ಮಂಗಳೂರು:ಡಿ.15: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟೀಯ ಸಂಸ್ಥೆ 2023ನೇ ವರ್ಷದಲ್ಲಿ ರಾಷ್ಟ್ರ ಮಟ್ಟದಲ್ಲಿ ನೀಡುವ 'ಮೆಸೇಂಜರ್ ಆಫ್ ಪೀಸ್ ಸ್ಟಾರ್ ಅವಾರ್ಡ್' ಪ್ರಶಸ್ತಿಗೆ ಕರ್ನಾಟಕದ 8 ಮಂದಿ ಆಯ್ಕೆಯಾಗಿದ್ದು, ಈ ಪೈಕಿ ಮೂವರು ದ.ಕ. ಜಿಲ್ಲೆಯವರು. ವಯಸ್ಕರ ವಿಭಾಗದಲ್ಲಿ ದ.ಕ. ಜಿಲ್ಲಾ ಸ್ಕೌಟ್ಸ್-ಗೈಡ್ಸ್ ಕೋಶಾಧಿಕಾರಿ ನವೀನ್ ಚಂದ್ರ ಅಂಬೂರಿ,
ಮಂಗಳೂರು:ಡಿ. 15: ಅಯ್ಯಪ್ಪ ಸ್ವಾಮಿಯ ಭಕ್ತರಿಗೆ ಸ್ವಾಮಿಯ ಮಹಿಮೆಯ ಪ್ರತ್ಯಕ್ಷ್ಯ ದರ್ಶನವಾಗುತ್ತದೆ ಎನ್ನುವ ಹಲವು ಸುದ್ಧಿಗಳು ಎಲ್ಲೆಡೆ ಕೇಳಿ ಬರುತ್ತದೆ. ಇದೇ ಕಾರಣಕ್ಕಾಗಿಯೇ ಅಯ್ಯಪ್ಪ ಸ್ವಾಮಿಯ ಪ್ರಮುಖ ಕ್ಷೇತ್ರ ಶಬರಿಮಲೆಗೆ ಭೇಟಿ ನೀಡುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತೆ. ಇಂತಹದೊಂದು ಪವಾಡ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ
ಉಡುಪಿ:ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಇತ್ತೀಚೆಗೆ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಯಶಪಾಲ ಸುವರ್ಣ ವಿದ್ಯಾರ್ಥಿಗಳು ಎಲ್ಲಾ ರಂಗಗಳಲ್ಲಿ ತೊಡಗಿಸಿ ಕೊಂಡಾಗ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ, ಸಾಧನೆ ಸುಲಭವಾಗುತ್ತದೆ. ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ವಿದ್ಯಾರ್ಥಿನಿಯರು ಅಧ್ಯಯನದಲ್ಲಿ ಮೇಲುಗೈ ಸಾಧಿಸಿದಂತೆಯೇ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ
ಉಡುಪಿ:ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ.14ರ ಶನಿವಾರದ೦ದು ಶ್ರೀದೇವಿಯ ಸನ್ನಿಧಿಯಲ್ಲಿ ಪ್ರಥಮ ಬಾರಿಗೆ ನಡೆದ ವೈಭವದ ಶತಚಂಡಿಕಾಯಾಗ ಸಂಪನ್ನ ಗೊಂಡಿತ್ತು. ಮುಂಜಾನೆ 6 ರಿಂದ ಸಮೂಹಿಕ ದೇವತಾ ಪ್ರಾರ್ಥನೆ, ಸಂಕಲ್ಪ ಪೂಜೆ ಯೊಂದಿಗೆ ಧಾರ್ಮಿಕ ಪೂಜಾ ವಿಧಾನಗಳನ್ನು ದೇವಳದ ತಂತ್ರಿಗಳಾದ ಕೆ.ಸ್. ಕೃಷ್ಣಮೂರ್ತಿ, ರಮಣ ತಂತ್ರಿ ಗಳು ಮಾರ್ಗದರ್ಶನದಲ್ಲಿ ನೂರಾರು
ಕಾಪು: ಡಿ.15: ವೈಯಕ್ತಿಕ ಕಾರಣದಿಂದ ಮನನೊಂದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉದ್ಯಾವರ ಬೊಳ್ಜೆ ಎಂಬಲ್ಲಿ ರವಿವಾರ ಬೆಳಗಿನ ಜಾವ ನಡೆದಿದೆ. ಮೃತನನ್ನು ಬೊಳ್ಜೆಯ ಆದಿತ್ಯ(24) ಎಂದು ಗುರುತಿಸಲಾಗಿದೆ. ಈತ ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟ ತನ್ನ ಸ್ನೇಹಿತ ಸುಕ್ಷಿತ್ ಹೆಸರಿನಲ್ಲಿ ಕ್ರಿಕೆಟ್ ತಂಡವನ್ನು ಕಟ್ಟಿದ್ದರು. ಅಲ್ಲದೆ ಪೆರಂಪಳ್ಳಿಯಲ್ಲಿ ನಿನ್ನೆ ರಾತ್ರಿ
