``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ನವದೆಹಲಿ: ದೆಹಲಿಯ 'ಮೋಸ್ಟ್ ವಾಂಟೆಂಡ್' ಗ್ಯಾಂಗ್ ಸ್ಟರ್ ದೀಪಕ್ ಬಾಕ್ಸರ್ ನನ್ನು ಮೆಕ್ಸಿಕೋದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಬಾಲಿವುಟ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಲ್ಲಿ ಗುರುತಿಸಿಕೊಂಡಿದ್ದ ದೀಪಕ್ ಬಾಕ್ಸರ್ ನನ್ನು ಮೆಕ್ಸಿಕೋ ಅಧಿಕಾರಿಗಳ ನೆರವಿನೊಂದಿಗೆ ದೆಹಲಿ ಪೊಲೀಸರ ತಂಡ ವಿಶೇಷ ಕಾರ್ಯಾಚರಣೆ

ಭುವನೇಶ್ವರ್:ಮಾ 3. ಒಡಿಶಾದ ಭುವನೇಶ್ವರ್‌‌ನಲ್ಲಿ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದ ವೇಳೆ ಎಸೆತವೊಂದಕ್ಕೆ 'ನೋ ಬಾಲ್‌' ಎಂದು ಅಂಪೈರ್ ತೀರ್ಪು ನೀಡಿರುವುದಕ್ಕೆ ಆತನನ್ನು ಆಟಗಾರ ಕೊಲೆ ಮಾಡಿರುವ ಘಟನೆ ನಡೆದಿದೆ. ಒಡಿಶಾದ ಕಟಕ್‌ ನಲ್ಲಿ ಬ್ರಹ್ಮಪುರ ಮತ್ತು ಶಂಕರಪುರ ಎಂಬ ಎರಡು ತಂಡಗಳ ನಡುವೆ ಕ್ರಿಕೆಟ್‌ ಮ್ಯಾವ್‌ ನಡೆಯುತ್ತಿದ್ದು, ಈ ಪಂದ್ಯಕ್ಕೆ

ಕೋಯಿಕ್ಕೋಡ್: ಎಕ್ಸ್‌ಪ್ರೆಸ್‌ ರೈಲಿನಲ್ಲಿ ವ್ಯಕ್ತಿಯೊಬ್ಬ ಜಗಳದ ನಂತರ ಸಹ-ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಮತ್ತು ಎಂಟು ಮಂದಿ ಗಾಯಗೊಂಡ ಗಂಟೆಗಳ ನಂತರ ಕೋಯಿಕ್ಕೋಡ್‌ನ ಎಲತ್ತೂರ್ ರೈಲು ನಿಲ್ದಾಣದ ಬಳಿ ಹಳಿಯಲ್ಲಿ ಮಹಿಳೆ ಮತ್ತು ಒಂದು ವರ್ಷದ ಮಗುವಿನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರು ತುರ್ತು ಸರಪಳಿಯನ್ನು ಎಳೆದ ನಂತರ

ಸೂರತ್: 2019ರ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದ್ದು, ಮುಂದಿನ ವಿಚಾರಣೆಯನ್ನು ಮೇ 3ಕ್ಕೆ ನಿಗದಿಪಡಿಸಿದೆ. ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ನೀಡಿರುವ ಶಿಕ್ಷೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಇಂದು ಮೇಲ್ಮನವಿ ಸಲ್ಲಿಸಿದರು.

ಬೆಂಗಳೂರು: ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಬಿಜೆಪಿ ಎರಡು ಮನಸ್ಸಿನಲ್ಲಿದೆ. ಟಿಕೆಟ್ ನೀಡದಿರಲು ಪಕ್ಷವು ಈಗಾಗಲೇ ನಿರ್ಧಾರ ಕೈಗೊಂಡಿದ್ದು, ಹೊಸ ಮುಖಕ್ಕಾಗಿ ಹುಡುಕಾಟ ನಡೆಸುತ್ತಿದೆ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ. ಈಶ್ವರಪ್ಪ ಬಿಜೆಪಿಯಲ್ಲಿ ಕುರುಬ ಸಮುದಾಯದ ಪ್ರಮುಖ ನಾಯಕರಾಗಿದ್ದು, ಕಟ್ಟಾ

