``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಮಾರ್ಚ್ 12ಕ್ಕೆ ಬೆಂಗಳೂರಿನ ರಾಣಿ ಅಬ್ಬಕ್ಕ ಕ್ರೀಡಾಂಗಣ, ಮಹಾಲಕ್ಷ್ಮೀ ಲೇಔಟ್ನಲ್ಲಿ ರಾಣಿ ಅಬ್ಬಕ್ಕ ಉತ್ಸವ 2023 ನಡೆಯಲಿದೆ ಎಂದು ರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಉಪಾಧ್ಯಕ್ಷೆ ಕಾಂತಿ ಶೆಟ್ಟಿ ತಿಳಿಸಿದ್ದಾರೆ. ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಸ್ವಾತಂತ್ರ್ಯ ಹೋರಾಟ, ಪರಕೀಯರ ದಾಳಿಯನ್ನು ಸದೆ ಬಡಿದು,

ಉಡುಪಿ: ಮಾ 07, ಗೆಲ್ಲುವವರನ್ನು ಸೋಲಿಸುವ, ಸೋಲುವವರನ್ನು ಗೆಲ್ಲಿಸುವ ಶಕ್ತಿ ಬಂಟ ಸಮುದಾಯಕ್ಕೆ ಇದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯದರ್ಶಿ ಮತ್ತು ಉಡುಪಿ ಬಂಟರ ಸಂಘದ ಗೌರವಾಧ್ಯಕ್ಷರಾದ ಇಂದ್ರಾಳಿ ಜಯಕರ ಶೆಟ್ಟಿ ಹೇಳಿದ್ದಾರೆ. ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು "ಜಾಗತಿಕ ಬಂಟರ ಸಂಘದ ಮೂಲಕ ಬಂಟರ

ಮುಂಬೈ: ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಡಬ್ಲ್ಯುಪಿಎಲ್  ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಆರ್ ಸಿಬಿ ತಂಡವನ್ನು 9 ವಿಕೆಟ್ ಗಳಿಂದ ಮಣಿಸಿದ್ದು, 2 ನೇ ಗೆಲುವನ್ನು ದಕ್ಕಿಸಿಕೊಂಡಿದೆ. ಸ್ಮೃತಿ ಮಂದಾನ ನಾಯಕತ್ವದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ ತಂಡ 156 ರನ್ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸದ್ಯಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಪುತ್ರ ಮಾಡಾಳ್ ಪ್ರಶಾಂತ್ ಮೇಲೆ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯ ನಂತರ ಅವರ ನಿವಾಸ ಮತ್ತು ಕಚೇರಿಯಲ್ಲಿ ಸಿಕ್ಕಿದ 8 ಕೋಟಿಗೂ ಅಧಿಕ ಲೆಕ್ಕಕ್ಕೆ ಸಿಗದ ನಗದು ಪ್ರಕರಣ ಹಿನ್ನೆಲೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ಆರು ಮಂದಿ

ಬೆಂಗಳೂರು: ಸಚಿವ ವಿ.ಸೋಮಣ್ಣ ಕಾಂಗ್ರೆಸ್‌ ಸೇರ್ಪಡೆಯಾಗುತ್ತಾರೆ ಅನ್ನೋ ಗುಸು ಗುಸು ರಾಜ್ಯ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.  ಈ ಚರ್ಚೆಯ ಬೆನ್ನಲ್ಲೇ ಬೆಂಗಳೂರು ಬಿಜೆಪಿ ನಾಯಕರ ನಡುವೆ ಭಿನ್ನಮತ ಸ್ಫೋಟಗೊಂಡಿದೆ. ಇಷ್ಟು ದಿನ ನಡೆಯುತ್ತಿದ್ದ ಕೋಲ್ಡ್‌ವಾರ್‌ ವಿಜಯಸಂಕಲ್ಪ ಯಾತ್ರೆ ವೇಳೆ ಬಹಿರಂಗಗೊಂಡಿದೆ. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ವೇಳೆ ಆರ್‌.ಅಶೋಕ್

