ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಮಂಗಳೂರು : ಮುಂಗಾರು ಪೂರ್ವದಲ್ಲಿ ಬಿಟ್ಟು ಬಿಟ್ಟು ಸುರಿಯುವ ಸುರಿಯುತ್ತಿರುವ ಕಾರಣದಿಂದಾಗಿ ದ.ಕ. ಜಿಲ್ಲೆಯಲ್ಲಿ ಅಪಾಯಕಾರಿ ಡೆಂಗ್ಯೂ , ಮಲೇರಿಯಾ ಕಾಯಿಲೆಗೆ ಕಾರಣವಾಗುವ ಸೊಳ್ಳೆಗಳ ಹೆಚ್ಚಳಕ್ಕೆ ಪೂರಕ ವಾತಾವರಣವನ್ನುಂಟು ಮಾಡಿದೆ. ರಾತ್ರಿ ಸ್ವಲ್ಪ ಹೊತ್ತು ಮಳೆ ಹಗಲು ಬಿಸಿಲಿನ ವಾತಾವರಣ ಕೆಲವು ದಿನಗಳಿಂದ ಇದೆ. ಮಳೆ ಬಂದಿದ್ದರೂ ಕುಡಿಯುವ ನೀರಿಗೆ

ರಾಯಚೂರು: ನಗರದ ಮಹಾವೀರ ಚೌಕ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಎಲೆಕ್ಟ್ರಿಕ್‌ ಚಾರ್ಜಿಂಗ್ ಬ್ಯಾಟರಿ ಅಂಗಡಿಗೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆಗೆ ಅಂಗಡಿಯಲ್ಲಿನ ವಸ್ತುಗಳು ಸುಟ್ಟು ಭಸ್ಮವಾಗಿವೆ. ರಾಯಚೂರಿನ ಆರ್.ಕೆ ಭಂಡಾರಿ ‌ಎಂಬುವವರಿಗೆ ಸೇರಿದ ಅಂಗಡಿಗೆ ಬೆಂಕಿ ತಗುಲಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಅಂಗಡಿಯಲ್ಲಿದ್ದ ಕೆಲಸಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರೀ

ಕೊಪ್ಪಳ, ಮೇ 28: ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಕೊಪ್ಪಳ ತಾಲೂಕಿನ ಹೊಸಲಿಂಗಾಪುರದಲ್ಲಿ ನಡೆದಿರುವ ಘಟನೆ ನಡೆದಿದೆ. ರಾಜೇಶ್ವರಿ (50), ವಸಂತಾ (28), ಸಾಯಿಧರ್ಮತೇಜ್ (5) ಮೃತ ದುರ್ದೈವಿಗಳು. ವಸಂತಾ ಮನೆ ಒಡತಿ. ವಸಂತಾ  ಅವರ ತಾಯಿ ರಾಜೇಶ್ವರಿ, ಮಗ ಸಾಯಿಧರ್ಮತೇಜ್. ಆಂಧ್ರ ಪ್ರದೇಶದ

ರಂಜೀತ್ ಕೊಲೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ್​ ರಹೀಮ್​(Gurmeet Ram Rahim) ರನ್ನು ಹೈಕೋರ್ಟ್​ ಖುಲಾಸೆಗೊಳಿಸಿದೆ. ರಂಜೀತ್​ ಸಿಂಗ್ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯ ಗುರ್ಮೀತ್​ ರಾಮ್ ರಹೀಮ್ ಸೇರಿ ಒಟ್ಟು ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಈ ಕೊಲೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ರಾಮ್​ ರಹೀಮ್​

ಬೆಂಗಳೂರು: ಹಾಸನದ ಪ್ರಗತಿಪರ ಸಂಘಟನೆಗಳ ಒಕ್ಕೂಟ’ವು ಮೇ 30ರಂದು ಹಮ್ಮಿಕೊಂಡಿರುವ ‘ಹಾಸನದೆಡೆಗೆ ನಮ್ಮ ನಡಿಗೆ’ ಹಾಸನ ಚಲೋ ಆಂದೋಲನಕ್ಕೆ ‘ನಾವೆದ್ದು ನಿಲ್ಲದಿದ್ದರೆ’ ಸಂಘಟನೆ ಬೆಂಬಲ ಸೂಚಿಸಿದೆ. ಈ ಕುರಿತು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ವಿವರಣೆ ನೀಡಿದ ಸಂಘಟನೆಯ ಪದಾಧಿಕಾರಿಗಳು, “ನಾವೆದ್ದು ನಿಲ್ಲದಿದ್ದರೆ ಎಂಬುದು ಮಹಿಳೆಯರಿಗೆ ಮತ್ತು ಮಾನವಹಕ್ಕುಗಳಿಗೆ ಸಂಬಂಧಪಟ್ಟ ವಿಷಯಗಳ ಬಗ್ಗೆ

