಯನ್ನು ಆಗಸ್ಟ್ 7 ರಂದು ನಿಗದಿಪಡಿಸಿದ್ದು, ಅಂದು ಮಧ್ಯಾಹ್ನ 2 ಗಂಟೆಗೆ ಮಣಿಪುರದ ಡಿಜಿಪಿ ನ್ಯಾಯಾಲಾಯದ ಮುಂದೆ ಹಾಜರಾಗಬೇಕು ಎಂದು ಸಮಗ್ರ ವಿವರ ಒದಗಿಸಬೇಕು

ಮಂಗಳೂರು: ನೈತಿಕ ಪೊಲೀಸ್ ಗಿರಿ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ. ಕಾನೂನಿನಲ್ಲಿ ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ. ಕಾನೂನನ್ನು ಕೈಗೆತ್ತಿಕೊಳ್ಳಬೇಡಿ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಕರಾವಳಿ ಜಿಲ್ಲೆಗಳ ಪ್ರವಾಸ ವೇಳೆ ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸೌಜನ್ಯ ಕೇಸ್ ಕೋರ್ಟ್ ನಲ್ಲಿ ಇತ್ಯರ್ಥವಾಗಿದೆ. ಸೌಜನ್ಯ