ವಾಷಿಂಗ್ಟನ್: ವಾರ್ಷಿಕ ಆರ್ಥಿಕ ಆದಾಯ ಗುರಿ ತಲುಪುವ ಸಲುವಾಗಿ ಮತ್ತೆ ಟೆಕ್ ದೈತ್ಯ ಮೆಟಾ ಸಂಸ್ಥೆ ತನ್ನ ಸಾವಿರಾರು ಸಿಬ್ಬಂದಿಗಳನ್ನು ವಜಾಮಾಡಲು ಮುಂದಾಗಿದೆ. ಹೌದು.. ಫೇಸ್‌ಬುಕ್ (Facebook) ಹಾಗೂ ಇನ್‌ಸ್ಟಾಗ್ರಾಮ್‌ನ (Instagram) ಮಾತೃಸಂಸ್ಥೆ ಮೆಟಾ (Meta), ಮತ್ತೆ ತನ್ನ ಉದ್ಯೋಗಿಗಳನ್ನು ಕಡಿತಗೊಳಿಸಲು ಯೋಜಿಸಿದ್ದು, ಈ ವಾರದಲ್ಲಿ ಮೆಟಾ ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಲಿದೆ

ನ್ಯೂ ಯಾರ್ಕ್: ಅಮೆರಿಕದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಭಾರತ ಮೂಲದ ಮಹಿಳೆ ಸಾವನ್ನಪ್ಪಿದ್ದು ಆಕೆಯ ಪುತ್ರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಭಾರತ ಮೂಲದ ರೋಮಾ ಗುಪ್ತಾ (63 ವರ್ಷ) ಅವರು ಭಾನುವಾರ ಲಾಂಗ್ ಐಲ್ಯಾಂಡ್‌ನ ರಿಪಬ್ಲಿಕ್ ಏರ್‌ಪೋರ್ಟ್‌ಗೆ ವಾಪಸಾಗುತ್ತಿದ್ದಾಗ ನಾಲ್ಕು ಆಸನಗಳ ಸಿಂಗಲ್ ಎಂಜಿನ್ ಪೈಪರ್ ಚೆರೋಕೀ ವಿಮಾನವು ಬೆಂಕಿಗೆ

ಉಡುಪಿ: ಮಾ 06 ಶಾರದ ಮಂಟಪದಿಂದ ಬೀಡಿನ ಗುಡ್ಡೆ ರಸ್ತೆ ಸುಸ್ಥಿತಿಯಲ್ಲಿದ್ದರೂ ಅದನ್ನು ಅಗೆದು ಕಾಂಕ್ರೀಟೀಕರಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡಿದ್ದಾರೆ. ವಾಹನ ಸಂಚಾರಕ್ಕೆ ಸದೃಢವಾಗಿರುವ ರಸ್ತೆಯನ್ನು ಅಗೆದು ಮರು ಕಾಂಕ್ರೀಟೀಕರಣ ಮಾಡುವುದು

ಬೆಂಗಳೂರು: ಮದುವೆಗೂ ಮುಂಚೆ ಫ್ಯಾಶನ್ ಶೋಗಳಲ್ಲಿ ತೊಡಗಿಸಿಕೊಂಡ ಅದೆಷ್ಟೋ ಮಹಿಳೆಯರು ಮದುವೆ ನಂತರ ಸಂಸಾರ, ಮಕ್ಕಳು ಎಂದು ಬ್ಯುಸಿ ಆಗಿರುತ್ತಾರೆ. ಅಂತಹ ಮಹಿಳೆಯರಲ್ಲಿ ಆಸಕ್ತಿಯನ್ನು ಮುಂದುವರೆಸಲು ನಗರದ ಶಾಂಘ್ರೀಲಾ ಹೋಟೆಲ್‌'ನಲ್ಲಿ ಭಾನುವಾರ ಮಿಸೆಸ್ ಇಂಟರ್‌ನ್ಯಾಶನಲ್ ಸೂಪರ್ ಕ್ವೀನ್ 2023 ಸ್ಪರ್ಧೆಯನ್ನು ನಡೆಸಲಾಯಿತು. ಈ ಸ್ಪರ್ಧೆಯಲ್ಲಿ ವಿವಾಹಿತ ಮಹಿಳೆಯರ ಮಸ್ತ್ ರ‍್ಯಾಂಪ್ ವಾಕ್

ಮಂಗಳೂರು: ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ಮಾರ್ಚ್ 15ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಕಸ್ಟಡಿಗೆ ನೀಡಲಾಗಿದೆ. ಸ್ಫೋಟದಲ್ಲಿ ಗಂಭೀರ ಸುಟ್ಟು ಗಾಯಗೊಂಡಿದ್ದ ಶಂಕಿತ ಉಗ್ರ ಶಾರಿಕ್ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಎರಡೂವರೆ ತಿಂಗಳ ಬಳಿಕ ಇಂದು ಆತ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ಡಿಸ್ಚಾರ್ಜ್ ಮಾಡಲಾಗಿತ್ತು.