ನವದೆಹಲಿ:ಡಿ.15, ಆಮ್ ಆದ್ಮಿ ಪಕ್ಷ (ಎಎಪಿ) ಭಾನುವಾರ ದೆಹಲಿ ವಿಧಾನಸಭಾ ಚುನಾವಣೆಗೆ 38 ಅಭ್ಯರ್ಥಿಗಳ ನಾಲ್ಕನೇ ಮತ್ತು ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಮುಖ್ಯಮಂತ್ರಿ ಅತಿಶಿ ಮತ್ತೊಮ್ಮೆ ಕಲ್ಕಾಜಿಯಿಂದ ಸ್ಪರ್ಧಿಸಲಿದ್ದಾರೆ. ಸೌರಭ್ ಭಾರದ್ವಾಜ್ ಗ್ರೇಟರ್ ಕೈಲಾಶ್ ನಿಂದ ಆಪ್
ಕೋಲ್ಕತಾ: ತನ್ನೊಂದಿಗೆ ಅಕ್ರಮ ಸಂಬಂಧಕ್ಕೆ ಒಪ್ಪಲಿಲ್ಲ ಎಂಬ ಒಂದೇ ಕಾರಣಕ್ಕೆ ದೂರ್ತನೋರ್ವ ಮಹಿಳೆಯ ಶಿರಚ್ಛೇದ ಮಾಡಿ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಬಿಸಾಡಿರುವ ಧಾರುಣ ಘಟನೆ ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತಾದಲ್ಲಿ ನಡೆದಿದೆ. ಹೌದು.. ಈ ಹಿಂದೆ ಕೋಲ್ಕತಾದ ಟೋಲಿಗಂಜ್ ಪ್ರದೇಶದಲ್ಲಿ ಸುಮಾರು 30 ವರ್ಷದ ಮಹಿಳೆಯ ಕತ್ತರಿಸಿದ
ಮಂಗಳೂರು: ಯಕ್ಷಗಾನದ ಮೊದಲ ಮಹಿಳಾ ಭಾಗವತರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ, ತಮ್ಮ ಕಂಠ ಸಿರಿಯಿಂದಲೇ ಕರಾವಳಿಯಲ್ಲಿ ಮನೆಮಾತಾಗಿದ್ದ ಲೀಲಾವತಿ ಬೈಪಾಡಿತ್ತಾಯ (77) ಅವರು ಶನಿವಾರ ನಿಧನರಾಗಿದ್ದಾರೆ. ವೃತ್ತಿನಿರತ ಯಕ್ಷಗಾನ ತಂಡಗಳೊಂದಿಗೆ ತಿರುಗಾಟ ನಡೆಸಿ ಇತಿಹಾಸ ನಿರ್ಮಿಸಿದ ಲೀಲಾವತಿ ಬೈಪಾಡಿತ್ತಾಯ ಅವರು ಕ್ಷೇತ್ರದ ಮಹಿಳೆಯರ ಹಾದಿ ಹಿಡಿದವರು. ಅವರ ಗಮನಾರ್ಹ 40 ವರ್ಷಗಳ
ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಅತುಲ್ ಪತ್ನಿ, ಎ1 ಆರೋಪಿ ನಿಖಿತಾ ಸಿಂಘಾನಿಯ, ಅತ್ತೆ ಎ2 ಆರೋಪಿ ನಿಶಾ ಸಿಂಘಾನಿಯಾ, ಭಾಮೈದ ಎ3 ಆರೋಪಿ ಅನುರಾಗ್ನನ್ನು ಪೊಲೀಸರು ಬಂಧಿಸಿ ತಡರಾತ್ರಿ ಬೆಂಗಳೂರಿಗೆ ಕರೆತಂದಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ
ಬೆಂಗಳೂರು: 2020 ರಲ್ಲಿ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಪಿಪಿಇ ಕಿಟ್ಗಳು, ಎನ್ 95 ಮಾಸ್ಕ್ ಮತ್ತು ಇತರ ವೈದ್ಯಕೀಯ ಉಪಕರಣಗಳನ್ನು ಖರೀದಿಸುವಲ್ಲಿನ ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ವೈದ್ಯಕೀಯ ಶಿಕ್ಷಣ ಇಲಾಖೆ ಅನೇಕ ಅಧಿಕಾರಿಗಳು ಮತ್ತು ಖಾಸಗಿ ಕಂಪನಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ, ಹೀಗಾಗಿ ಆ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದ