ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಮೈಸೂರು ಮೇ 22: ಮೈಸೂರಿನ ಯರಗನಹಳ್ಳಿಯಲ್ಲಿ ವಾಸವಾಗಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಬಟ್ಟೆ ಐರನ್ ಕೆಲಸ ಮಾಡುತ್ತಿದ್ದ ಮಂಜುಳಾ (39), ಕುಮಾರಸ್ವಾಮಿ (45), ಅರ್ಚನಾ (19), ಸ್ವಾತಿ (17) ಮೃತ ದುರ್ದೈವಿಗಳು. ಸ್ಥಳಕ್ಕೆ ಕಮಿಷನರ್​ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಲಿಂಡರ್

ಹುಬ್ಬಳ್ಳಿ, ಮೇ 22: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಕೊನೆಗೂ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಕೊಲೆಯ ರಹಸ್ಯದ ಬಗ್ಗೆ ವಿಶ್ವ ಬಾಯ್ಬಿಟ್ಟಿದ್ದಾನೆ. ಕೊಲೆ ಮಾಡಿ ಪರಾರಿಯಾಗುತ್ತಿದ್ದಾಗ ರೈಲಿನಲ್ಲಿ ಕಿರಿಕ್ ಮಾಡಿ ತಪ್ಪಿಸಲು ಯತ್ನಿಸಿ ಗಂಭೀರವಾಗಿ ಗಾಯಗೊಂಡ

ಅಹಮದಾಬಾದ್: ಇಲ್ಲಿನ ಸರ್ದಾರ್ ವಲ್ಲಭಾಯಿ ಪಟೇಲ್ ವಿಮಾನ ನಿಲ್ದಾಣದಲ್ಲಿ ಇಸ್ಲಾಮಿಕ್ ಸ್ಟೇಟ್‌ನ ನಾಲ್ವರು ಭಯೋತ್ಪಾದಕರನ್ನು ಬಂಧಿಸಿರುವುದಾಗಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಸೋಮವಾರ ತಿಳಿಸಿದೆ. ಎಟಿಎಸ್ ನೀಡಿರುವ ಸಂಕ್ಷಿಪ್ತ ಟಿಪ್ಪಣಿಯಲ್ಲಿ, ವಿಮಾನ ನಿಲ್ದಾಣದಲ್ಲಿ ಬಂಧಿಸಲಾದ ನಾಲ್ವರು ಆರೋಪಿಗಳು ಶ್ರೀಲಂಕಾದ ಪ್ರಜೆಗಳಾಗಿದ್ದು, ಇಸ್ಲಾಮಿಕ್ ಸ್ಟೇಟ್‌ನ ಭಯೋತ್ಪಾದಕರು ಎಂದು ಹೇಳಿದೆ. ಮೂಲಗಳ ಪ್ರಕಾರ, ಪಾಕಿಸ್ತಾನದ

ಬೆಂಗಳೂರು: ಹೊಳೆ ನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ. ತಮ್ಮ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಧ್ಯ ವಯಸ್ಸಿನ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಎಚ್. ಡಿ. ರೇವಣ್ಣ ಅವರಿಗೆ ನಗರದ 24ನೇ ಎಸಿಎಂಎಂ ನ್ಯಾಯಾಲಯ ಸೋಮವಾರ

ಬೆಂಗಳೂರು, ಮೇ 20: ನನ್ನ ಹಾಗೂ ಹೆಚ್​ಡಿ ದೇವೇಗೌಡರ ಮೇಲೆ ಗೌರವ ಇದ್ದರೆ ಕೈಮುಗಿದು ಮನವಿ ಮಾಡ್ತೇನೆ 24 ಇಲ್ಲಾ 48 ಗಂಟೆಯಲ್ಲಿ ಶರಣಾಗು ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಸಂಸದ ಪ್ರಜ್ವಲ್​ ರೇವಣ್ಣಗೆ  ಮನವಿ ಮಾಡಿದ್ದಾರೆ. ನಗರದ ಜೆಡಿಎಸ್ ಕಛೇರಿಯ ಜೆಪಿ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

ಕವರ್ಧಾ, ಮೇ.20: ಛತ್ತೀಸ್‌ಗಢದ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಬೈಗಾ ಬುಡಕಟ್ಟು ಸಮುದಾಯದ 25-30 ಜನರು ತೆಂಡು ಎಲೆಗಳನ್ನು ತರಲು ಪಿಕಪ್​​ನಲ್ಲಿ ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಬಹಪಾನಿ ಪ್ರದೇಶದ ಬಳಿ 20 ಅಡಿ ಆಳದ ಕಂದಕಕ್ಕೆ ವಾಹನ

ದುಬೈ, ಯುನೈಟೆಡ್ ಅರಬ್ ಎಮಿರೇಟ್ಸ್(UAE): ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನವಾಗಿದ್ದು ಅದರಲ್ಲಿದ್ದವರು ಯಾರೂ ಬದುಕುಳಿದಿಲ್ಲ ಎಂದು ಸರ್ಕಾರಿ ಮಾಧ್ಯಮ ದೃಢಪಡಿಸಿದೆ. ಹೆಲಿಕಾಪ್ಟರ್ ಪತನಕ್ಕೀಡಾದ ಪ್ರದೇಶ ಕಡಿದಾದ ಕಣಿವೆಯಲ್ಲಿದೆ. ರಕ್ಷಕರು ಅಲ್ಲಿಗೆ ತಲುಪಲು ಇನ್ನೂ ಸಾಧ್ಯವಾಗಿಲ್ಲ. ಇಂದು ಸೂರ್ಯ ಉದಯಿಸುತ್ತಿದ್ದಂತೆ, ರಕ್ಷಕರು ಹೆಲಿಕಾಪ್ಟರ್ ನ್ನು ಸುಮಾರು

ಬೆಂಗಳೂರು: ಐಟಿ ಸಿಟಿ ಬೆಂಗಳೂರಿನಲ್ಲಿ ವಾರಾಂತ್ಯ ನಡೆದ ರೇವ್ ಪಾರ್ಟಿ ಮೇಲೆ ನಗರ ಅಪರಾಧ ದಳ ವಿಭಾಗ ಪೊಲೀಸರು ದಾಳಿ ನಡೆಸಿದ್ದಾರೆ. ಎಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್.ಫಾರ್ಮ್​​​ಹೌಸ್​​ನಲ್ಲಿ ನಡೆಯುತ್ತಿದ್ದ ರೇವ್​​ಪಾರ್ಟಿ ಮೇಲೆ ಸಿಸಿಬಿ ತಂಡ ನಸುಕಿನ ಜಾವ 3 ಗಂಟೆ ಸುಮಾರಿಗೆ ದಾಳಿ ನಡೆಸಿದ್ದು, ದಾಳಿ ವೇಳೆ ಪಾರ್ಟಿಯಲ್ಲಿ

ಬಾಗಲಕೋಟೆ, ಮೇ.20: ರಾಜ್ಯದಲ್ಲಿ ಮಳೆಯಿಂದ ಕೆರೆ, ಹಳ್ಳಗಳು ತುಂಬಿ ಹರಿಯುತ್ತಿದ್ದು, ಅನಾಹುತಗಳು ಕೂಡ ಸಂಭವಿಸುತ್ತಿವೆ. ಇತ್ತೀಚೆಗೆ ಹಾಸನದಲ್ಲಿ ನಾಲ್ವರು, ರಾಮನಗರದಲ್ಲಿ ಮೂವರು ನೀರು ಪಾಲಾಗಿದ್ದರು (Death). ಈಗ ಇದೇ ರೀತಿಯ ಮತ್ತೊಂದು ದುರಂತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಬನಹಟ್ಟಿ ನಗರದ ಹೊರ ವಲಯದಲ್ಲಿರುವ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು

ಸಿಂಗಾಪುರ, ಮೇ. 19: ದಿನದಿಂದ ದಿನಕ್ಕೆ ಸಿಂಗಾಪುರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಒಂದು ವಾರಕ್ಕೆ ಸುಮಾರು 26 ಸಾವಿರ ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ಜನರಿಗೆ ಮಾಸ್ಕ್ ಧರಿಸುವಂತೆ ಸಿಂಗಾಪುರ ಸರ್ಕಾರ ಆದೇಶ ಹೊರಡಿಸಿದೆ. ಕೇವಲ ಒಂದು ವಾರದಲ್ಲಿ 25,900 ಜನರಿಗೆ ಕೊರೊನಾ ಸೋಂಕು ತಗುಲಿದೆ.