ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ, KSEAB ಇಂದು (ಮೇ 5, 2023) ಕರ್ನಾಟಕ SSLC ಫಲಿತಾಂಶ 2023 (Karnataka SSLC Results 2023) ದಿನಾಂಕವನ್ನು ದೃಢೀಕರಿಸುವ ನಿರೀಕ್ಷೆಯಿದೆ. ವರದಿಗಳ ಪ್ರಕಾರ, KSEAB ಅಧಿಕಾರಿಗಳು karresults.nic.in ಮತ್ತು kseab.karnataka.gov.in. ನಲ್ಲಿ SSLC ಫಲಿತಾಂಶವನ್ನು ಮುಂದಿನ ವಾರ ಪ್ರಕಟಿಸಲಾಗುವುದು ಎಂದು ಹಂಚಿಕೊಂಡಿದ್ದಾರೆ. ಮಾಧ್ಯಮಗಳ

ಧರ್ಮಸ್ಥಳ: ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ನಿನ್ನೆ ಮೇ 3ರಂದು ಬುಧವಾರ ಸಂಜೆ ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ ನಡೆಯಿತು. ಪ್ರೀತಿ, ವಿಶ್ವಾಸದಿಂದ ಒಬ್ಬರಿಗೊಬ್ಬರು ವಂಚನೆ ಮಾಡದೆ, ಯಾವುದೇ ದುರಾಭ್ಯಾಸಕ್ಕೂ ತುತ್ತಾಗದೆ, ಬದುಕುತ್ತೇವೆ ಹೀಗೆಂದು ತುಳು ಮತ್ತು ಕನ್ನಡ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸುವ ಹಾಗೂ ಆಯಾ ಜಾತಿಯ

ಬೆಳ್ತಂಗಡಿ:ಮೇ 04. ಅತಿಥಿ ಗೃಹ ನಿರ್ಮಾಣ ಕಾಮಗಾರಿ ಕುರಿತು ಸುಳ್ಳು ದಾಖಲೆ ಸೃಷ್ಟಿಸಿದ ಬಗ್ಗೆ ಆರೋಪಿಸಿ ಬೆಳ್ತಂಗಡಿ ಹಾಲಿ ಶಾಸಕ ಹರೀಶ್ ಪೂಂಜಾ ಹಾಗೂ ಇತರ ಮೂವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಶೇಖರ್ ಲೈಲಾ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಹರೀಶ್ ಪೂಂಜಾ ಜೊತೆಗೆ ಕಾರ್ಯನಿರ್ವಾಹಕ ಎಂಜಿನಿಯರ್ ತೌಸೀಫ್ ಅಹಮದ್, ಎಇಇ

ಲಕ್ನೋ:ಮೇ 04 . ಉತ್ತರ ಪ್ರದೇಶದ ಪೊಲೀಸರು ಮತ್ತೊಬ್ಬ ಗ್ಯಾಂಗ್‌ಸ್ಟರ್‌ನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ. ಗ್ಯಾಂಗ್​ಸ್ಟರ್​ ಎನ್ನಿಸಿಕೊಂಡಿದ್ದ ಅನಿಲ್ ದುಜಾನಾನನ್ನು ಇಂದು ಮೀರತ್​​ನಲ್ಲಿ ಉತ್ತರ ಪ್ರದೇಶ ಸ್ಪೆಶಲ್ ಟಾಸ್ಕ್​ ಫೋರ್ಸ್​ (STF) ಎನ್‌ಕೌಂಟರ್‌ ಮಾಡಿದೆ. ಗ್ಯಾಗ್‌ಸ್ಟರ್ ಅತೀಕ್ ಅಹ್ಮದ್‌ನ ಮಗ ಅಸಾದ್ ಅಹ್ಮದ್ ಹಾಗೂ ಆತನ ಸಹಚರ ಗುಲಾಂ ಮೊಹಮ್ಮದ್‌

ಉಡುಪಿ: ನರಸಿಂಹ ಜಯಂತಿಯನ್ನು ಗುರುವಾರ ಹಿರಿಯಡ್ಕ ಸಮೀಪದ ಪುತ್ತಿಗೆ ಮೂಲ ಮಠದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಭಾವಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರು ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಪೂಜೆ ನೆರವೇರಿಸಿದರು.

