ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಲಖನೌ: ಉತ್ತರಪ್ರದೇಶದ ಶಹಜಹಾನ್‌ಪುರದಲ್ಲಿ ಬಸ್'ಗೆ ಟ್ರಕ್ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆಂದು ಭಾನುವಾರ ತಿಳಿದುಬಂದಿದೆ. ಓವರ್ ಲೋಡ್ ಡಂಪರ್ ನಿಯಂತ್ರಣ ತಪ್ಪಿ ಬಸ್ ಮೇಲೆ ಉರುಳಿಬಿದ್ದಿದ್ದು, ಅಪಘಾತದಲ್ಲಿ 11 ಮಂದಿ ಸ್ಥಳದಲ್ಲೇ ದುರ್ಮರಣವನ್ನಪ್ಪಿದ್ದಾರೆ. ಅಲ್ಲದೆ, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ. ಇವರೆಲ್ಲರೂ

ನವದೆಹಲಿ, ಮೇ 26 : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತೊಮ್ಮೆ ಭಾರತ ಬಣದ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಹಾಸ್ಯಮಯ ಪ್ರತಿಕ್ರಿಯೆಯನ್ನು ನೀಡಿದ ಅವರು, "ಇದು 'ಕೌನ್ ಬನೇಗಾ ಕರೋಡ್ಪತಿ' ಎಂದು ಕೇಳುವಂತಿದೆ, ಎಂದು ಖರ್ಗೆ ಅವರು ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ ನಡೆಸಿಕೊಡುವ

ನವದೆಹಲಿ, ಮೇ 26: ಶನಿವಾರ ತಡರಾತ್ರಿ ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ ಏಳು ನವಜಾತ ಶಿಶುಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿನ ಬೇಬಿ ಕೇರ್ ಸೆಂಟರ್‌ನಲ್ಲಿ ರಾತ್ರಿ 11.32 ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು

ಮುಂಬೈ, ಮೇ 26 : ಆದಾಯ ತೆರಿಗೆ ಇಲಾಖೆ ನಾಸಿಕ್‌ನಲ್ಲಿರುವ ಪ್ರಸಿದ್ಧ ಜುವೆಲ್ಲರಿ ಅಂಗಡಿ ಮೇಲೆ ದಾಳಿ ನಡೆಸಿ 26 ಕೋಟಿ ರೂ. ನಗದು ಹಣವನ್ನು ಜಪ್ತಿ ಮಾಡಿದೆ. ಅಕ್ರಮ ವಹಿವಾಟು ನಡೆಸಿದ ಆರೋಪದ ಮೇಲೆ ಸುರಾನಾ ಜ್ಯುವೆಲರ್ಸ್ ಮೇಲೆ ದಾಳಿ ನಡೆಸಿದೆ. ಈ ವೇಳೆ 26 ಕೋಟಿ ರೂ.

ಹಾಸನ, ಮೇ 26: ಬೆಳ್ಳಂಬೆಳಗ್ಗೆ ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿ NH 75ನಲ್ಲಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಗು ಸೇರಿದಂತೆ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಮತ್ತು ಕಾರು ಚಾಲಕ

ಮೈಸೂರು, (ಮೇ 26): ರೈತ ಮಹಿಳೆ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಅಲ್ಲಿನ ಮೂರ್ಬಾಂದ್ ಬೆಟ್ಟದ ಸಮೀಪದಲ್ಲಿ ನಡೆದಿದೆ. ಹುಲಿ ದಾಳಿಯಿಂದ ಮಹಿಳೆ ಸಾವನ್ನಪ್ಪಿದ್ದಾಳೆ. ಚಿಕ್ಕಿ (48) ಹುಲಿ ದಾಳಿಗೆ ಬಲಿಯಾದ ಮಹಿಳೆ. ಎಚ್.ಡಿ.ಕೋಟೆ ತಾಲ್ಲೂಕು ಎನ್.ಬೇಗೂರು ಸಮೀಪದ ಮಾಳದ ಹಾಡಿ ನಿವಾಸಿ. ಮೇಕೆ ಮೇಯಿಸುತ್ತಿದ್ದಾಗ ಹಠಾತ್

ಉಡುಪಿ, ಮೇ 26: ಗ್ಯಾಂಗ್​ವಾರ್ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳು ಇಂದು (ಮೇ 26) ಕಾಪು ಪೊಲೀಸರಿಗೆ ಶರಣಾಗಿದ್ದಾರೆ. ಮೂವರು ಅರೋಪಿಗಳನ್ನು ಕಾಪು ಪೋಲೀಸರು ಉಡುಪಿ ನಗರ ಪೋಲಿಸರಿಗೆ ಒಪ್ಪಿಸಿದ್ದಾರೆ. ಗರುಡ ಗ್ಯಾಂಗ್​ನ ಮಜೀದ್, ಅಲ್ಫಾಜ್, ಶರೀಫ್ ಶರಣಾದವರು. ಗ್ಯಾಂಗ್ ವಾರ್​ ಯಾಕೆ? ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿ ಮೇ 18ರ ಮುಂಜಾನೆ

ಮಂಗಳೂರು: ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಅಲ್ಲ ಗೆಳೆಯಲು ಸಾಧ್ಯವೇ?ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ಅನ್ನು ದಾಖಲಿಸಲಾಗಿದ್ದು, ಅದರಂತೆ ಕ್ರಮ‌

ಬೆಂಗಳೂರು: ಇತ್ತೀಚೆಗೆ ನಗರದ ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಟಾಲಿವುಡ್ ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಮೇ.27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ರೇವ್ ಪಾರ್ಟಿ ವಿಚಾರ ಬಯಲಾಗುತ್ತಿದ್ದಂತೆಯೇ ನಟಿ ಹೇಮಾ ಅವರು ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು. ವೀಡಿಯೋದಲ್ಲಿ ತಾವು

ದಾವಣಗೆರೆ: ಜಿಲ್ಲೆಯ ಚನ್ನಗಿರಿ ಪ್ರಟ್ಟಣದಲ್ಲಿ ನಿನ್ನೆ ಲಾಕಪ್ ಡೆತ್ (lock up death) ಸಂಭವಿಸಿದೆ ಎಂಬ ಆರೋಪ ಕೇಳಿಬರುತ್ತಿದೆ. ನಿನ್ನೆ ವ್ಯಕ್ತಿಯೊಬ್ಬನನ್ನು ವಿಚಾರಣೆಗೆಂದು ಪೊಲೀಸರು ಇಲ್ಲಿ ಕಾಣುತ್ತಿರುವ ಪೊಲೀಸ್ ಠಾಣೆಗೆ ಕರೆತಂದಾಗ ಅವನು ಕುಸಿದುಬಿದ್ದು ಸಾವನ್ನಪ್ಪಿದ್ದಾನೆ. ಪೊಲೀಸರು ಬಂಧಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಕಾರಣ ಅವನು ಸತ್ತಿದ್ದಾನೆ ಎಂದು