ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಲಿದೆ. ಮತ್ತು 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ....

ಶಿರಸಿ:ಏ 02. ಜೆಡಿಎಸ್‌‌ನ ಶಿವಲಿಂಗೇಗೌಡ ಅವರು ಅರಸೀಕೆರೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ. ಅರಸಿಕೇರೆಯಿಂದ 2008, 2013, 2018ರಲ್ಲಿ ಜೆಡಿಎಸ್ ಪಕ್ಷದಿಂದ ವಿಧಾನ ಸಭೆಗೆ ಆಯ್ಕೆ ಆಗಿದ್ದ ಶಿವಲಿಂಗೇಗೌಡ ಅವರು ಐನೂರಕ್ಕೂ ಅಧಿಕ ಬೆಂಬಲಿಗರ ಜೊತೆ ಶಿರಸಿಗೆ ಆಗಮಿಸಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ

ಮೈಸೂರು: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಏಪ್ರಿಲ್ 4 ರಂದು ಪಕ್ಷದ ನಿರ್ಣಾಯಕ ಸಭೆಯ ನಂತರ ಪ್ರಕಟಿಸುವ ಸಾಧ್ಯತೆಯಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ. ವರುಣಾ ಜೊತೆಗೆ ಕೋಲಾರದಿಂದ ಸ್ಪರ್ಧಿಸುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ

ಮಂಗಳೂರು:ಏ 01. ಮಂಗಳೂರಿನಲ್ಲಿ ನಾಲ್ವರು ಸಾಮಾಜಿಕ ಹೋರಾಟಗಾರರಿಗೆ ನೀಡಿದ್ದ ಪೊಲೀಸ್ ಭದ್ರತಾ ಸಿಬ್ಬಂದಿ ಸೇವೆಯನ್ನು ಹಿಂಪಡೆಯಲಾಗಿದೆ. ವಿಚಾರವಾದಿ ಮತ್ತು ಸಾಮಾಜಿಕ ಹೋರಾಟಗಾರ ನರೇಂದ್ರ ನಾಯಕ್, ಬಿಜೆಪಿ ಮಾಜಿ ನಾಯಕ ಸತ್ಯಜಿತ್ ಸುರತ್ಕಲ್, ಬಿಜೆಪಿ ಮುಖಂಡರಾದ ರಹೀಮ್‌ ಉಚ್ಚಿಲ, ಮತ್ತು ಜಗದೀಶ್ ಶೇಣವ. ಈ ನಾಲ್ವರು ಸಾಮಾಜಿಕ ಹೋರಾಟಗಾರರಿಗೆ ನೀಡಿದ್ದ ಭದ್ರತಾ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಏಪ್ರಿಲ್ 6 ರವರೆಗೆ ವಿಸ್ತರಿಸಿದೆ. ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಮುಖಂಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ,

ನವದೆಹಲಿ: ನಿನ್ನೆಯಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಅವರು ಶನಿವಾರ ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಎಟಿ ರಾಮಸ್ವಾಮಿ ಅವರು ಕೇಸರಿ ಪಕ್ಷ ಸೇರ್ಪಡೆಯಾದರು. ಅನುರಾಗ್

ಮೈಸೂರು: ಮೈಸೂರು - ಬೆಂಗಳೂರು ಎಕ್ಸ್ಪ್ರೆಸ್ ವೇ ಟೋಲ್ ಬೆಲೆ ಹೆಚ್ಚಳವನ್ನು ತಡೆಹಿಡಿಯಲಾಗಿದೆ. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಸೋಷಿಯಲ್ ಮೀಡಿಯಾ ಮೂಲಕ ಮೈಸೂರು ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ. ಇಂದು ಏಪ್ರಿಲ್ 1ರಿಂದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ದರವನ್ನು ಪರಿಷ್ಕರಿಸಿ ಹೆಚ್ಚಳ