ಛತ್ತೀಸ್‌ಗಢ: ಛತ್ತೀಸ್‌ಗಢ ರಾಜ್ಯದಲ್ಲಿ  ಭೀಕರ ಅಪಘಾತ ಸಂಭವಿಸಿದೆ. ಟ್ರಕ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ 10 ಮಂದಿ ದುರ್ಮರಣ ಹೊಂದಿದ್ದಾರೆ. ಬಲೋದ್ ಜಿಲ್ಲೆಯ ಜಗತ್ರಾ ಬಳಿ ನಡೆದಿರುವ ಅಪಘಾತದಲ್ಲಿ ಮಗುವೊಂದು ಗಂಭೀರವಾಗಿ ಗಾಯಗೊಂಡಿದೆ. ಗಾಯಾಳುವನ್ನು ಚಿಕಿತ್ಸೆಗಾಗಿ ರಾಯ್‌ಪುರಕ್ಕೆ ರವಾನಿಸಲಾಗಿದೆ. ಟ್ರಕ್ ಚಾಲಕನ ಹುಡುಕಾಟ ನಡೆಯುತ್ತಿದೆ ಎಂದು ಬಲೋದ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ

ನವದೆಹಲಿ: ದೆಹಲಿ ಪೊಲೀಸರ ದೌರ್ಜನ್ಯದಿಂದ ಮನನೊಂದ ಪ್ರತಿಭಟನಾ ನಿರತ ಕುಸ್ತಿಪಟುಗಳು ಇಂದು ತಮ್ಮ ಪದಕ ಮತ್ತು ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸುವುದಾಗಿ ಬೆದರಿಕೆ ಹಾಕಿದ್ದು, ಈ ರೀತಿ ಅಗೌರವ ತೋರಿದರೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ್ದಾರೆ. ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಕುಸ್ತಿಪಟುಗಳು ಮಲಗಲು ಮಂಚಗಳನ್ನು ತಂದಾಗ ಗಲಾಟೆ ಪ್ರಾರಂಭವಾಯಿತು. ನಿಯಮಾನುಸಾರ

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮೇಲಿದ್ದ ಕಳ್ಳತನ ಆರೋಪವೊಂದು ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ಚಿತ್ತಾಪುರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಸಬೇಕಿದ್ದ ಪ್ರಚಾರ ರದ್ದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಲ್ಲಿ ಮೇ 6 ರಂದು ಪಿಎಂ ಮೋದಿ ಭಾಗವಹಿಸಬೇಕಾಗಿದ್ದ ಸಾರ್ವಜನಿಕ ಸಭೆಯನ್ನು ರದ್ದುಗೊಳಿಸಲಾಗಿದೆ ಎಂದು ವರದಿಗಳು

ಮಂಗಳೂರು: ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹಿಂದೂ ಯುವತಿಯ ಜೊತೆಯಲ್ಲಿದ್ದ ಕಾರಣಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಜರಂಗದಳದ ಕಾರ್ಯಕರ್ತರು ಎಂದು ಶಂಕಿಸಲಾದ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಒಳಮೊಗ್ರು ಗ್ರಾಮದ ನಿವಾಸಿ ಎಸ್ ಪ್ರದೀಪ್ (19), ಕೆದಂಬಾಡಿಯ ದಿನೇಶ್ ಗೌಡ (25), ಗುತ್ತುಮನೆಯ ನಿಶಾಂತ್ ಕುಮಾರ್

ಬೆಂಗಳೂರು: ಬರೋಬ್ಬರಿ 821.22 ಕೋಟಿ ಬೃಹತ್ ಮೊತ್ತದ ಹಗರಣ ನಡೆಸಿದ ಆರೋಪ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್​​ ಯಡಿಯೂರಪ್ಪ (BS Yediyurappa), ಸಚಿವರು ಮತ್ತು ಐಎಎಸ್​ ಅಧಿಕಾರಿಗಳು ಸೇರಿದಂತೆ ಒಟ್ಟು 28 ಜನರ ವಿರುದ್ಧ ಲೋಕಾಯುಕ್ತಗೆ ದೂರು ನೀಡಲಾಗಿದೆ. ದಾಖಲೆ ಸಮೇತ ಆರ್​ಟಿಐ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಎನ್ನುವವರಿಂದ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.