ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಗುರುವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು ಹಳಿಯಲ್ಲಿ ನಿಂತಿತ್ತು. ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಇಳಿದ ನಂತರ ಈ ಘಟನೆ ಸಂಭವಿಸಿದೆ. ಹೀಗಾಗಿ ಘಟನೆಯಲ್ಲಿ ಯಾರೊಬ್ಬರಿಗೂ ಹಾನಿಯಾಗಿಲ್ಲ

ನವದೆಹಲಿ: ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ರಾಷ್ಟ್ರವ್ಯಾಪಿ ಧರಣಿ ನಡೆಸಲು ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯ ಗಡಿ

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಎಚ್ ಮೂಕಳ್ಳಿ ಬಳಿ ಗುರುವಾರ ತರಬೇತಿ ನಿರತ ಲಘು ವಿಮಾನವೊಂದು ಪತನವಾಗಿದ್ದು, ಇಬ್ಬರು ಪೈಲಟ್​ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಜೆಟ್ ವಿಮಾನ ಪತನಗೊಂಡು, ಹೊತ್ತಿ ಉರಿದಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್​ಗಳು ಪ್ಯಾರಾಚೂಟ್ ಬಳಸಿ ವಿಮಾನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ ನಿರ್ಗಮಿತ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ (Rohith Chakrathirtha) ಅವರಿಗೆ ಸಂಕಷ್ಟ ಎದುರಾಗಿದೆ. ಇವರ ವಿರುದ್ಧ ದೂರು ದಾಖಲಿಸುವಂತೆ ಸಮಾನ ಮನಸ್ಕರ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಮನವಿ ಮಾಡಿದೆ. ಒಕ್ಕೂಟವು ಮೇ 29 ರಂದು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿಕೊಂಡಿದೆ. ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ

ಕಾಸರಗೋಡು: ಅಬಕಾರಿ ಇಲಾಖೆಯ ವಿಶೇಷ ತಂಡ ಮತ್ತು ಆದೂರು ಪೊಲೀಸರು ಮಂಗಳವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕಾರು ಮತ್ತು ಮನೆಯೊಂದರಿಂದ ಬೃಹತ್‌ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಮುಳಿಯಾರು ಪಂಚಾಯತ್‌ನ ಕೆಟ್ಟುಂಗಲ್‌ ಕೋಲಾಚಿಯಡ್ಕದ ಮೊಹಮ್ಮದ್‌ ಮುಸ್ತಫ (30) ಎಂಬಾತನನ್ನು ಬಂಧಿಸಿ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿದ ಸ್ಫೋಟಕ ವಸ್ತುಗಳಲ್ಲಿ ಸುಮಾರು

ಬೆಂಗಳೂರು: ಐದು ಗ್ಯಾರೆಂಟಿಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಐದು ಗ್ಯಾರಂಟಿ ಯೋಜನೆಗಳ ಜಾರಿ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ಎಲ್ಲಾ ಸಚಿವರುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಮುಖ್ಯಮಂತ್ರಿಗಳು ಅತ್ಯಂತ ಮಹತ್ವದ

ಬೆಂಗಳೂರು: ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ಕನಿಷ್ಠ ಬೆಂಬಲ ಬೆಲೆ(MSP) ಯೋಜನೆಯಡಿ ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಂದು ಬೆಂಗಳೂರಿನ ತಮ್ಮ ಗೃಹ ಕಚೇರಿ ಕೃಷ್ಣದಲ್ಲಿ ರಾಗಿ ಬೆಳೆಗಾರರು ಮತ್ತು ರೈತ ಸಮುದಾಯಗಳನ್ನು ಭೇಟಿ ಮಾಡಿ ರೈತರ

ಪೂಂಚ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಪೂಂಚ್ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನಾಪಡೆ ಬಂಧನಕ್ಕೊಳಪಡಿಸಿದೆ. ಮೇ 30-31 ರ ಮಧ್ಯರಾತ್ರಿ ಪೂಂಚ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಅನುಮಾನಾಸ್ಪ ಓಡಾಟಗಳು ಕಂಡು ಬಂಂದ ಹಿನ್ನೆಲೆಯಲ್ಲಿ  ಜಮ್ಮು ಮತ್ತು

ಬೆಳ್ತಂಗಡಿ : ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿನಿ ಸಾಲಿಯತ್ (24) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ  ಸಾಲಿಯತ್ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದರು. ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಸಾಲಿಯತ್ ಒಂದು ವರ್ಷದ ಹಿಂದೆ

ಜಮ್ಮು: ಸೇತುವೆ ಮೇಲಿಂದ ಆಳವಾದ ಕಂದರಕ್ಕೆ ಖಾಸಗಿ ಬಸ್  ಬಿದ್ದ ಪರಿಣಾಮ 10 ಪ್ರಯಾಣಿಕರು ದುರ್ಮರಣ ಹೊಂದಿರುವ ಘಟನೆ ಕೇಂದ್ರಾಡಳಿತ ಪ್ರದೇಶ ಜಮ್ಮುವಿನ ಬಳಿ ಇಂದು ಮುಂಜಾನೆ ನಡೆದಿದೆ. ಅಮೃತಸರದಿಂದ ಕತ್ರಾಕ್ಕೆ ತೆರಳುತ್ತಿದ್ದ ಬಸ್ ಆಳವಾದ ಕಂದರಕ್ಕೆ ಬಿದ್ದು, ಈ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಜಮ್ಮು ಜಿಲ್ಲಾಧಿಕಾರಿ