ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಬೆಂಗಳೂರು: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ದುರಂತ ನಡೆದ ಬೆನ್ನಲ್ಲೇ ಬೆಂಗಳೂರಿನ ಸುಮ್ಮನಹಳ್ಳಿ ಜಂಕ್ಷನ್ ರಸ್ತೆಯಲ್ಲಿ ಟ್ರಕ್‌, ಕಾರು ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ ಇಬ್ಬರಿಗೆ ಗಾಯವಾಗಿದ್ದು ಸ್ಥಿತಿ ಗಂಭೀರವಾಗಿದೆ. ಮೃತರನ್ನು ಯೇಸು.ಡಿ ಮತ್ತು ಜೆನ್ನಿಫರ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಆಟೋದಲ್ಲಿದ್ದರು ಎಂದು ತಿಳಿದುಬಂದಿದೆ.

ಭೋಪಾಲ್‌: ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಅವರು ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದ ಹಾಟ್ ಏರ್ ಬಲೂನ್‌ನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂದಸೋರ್‌ನಲ್ಲಿ ನಡೆದಿದ್ದು, ಮೋಹನ್ ಯಾದವ್ ಅವರು ಅಪಾಯದಿಂದ ಪಾರಾಗಿದ್ದಾರೆ. ಶನಿವಾರ ಬೆಳಿಗ್ಗೆ ಮಂದಸೋರ್‌ನ ಗಾಂಧಿ ಸಾಗರ್ ಅರಣ್ಯ ಪ್ರದೇಶದಲ್ಲಿ ಮೋಹನ್ ಯಾದವ್ ಹಾಟ್‌ ಏರ್‌ ಬಲೂನ್‌ನಲ್ಲಿ

ಐಜ್ವಾಲ್:ಸೆ. 13: ಮಿಜೋರಾಂನ ಮೊಟ್ಟಮೊದಲ ರೈಲು ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿಸಿದ್ದಾರೆ. 2015ರಲ್ಲಿ ಪ್ರಾರಂಭವಾದ ರೈಲ್ವೆ ಕಾಮಗಾರಿ ಇದೀಗಪೂರ್ಣಗೊಂಡಿದ್ದು, ಸೈರಾಂಗ್‌ನಿಂದ ದೆಹಲಿ ಸಂಪರ್ಕಿಸುವ ರಾಜಧಾನಿ ಎಕ್ಸ್‌ಪ್ರೆಸ್ ರೈಲು, ಸೈರಾಂಗ್-ಗುವಾಹಟಿ ಎಕ್ಸ್‌ಪ್ರೆಸ್ ಮತ್ತು ಸೈರಾಂಗ್-ಕೋಲ್ಕತ್ತಾ ಎಕ್ಸ್‌ಪ್ರೆಸ್ ರೈಲನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಮಿಜೋರಾಂ ಗುಡ್ಡಗಾಡಿನಿಂದ ಕೂಡಿದ

ಬೆಂಗಳೂರು: ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ 'ಕಾವೇರಿ' ಬಳಿ ಇದ್ದಕ್ಕಿದ್ದಂತೆ ಕಾರಿಗೆ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ಶುಕ್ರವಾರ ನಡೆದಿದೆ. ಇಂದು ಬೆಳಗ್ಗೆ ಹೈಗ್ರೌಂಡ್ಸ್ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಸಾಫ್ಟ್ ವೇರ್‌ ಎಂಜಿನಿಯರ್‌ ಹಾಗೂ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಫ್ಟ್

ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಧಾಕೃಷ್ಣನ್‌ಗೆ ಪ್ರಮಾಣವಚನ ಬೋಧಿಸಿದರು. ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಶುಕ್ರವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು

ಮಂಡ್ಯ: ಮದ್ದೂರು ಪಟ್ಟಣಕ್ಕೆ ಭೇಟಿ ನೀಡಿದ್ದ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ ಗುರುವಾರ (ಸೆ.11) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ

ಬೆಂಗಳೂರು: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ನಾಮನಿರ್ದೇಶನಗೊಂಡ ಡಾ. ಆರತಿ ಕೃಷ್ಣ, ರಮೇಶ್ ಬಾಬು, ಎಫ್. ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್.ಕೆ ಅವರು ವಿಧಾನ ಪರಿಷತ್ ನ ಸದಸ್ಯರಾಗಿ ಪಮಾಣ ವಚನ ಸ್ವೀಕರಿಸಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು

ಉಡುಪಿ, ಸೆ.11: ಉಡುಪಿಯಲ್ಲಿ ನೆಲೆಸಿರುವ ಮಲಯಾಳಿಗಳ ನೂತನ ಸಂಘಟನೆಯಾಗಿರುವ ಕೇರಳ ಸಮಾಜಂ ಉಡುಪಿ ವತಿಯಿಂದ ಮೊದಲ ಓಣಂ ಸಂಭ್ರಮಾಚರಣೆ ಸೆ.14ರ ರವಿವಾರ ಉಡುಪಿಯ ಅಮ್ಮಣ್ಣಿ ರಾಮಣ್ಣ ಸಭಾಭವನದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಸಂಘಟನೆಯ ಅಧ್ಯಕ್ಷ ಅರುಣ್‌ಕುಮಾರ್ ತಿಳಿಸಿದ್ದಾರೆ. ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಗೋವಾದ

ಉಡುಪಿ: ಮದುವೆಗೆ ನಿರಾಕರಿಸಿದ ಕಾರಣಕ್ಕಾಗಿ ಯುವತಿಗೆ ಯುವಕ ಚೂರಿ ಇರಿದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ನಡೆದಿದೆ. ಆರೋಪಿ ಯುವತಿಯನ್ನು ಮದುವೆಯಾಗಬೇಕಾಗಿ ಪೀಡಿಸಿದ್ದಾನೆ. ಇದಕ್ಕೆ ಯುವತಿ ನಿರಾಕರಿಸಿದ್ದಾಳೆ. ಮಾತಿಗೆ ಮಾತು ಬೆಳೆದು ಜಗಳವಾಗಿ ಯುವಕ ಸ್ಥಳದಲ್ಲೇ ಚಾಕುವಿನಿಂದ ಇರಿದಿದ್ದಾನೆ. ಯುವತಿ ರಕ್ಷಿತಾ (24) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಯುವತಿಯನ್ನು