ನವದೆಹಲಿ: ಇಂಡಿಯಾ ಒಕ್ಕೂಟವು ವೋಟ್ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿದೆ ಎಂದು ಆರೋಪಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷಗಳು ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಇತರ ಹಿಂದುಳಿದ ವರ್ಗಗಳ (OBC) ಸಾಂವಿಧಾನಿಕ ಹಕ್ಕುಗಳನ್ನು ದುರ್ಬಲಗೊಳಿಸುತ್ತಿವೆ ಎಂದು ಟೀಕಿಸಿದ್ದಾರೆ. ಸಮಾಜದ ಈ ವರ್ಗಗಳ ಜನರನ್ನು ರಕ್ಷಿಸುವ

ಐಜ್ವಾಲ್ ಜಿಲ್ಲೆ(ಮಿಜೋರಂ): ಮಿಜೋರಾಂನಲ್ಲೂ ರೆಮಲ್ ಚಂಡಮಾರುತದ ಅಬ್ಬರ ಹೆಚ್ಚಾಗಿದೆ, ಇಂದು ಮಂಗಳವಾರ ಬೆಳಗ್ಗೆ ಎಡೆಬಿಡದೆ ಸುರಿಯುತ್ತಿರುವ ಮಳೆಯ ನಡುವೆ ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ಕಲ್ಲಿನ ಕ್ವಾರಿ ಕುಸಿದು 10 ಮಂದಿ ಮೃತಪಟ್ಟು ಹಲವರು ಕಾಣೆಯಾಗಿದ್ದಾರೆ. ಐಜ್ವಾಲ್ ಪಟ್ಟಣದ ದಕ್ಷಿಣ ಹೊರವಲಯದಲ್ಲಿರುವ ಮೆಲ್ತುಮ್ ಮತ್ತು ಹ್ಲಿಮೆನ್ ನಡುವಿನ ಪ್ರದೇಶದಲ್ಲಿ ಬೆಳಗ್ಗೆ 6

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತ ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ನಿರೀಕ್ಷಣಾ ಮತ್ತು ಸಾಮಾನ್ಯ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲದಯ ನ್ಯಾಯಾಧೀಶರಾದ ಸಂತೋಷ್‌

ಪೋರ್ಟ್ ಮೊರ್‌ಸ್ಬಿ, ಮೇ 27: ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಯಾನಕ ಭೂಕುಸಿದಿಂದ 2,000ಕ್ಕೂ ಅಧಿಕ ಮಂದಿ ಮಣ್ಣಿನಲ್ಲಿ ಹಾಗೂ ಅವಶೇಷಗಳ ಅಡಿಯಲ್ಲಿ ಜೀವಂತ ಸಮಾಧಿ ಆಗಿದ್ದಾರೆ. ಭಾನುವಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೇಂದ್ರವು ಸುಮಾರು 670 ಮಂದಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿತ್ತು. ಆದರೀಗ ಇಂದು ವಿಶ್ವಸಂಸ್ಥೆಗೆ ಬರೆದ ಪತ್ರದಲ್ಲಿ

ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ಅಜ್ಞಾತರಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ವಿದೇಶದಲ್ಲಿದ್ದುಕೊಂಡೇ ವಿಡಿಯೋ ಬಿಡುಗಡೆ ಮಾಡಿರುವ ಪ್ರಜ್ವಲ್ ರೇವಣ್ಣ, "ನಾನು ವಿದೇಶಕ್ಕೆ ತೆರಳುವುದು ಏ.26 ರಂದೇ ಪೂರ್ವನಿಗದಿಯಾಗಿತ್ತು" ಎಂದು ಹೇಳಿದ್ದಾರೆ. ಇದೇ ವೇಳೆ ಮೇ.31 ಕ್ಕೆ ಎಸ್