ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಲಖನೌ: ತಾಜ್ ಮಹಲ್ ಸ್ಫೋಟಿಸುವುದಾಗಿ ಉತ್ತರ ಪ್ರದೇಶ ಪ್ರವಾಸೋದ್ಯಮ ಇಲಾಖೆಗೆ ಮಂಗಳವಾರ ಇಮೇಲ್ ಮೂಲಕ ಬೆದರಿಕೆ ಬಂದಿದ್ದು, ಪರಿಶೀಲನೆ ನಂತರ ಇದು ಹುಸಿ ಬಾಂಬ್ ಬೆದರಿಕೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನು ಪ್ರೇಮಸೌಧ ತಾಜ್ ಮಹಲ್ ಅನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದು, ಅನುಮಾನಾಸ್ಪದವಾಗಿ ಏನೂ

ನವದೆಹಲಿ: ಗಡಿ ವಿವಾದವನ್ನು ಅಂತ್ಯಗೊಳಿಸಲು ನ್ಯಾಯಯುತ ಮತ್ತು ಪರಸ್ಪರ ಸ್ವೀಕಾರಾರ್ಹ ಒಪ್ಪಂದಕ್ಕೆಬರಲು ಚೀನಾದೊಂದಿಗೆ ಮಾತುಕತೆ ನಡೆಸಲು ಭಾರತ ಬದ್ಧವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಂಗಳವಾರ ಹೇಳಿದ್ದಾರೆ. ಇಂದು ಲೋಕಸಭೆಯಲ್ಲಿ ಭಾರತ-ಚೀನಾ ಗಡಿ ಪರಿಸ್ಥಿತಿ ಕುರಿತು ಮಾತನಾಡಿದ ಜೈಶಂಕರ್ ಅವರು, ಚೀನಾದ ಕ್ರಮಗಳಿಂದಾಗಿ ಗಡಿಯಲ್ಲಿ ಶಾಂತಿ ಸ್ಥಾಪನೆ

ನವದೆಹಲಿ: ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ 19 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣದ 30 ವರ್ಷದ ಆರೋಪಿಯ ಜೀವಾವಧಿ ಶಿಕ್ಷೆಗೆ ಸುಪ್ರೀಂಕೋರ್ಟ್ ಮಂಗಳವಾರ ತಡೆ ನೀಡಿದೆ. ವಿಚಾರಣಾ ನ್ಯಾಯಾಲಯದ ಅನುವಾದದ ಪ್ರತಿ ಹಾಗೂ ಹೈಕೋರ್ಟ್ ದಾಖಲೆಗಳನ್ನು ಕೇಳಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಪಂಕಜ್ ಮಿಥಾಲ್ ಮತ್ತು ಉಜ್ಜಲ್ ಭುಯಾನ್

ಅನಾರೋಗ್ಯದ ಕಾರಣದಿಂದ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ಅವರು ರೆಗ್ಯುಲರ್​ ಬೇಲ್​ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಅದೇ ರೀತಿ, ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್ ಮುಂತಾದ ಆರೋಪಿಗಳು ಕೂಡ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಹೈಕೋರ್ಟ್​ನಲ್ಲಿ ವಾದ-ಪ್ರತಿವಾದ ನಡೆಯುತ್ತಿದೆ. ಸದ್ಯಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು

ಮಂಗಳೂರು, (ಡಿಸೆಂಬರ್ 03): ಫೆಂಗಲ್ ಚಂಡಮಾರುತದ ಪರಿಣಾಮ ಮಂಗಳೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಇದರಿಂದ ಫೆಂಗಾಲ್​ ಜನರನ್ನು ಕಂಗಾಲ್ ಮಾಡಿದ್ದು, ಅಪಾರ ಪ್ರಮಾಣದ ನೀರಿನಿಂದ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿದೆ. ಹೆದ್ದಾರಿ ಬದಿ ಗೇಲ್ ಗಾಸ್ ಕಂಪನಿ ಅಗೆದಿದ್ದ ಹೊಂಡದಲ್ಲಿ‌ ನೀರು ತುಂಬಿ ಕೂಳೂರು ಬಳಿ ಮಂಗಳೂರು ಟು ಉಡುಪಿ ಸಂಪರ್ಕದ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ಭಾರೀ ಮಳೆಯಿಂದಾಗಿ ಬಜ್ಪೆ ಸಮೀಪದ ಅದ್ಯಪಾಡಿಯಲ್ಲಿ ಭೂಕುಸಿತ ಉಂಟಾಗಿದೆ. ಬಜ್ಪೆ -ಅದ್ಯಪಾಡಿಯ ಸಂಪರ್ಕ ಕಡಿತವಾಗಿದೆ. ಅದ್ಯಪಾಡಿಯಲ್ಲಿ ಉಂಟಾಗಿರುವ ಭೂಕುಸಿತಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ. ಮಂಗಳೂರು ವಿಮಾನ ನಿಲ್ದಾಣ ಕೆಳಭಾಗದ

ಬೆಂಗಳೂರು: ತಮಿಳುನಾಡಿನಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪರಿಣಾಮದಿಂದ ಕರ್ನಾಟಕದಲ್ಲೂ ಮಳೆ ಆರ್ಭಟ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಕರ್ನಾಟಕದ 12 ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೇ ರೀತಿಯ ಮಳೆ ನಾಳೆ ಕೂಡ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಈಗಾಗಲೇ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ವಾರ್ಷಿಕೋತ್ಸವ ಪರ್ಯಾಯ ಉಭಯ ಶ್ರೀಪಾದರು ಹಾಗೂ ಭಂಡಾರಕೇರಿ ಮಠದ ಶ್ರೀ ವಿದ್ಯೇಶತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಬೆಳಿಗ್ಗೆ ರಥರೋಹಣ ಕಾರ್ಯಕ್ರಮವು ಜರಗಿತು.ಸ೦ಜೆ ರಥೋತ್ಸವವು ಜರಗಲಿದೆ.

ಉಡುಪಿ:ಭಾವಿ ಪರ್ಯಾಯ ಶೀರೂರು ಮಠದ ಪರ್ಯಾಯ ಪೂರ್ವ ಮುಹೂರ್ತಗಳಲ್ಲಿ ಪ್ರಥಮವಾದ ಬಾಳೆಮುಹೂರ್ತ ಡಿ. 6ರಂದು ಬೆಳಿಗ್ಗೆ 7 ಗಂಟೆಗೆ ವೃಶ್ಚಿಕ ಲಗ್ನ ಸುಹೂರ್ತದಲ್ಲಿ ನಗರದ ಪೂರ್ಣಪ್ರಜ್ಞ ಕಾಲೇಜು ಬಳಿಯ ಶೀರೂರು ಮಠದ ತೋಟದಲ್ಲಿ ನಡೆಯಲಿದೆ ಎಂದು ಶೀರೂರು ಮಠದ ದಿವಾನ ಡಾ. ಉದಯ ಸರಳತ್ತಾಯ ತಿಳಿಸಿದರು. ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ

ಮೈಸೂರು: ನಿರಂತರವಾಗಿ ಸುರಿದ ಮಳೆಗೆ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತಗೊಂಡಿದ್ದು, ಮಂಗಳವಾರ ಬೆಳಿಗಿನ ಜಾವ ರಸ್ತೆಗೆ ಬಂಡೆಯೊಂದು ಉರುಳಿ ಬಿದ್ದಿದೆ. ಮುಂಜಾನೆಯಾದ್ದರಿಂದ ಯಾರಿಗೂತೊಂದರೆಯಾಗಿಲ್ಲ. ಸೋಮವಾರ ಇಡೀ ದಿನ ನಿರಂತರವಾಗಿ ಮಳೆ ಸುರಿದಿದೆ. ಇರಿಂದ ಸಣ್ಣ ಗುಡ್ಡ ಕುಸಿದು ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.