ಶ್ರೀ ಕ್ಷೇತ್ರ ಧರ್ಮಸ್ಥಳ:ಡಾ | ಡಿ . ವೀರೇಂದ್ರ ಹೆಗ್ಗಡೆ ಅವರಿಗೆ ಕೋಟಿ ಗೀತಾ ಲೇಖನ ಯಜ್ಞ ದ ಪುಸ್ತಕ ಹಸ್ತಾ೦ತರಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪದ್ಮವಿಭೂಷಣ ರಾಜರ್ಷಿ ಡಾ | ಡಿ . ವೀರೇಂದ್ರ ಹೆಗ್ಗಡೆ ಅವರಿಗೆ ಕೋಟಿ ಗೀತಾ ಲೇಖನ ಯಜ್ಞ ದ ಪುಸ್ತಕಗಳನ್ನು ನೀಡಿ

ಇದುವರಗೆ ಬಾಯಿಗೆ ಬ೦ದ೦ತೆ ಒ೦ದು ಪಕ್ಷವನ್ನು ಇನ್ನೊ೦ದು ಪಕ್ಷಕ್ಕೆ ಸಾವಲನ್ನು ಹಾಕಿ ನಮ್ಮ ಪಕ್ಷವೇ ಮು೦ದಿನ ದಿನದಲ್ಲಿ ರಾಜ್ಯದಲ್ಲಿ ಸರಕಾರವನ್ನು ನಡೆಸುತ್ತದೆ ಎ೦ದು ದೃಶ್ಯ ಮಾಧ್ಯಮ ಎದುರು ಏದೆಯುಬ್ಬಿಸಿಕೊ೦ಡು ಹೇಳಿಕೆಯನ್ನು ನೀಡುತ್ತಿದ್ದರು,ಆದರೆ ಇದೀಗ ಹಾರಾಟ-ಚಿರಾಟಕ್ಕೆ ಚುನವಾಣೆ ಘೋಷಣೆಯು ಬ್ರೇಕ್ ಹಾಕಿಬಿಟ್ಟಿದೆ.ಆಡಳಿತ ನಡೆಸುವವರು ಏದುರಾಳಿ ಪಕ್ಷಕ್ಕೆ ,ಏದುರಾಳಿಪಕ್ಷಕ್ಕೆ ವಿರೋಧ ಪಕ್ಷಗಳು

ನವದೆಹಲಿ:ಮಾ 31. ದೆಹಲಿಯ ಶಾಸ್ತ್ರೀ ಪಾರ್ಕ್ ಪ್ರದೇಶದಲ್ಲಿ ಸೊಳ್ಳೆ ಕಾಯಿಲ್‌‌ನಿಂದ ಉಸಿರುಗಟ್ಟಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ ರಾತ್ರಿ ವೇಳೆ ಸೊಳ್ಳೆ ಕಾಯಿಲ್ ಹಚ್ಚಿಟ್ಟಿದ್ದು ಅದರ ಬೂದಿ ಕೋಣೆಯಲ್ಲಿ ಪತ್ತೆಯಾಗಿದ್ದು, ವಿಷಕಾರಿ ಹೊಗೆಯಿಂದ ಇವರೆಲ್ಲಾ ಪ್ರಜ್ಞಾಹೀನರಾಗಿದ್ದು, ನಂತರ ಉಸಿರುಗಟ್ಟಿ

ಬೆಂಗಳೂರು: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಕಣಕ್ಕಿಳಿಯುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಸುಳಿವು ನೀಡಿದ್ದಾರೆ. ಇದಕ್ಕೆ ಪಕ್ಷದಲ್ಲಿ ಹೆಚ್ಚುತ್ತಿರುವ ಬೇಡಿಕೆಯನ್ನು ಉಲ್ಲೇಖಿಸಿದ ಮುಖ್ಯಮಂತ್ರಿ, 'ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಲ್ಲಿ ನಾವು