ಬೆಂಗಳೂರು: ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಗರಿಗೆದರಿದೆ. ಅಸಮಾಧಾನಗೊಂಡ ಶಾಸಕರು, ಮಾಜಿ ಶಾಸಕರು, ಬೇರೊಂದು ಪಕ್ಷಕ್ಕೆ ನೆಗೆಯುತ್ತಿದ್ದಾರೆ. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿ ಇದು ಪ್ರತಿನಿತ್ಯ ಕಂಡುಬರುತ್ತಿದೆ. ಕೂಡ್ಲಿಗೆ ಶಾಸಕರಾದ ಎನ್. ವೈ. ಗೋಪಾಲಕೃಷ್ಣ ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಸಾಂಬಾ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಡ್ರೋನ್‌ನಿಂದ ಬೀಳಿಸಲಾಗಿದೆ ಎಂದು ಶಂಕಿಸಲಾದ ಪ್ಯಾಕೇಜ್‌ನಿಂದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕ ಸಾಮಗ್ರಿಗಳ ಸಂಗ್ರಹವನ್ನು ಪೊಲೀಸರು ಸೋಮವಾರ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಮುಂಜಾನೆ ರಖ್ ಬರೋತಿಯ ರೈಲ್ವೆ ಮಾರ್ಗದ ಬಳಿ ಪತ್ತೆಯಾದ ಪ್ಯಾಕೇಜ್‌ನಲ್ಲಿ ಚೀನಾ ನಿರ್ಮಿತ ಮೂರು

ರಾಂಚಿ (ಜಾರ್ಖಂಡ್): ಜಾರ್ಖಂಡ್ ರಾಜ್ಯದ ಛತ್ರದಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿದ್ದು, ಐವರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ. ಹತ್ಯೆಗೀಡಾದ ಐವರ ಪೈಕಿ ಇಬ್ಬರಿಗೆ ತಲಾ 25 ಲಕ್ಷ ರೂ ಹಾಗೂ ಮೂವರ ಪತ್ತೆಗೆ ತಲಾ 5 ಲಕ್ಷ ರೂ ಇನಾಮು ಘೋಷಣೆ ಮಾಡಲಾಗಿತ್ತು. ಸಿಆರ್‌ಪಿಎಫ್ ಕೋಬ್ರಾ ಬೆಟಾಲಿಯನ್, ಜೆಎಪಿ ಮತ್ತು ಐಆರ್‌ಬಿ ಜೊತೆಗೆ ಪಲಾಮು

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ರೋಸ್ ಅವೆನ್ಯೂ ಕೋರ್ಟ್ ಏಪ್ರಿಲ್ 17 ರವರೆಗೆ ವಿಸ್ತರಿಸಿದೆ. ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ಎಎಪಿ ನಾಯಕನ ನ್ಯಾಯಾಂಗ ಬಂಧನ ವಿಸ್ತರಿಸುವಂತೆ ಕೋರಿ

ವಾಷಿಂಗ್ಟನ್:ಏ 02 , ಶುಕ್ರವಾರದ ಮುಂಜಾನೆಯಿಂದ ಶನಿವಾರದವರೆಗೆ ಅಮೆರಿಕದ ದಕ್ಷಿಣ ಮತ್ತು ಮಧ್ಯ ಪಶ್ಚಿಮ ಭಾಗದಲ್ಲಿ ಬೀಸಿದ ಭೀಕರ ಸುಂಟರಗಾಳಿ ಮತ್ತು ಚಂಡಮಾರುತಕ್ಕೆ ಕನಿಷ್ಠ 21ಸಾವನ್ನಪ್ಪಿ, ಹಲವರು ಗಂಭೀರ ಗಾಯಗೊಂಡು, ಅಪಾರ ಆಸ್ತಿ ಪಾಸ್ತಿ ನಷ್ಟ ಉಂಟುಮಾಡಿದ ಘಟನೆ ನಡೆದಿದೆ. ರಾಷ್ಟ್ರೀಯ ಹವಾಮಾನ ಸೇವೆಯ ಚಂಡಮಾರುತ ಮುನ್ಸೂಚನಾ ಕೇಂದ್ರದ ಮಾಹಿತಿ