ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಮಣಿಪಾಲ:ಜು 4.ಉಡುಪಿ ಮಣಿಪಾಲ ಮುಖ್ಯ ರಸ್ತೆಯ ಬದಿಯಲ್ಲಿ ಗುಡ್ಡ ಜರಿತ ಉಂಟಾಗಿದೆ. ಮಣಿಪಾಲದ ಏರುಪ್ರದೇಶದಲ್ಲಿ ಉಡುಪಿಗೆ ಬರುವಾಗ ರಸ್ತೆ ತಿರುವಿನಲ್ಲಿ ಗುಡ್ಡದ ಮಣ್ಣಿಲು ರಸ್ತೆಗೆ ಕುಸಿದಿದೆ. ಸೋಮವಾರದಿಂದ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನಿರಂತರ ಮಳೆಯಿಂದ ಮಣ್ಣು ಹದಗೊಂಡು ಗುಡ್ಡ ಜರಿಯುತ ಉಂಟಾಗಿದೆ.

ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್(LPG Cylinder) ಬೆಲೆ ಏರಿಕೆಯಾಗಿದೆ. ತೈಲ ಕಂಪನಿಗಳು ಸಿಲಿಂಡರ್ ಬೆಲೆಯನ್ನು 7 ರೂ. ಹೆಚ್ಚಿಸಿವೆ. ಆದರೆ, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇದರ ಬೆಲೆ ದೀರ್ಘಕಾಲ ಸ್ಥಿರವಾಗಿದೆ. ಈಗ ದೆಹಲಿಯಲ್ಲಿ ವಾಣಿಜ್ಯ ಅನಿಲ ಸಿಲಿಂಡರ್‌ನ ಚಿಲ್ಲರೆ ಬೆಲೆ ಅಂದರೆ 19 ಕೆಜಿ

ಬೆಂಗಳೂರು : ಪತಿ ಹಾಗೂ ಆತನ ಗರ್ಲ್ ಫ್ರೆಂಡ್  ವಿರುದ್ದ ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆಬಂದಿದೆ. ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೆಗ್ಗನಹಳ್ಳಿ ನಿವಾಸಿ ಪವಿತ್ರಾ ಮೃತ ಮಹಿಳೆ. ಡೆತ್ ನೋಟ್ ಬರೆದಿಟ್ಟು ವಾಟ್ಸಾಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾಳೆ.

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಕಾಂಗ್ರೆಸ್ ನೀಡಿದ್ದ ಐದು ಭರವಸೆಗಳನ್ನು ಜಾರಿಗೊಳಿಸಲು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ನಾಯಕರು ಇಂದು ಮಂಗಳವಾರ ಬೆಳಗ್ಗೆ ವಿಧಾನ ಸಭೆ ಕಲಾಪ ಸೇರಿದಾಗಲೇ ತೀವ್ರ ಪ್ರತಿಭಟನೆ ಮಾಡಿದ್ದರಿಂದ  ಸ್ಪೀಕರ್ ಅವರು ಕಲಾಪವನ್ನು ಅಪರಾಹ್ನ 3 ಗಂಟೆಗೆ ಮುಂದೂಡಿದರು. ಇಂದು ಬೆಳಗ್ಗೆ ಕಲಾಪ

ಮುಂಬೈ: ಭಾರತದ ನಂಬರ್ ಒನ್ ಉದ್ಯಮಿ ಮುಕೇಶ್ ಅಂಬಾನಿ ಸಹೋದರ ಅನಿಲ್ ಅಂಬಾನಿಯವರ ಪತ್ನಿ ಟೀನಾ ಅವರು ಜುಲೈ 4ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ. ಉದ್ಯಮಿ ಅನಿಲ್ ಅಂಬಾನಿ ಅವರ ಪತ್ನಿ ಟೀನಾ ಅಂಬಾನಿ 1999 ರ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಅಡಿಯಲ್ಲಿ ದಾಖಲಾಗಿರುವ ವಿದೇಶಿ ವಿನಿಮಯ

ಬೆಂಗಳೂರು: ಇತ್ತ ಸದನದಲ್ಲಿ ಆಡಳಿತ ಮತ್ತು ವಿಪಕ್ಷ ನಾಯಕರು ಕದನ ಮುಂದುವರಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರೂ, ಫ್ರೀಡಂ ಪಾರ್ಕ್ ನಲ್ಲಿ ಸರ್ಕಾರ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದರೂ ಅತ್ತ ಆಡಳಿತ, ವಿಪಕ್ಷ ನಾಯಕರು ಒಟ್ಟು ಸೇರಿ ಖುಷಿಯಿಂದ ಸಮಯ ಕಳೆದಿದ್ದಾರೆ. ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಭುವನೇಶ್ವರ: ಒಡಿಸ್ಸಾ ರಾಜ್ಯಪಾಲ ಪ್ರೊ. ಗಣೇಶೀಲಾಲ್ ಆಮಂತ್ರಣದ ಮೇರೆಗೆ ಭಾವಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಶಿಷ್ಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೊಡಗೂಡಿ ಭಾನುವಾರ ರಾಜಭವನಕ್ಕೆ ತೆರಳಿದರು. ರಾಜ್ಯಪಾಲರಿಗೆ ಶ್ರೀಗಳು ಗೀತಾ ಲೇಖನ ಯಜ್ಞ ಅಭಿಯಾನದ ವಿಚಾರ ತಿಳಿಸಿದರು. ಶ್ರೀಗಳ ಕಾರ್ಯಕ್ರಮವನ್ನು ರಾಜ್ಯಪಾಲರು ಶ್ಲಾಘಿಸಿದರು.     ಶ್ರೀಗಳು ರಾಜ್ಯಪಾಲರಿಗೆ ಗೀತಾ ಲೇಖನ

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದು, ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ನೇರವಾಗಿ ಚಿಕ್ಕಬಳ್ಳಾಪುರಕ್ಕೆ ತೆರಳಿರುವ ರಾಷ್ಟ್ರಪತಿ ಮುರ್ಮು ಅವರು, ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಮಳೆಯಿಂದಾಗಿ ಉತ್ಪಾದನಾ ಕೇಂದ್ರಗಳಿಂದ ಪೂರೈಕೆ ಸ್ಥಗಿತಗೊಂಡ ಕಾರಣ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ  ಟೊಮೆಟೊ ರಿಟೇಲ್ ಬೆಲೆ ಕೆಜಿಗೆ 140 ರೂ.ಗೆ ಏರಿಕೆಯಾಗಿದೆ. ಏಷ್ಯಾದ ಅತಿದೊಡ್ಡ ಸಗಟು ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಾದ ಆಜಾದ್‌ಪುರ ಮಂಡಿಯಲ್ಲಿ ಸೋಮವಾರ ಟೊಮೆಟೊ ವೋಲ್ ಸೇಲ್ ಬೆಲೆ ಗುಣಮಟ್ಟವನ್ನು

ಬೆಂಗಳೂರು: ಬಿಟ್ ಕಾಯಿನ್ (Bitcoin scam) ಹಗರಣಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಮರುಜೀವ ಸಿಕ್ಕಂತಾಗಿದೆ. ರಾಜ್ಯ ಸರ್ಕಾರ ಬಿಟ್ ಕಾಯಿನ್ ಹಗರಣ ಬಗ್ಗೆ ವಿಶೇಷ ತನಿಖಾ ತಂಡದಿಂದ(SIT probe)l ಮರು ತನಿಖೆ ಆದೇಶ ನೀಡಿದೆ. ಪ್ರಕರಣದ ಮೊದಲ ಹಂತವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದರು.