ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ನವದೆಹಲಿ: ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಮವಾರ ದೆಹಲಿ ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅವಧಿ ಇಂದು ಮುಗಿದಿದ್ದು, ಆರೋಪಿಯನ್ನು ರೋಸ್ ಅವೆನ್ಯೂ ಕೋರ್ಟ್ ಗೆ

ಬೆಂಗಳೂರು: ಲೋಕಸಭೆ ಚುನಾವಣೆ ಸಮಯದಲ್ಲಿ ಕರ್ನಾಟಕ ರಾಜ್ಯ ವಿದ್ಯುತ್​ಚ್ಛಕ್ತಿ ನಿಯಂತ್ರಣ ಆಯೋಗ(KERC)ಎಲ್ಲ ವರ್ಗದ ವಿದ್ಯುತ್​ ಬಳಕೆದಾರರಿಗೆ ಗುಡ್​ ನ್ಯೂಸ್​ ನೀಡಿದೆ. ಕೆಇಆರ್ ಸಿ ವಿದ್ಯುತ್​ ದರ ಇಳಿಕೆ ಮಾಡಿ ಸೋಮವಾರ ಆದೇಶ ಹೊರಡಿಸಿದ್ದು, 100 ಯುನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದೆ. ಗೃಹ ಬಳಕೆಯಲ್ಲಿ 100 ಯುನಿಟ್​​ಗಿಂತ

ನವದೆಹಲಿ: ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸುಮಾರು 3,500 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ನೀಡಲಾಗಿದ್ದ ನೋಟಿಸ್‌ಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇದರಿಂದ ಕಾಂಗ್ರೆಸ್ ಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಆದಾಯ ತೆರಿಗೆ ಇಲಾಖೆ ಕಳುಹಿಸಿದ್ದ

ಬೆಂಗಳೂರು : ಮಂಡ್ಯ ಸಂಸದೆ ಸುಮಲತಾ ಅವರನ್ನು ಮಾಜಿ ಸಿಎಂ, ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ. ಕುಮಾರಸ್ವಾಮಿ ಹಾಗೂ ಸುಮಲತಾ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ನಿನ್ನೆಯಷ್ಟೇ ಸಂಸದೆ ಸುಮಲತಾ ತಮ್ಮ ರಾಜಕೀಯ ನಿರ್ಧಾರವನ್ನು ಮಂಡ್ಯದಲ್ಲಿಯೇ ತಿಳಿಸುತ್ತೇನೆ ಎಂದು ಪ್ರಕಟಿಸಿದ್ದರು.

ಚಿತ್ರದುರ್ಗ, ಮಾರ್ಚ್​ 31: ನಗರದಲ್ಲಿ ಬಿಜೆಪಿ (BJP) ಸಭೆ ಬಳಿಕ ಗುಂಪು ಘರ್ಷಣೆ ಉಂಟಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ತುಮಕೂರು ಜಿಲ್ಲೆಯ ಪಾವಗಡ ಬಿಜೆಪಿ ಕಾರ್ಯಕರ್ತ ಚೈತನ್ಯ ಮೇಲೆ ಪಾವಗಡ ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಮಧುನಿಂದ ಹಲ್ಲೆ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಪೋಸ್ಟ್ ಹಿನ್ನೆಲೆ

ಬಂಟ್ವಾಳ: ಮಾ 31. ವಂಚನೆ ಆರೋಪ ಎದುರಿಸುತ್ತಿದ್ದ ಯುವಕನೋರ್ವನ ಮೃತದೇಹ ಬಂಟ್ವಾಳದ ವಾಮದಪದವಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯುವಕನದ್ದು ಆತ್ಮಹತ್ಯೆ ಎನ್ನಲಾಗುತ್ತಿದ್ದರೂ, ಸಾಮಾಜಿಕ ಜಾಲತಾಣದಲ್ಲಿ ಯುವಕನ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ವಾಮದಪದವು ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ ಆತ್ಮಹತ್ಯೆ ಮಾಡಿಕೊಂಡ ಯುವಕ. ಪದ್ಮನಾಭ ಸಾಮಂತನ ವಿರುದ್ಧ ಕಳೆದರಡು ದಿನಗಳ

ಉಡುಪಿ: ಮಾ,31: ಮಾ. 27ರಂದು ನಾಪತ್ತೆಯಾಗಿದ್ದ ಆಟೋರಿಕ್ಷಾ ಚಾಲಕ ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದು, ಮೃತದೇಹವು ಬ್ರಹ್ಮಾವರ ಉಪ್ಪೂರು ಮಾಯಾಡಿ ಎಂಬಲ್ಲಿರುವ ಸ್ವರ್ಣಾ ನದಿಯಲ್ಲಿ ಪತ್ತೆಯಾಗಿದೆ. ಮೂಡು ತೋನ್ಸೆ ಗ್ರಾಮದ ಮುಹಮ್ಮದ್ ಫೈಝಲ್(36) ಎಂಬುವವರು ಮಾ. 27ರಂದು ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಮನೆಯಿಂದ ಹೊರಟವರು ಬಳಿಕ ನಾಪತ್ತೆಯಾಗಿದ್ದರು. ನಂತರ ಅವರಿಗಾಗಿ ಹುಡುಕಾಟ

ಬೆಂಗಳೂರು ಗ್ರಾಮಾಂತರ, ಮಾ.31: ಕ್ರಷರ್ ಮಾಲೀಕನ ಮನೆ ಮೇಲೆ ಐಟಿ(IT) ಇಲಾಖೆ ಅಧಿಕಾರಿಗಳು ಇಂದು(ಮಾ.31) ದಾಳಿ ನಡೆಸಿದ್ದು, 1.20 ಕೋಟಿ ನಗದು ಹಾಗೂ 800 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರ ಆಪ್ತ ಸಹಾಯಕ ಮಂಜುನಾಥ್​ ಎಂಬುವವರ ಅಳಿಯ ಆಗಿರುವ ಲೋಕೇಶ್,

ದೆಹಲಿ ಮಾರ್ಚ್ 31: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಬಿಜೆಪಿಯ ದಿಗ್ಗಜ ಹಾಗೂ ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿ (L K Advani) ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು (Bharat Ratna) ಭಾನುವಾರ ಅವರ ನಿವಾಸದಲ್ಲಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಉಪರಾಷ್ಟ್ರಪತಿ ಜಗದೀಪ್

ದ್ವಾರಕಾ: ಗುಜರಾತ್‌ ರಾಜ್ಯದ ದ್ವಾರಕಾದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹತ್ತಿಕೊಂಡಿದ್ದು ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ಏಳು ತಿಂಗಳ ಹೆಣ್ಣು ಮಗು, ಪತಿ-ಪತ್ನಿ ಹಾಗೂ ಅಜ್ಜಿ ಸೇರಿ ನಾಲ್ವರು ಸಜೀವ ದಹನವಾಗಿದ್ದಾರೆ. ಇಂದು ನಸುಕಿನ ಜಾವ 3ರಿಂದ 4 ಗಂಟೆ ಸುಮಾರಿಗೆ ಶಾರ್ಟ್