ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿ:ಉಡುಪಿಯ ಶ್ರೀಚಂದ್ರಮೌಳೇಶ್ವರ ವಾರ್ಷಿಕ ದೇವರ ಉತ್ಸವದ ಅಂಗವಾಗಿ ಕೊಡಿ ಏರುವ (ಧ್ವಜಾರೋಹಣ)ಧಾರ್ಮಿಕ ಕಾರ್ಯಕ್ರಮ ಇಂದು ಭಾನುವಾರ ಬೆಳಿಗ್ಗೆ ಸಂಪನ್ನ ಗೊಂಡಿತು.ಉತ್ಸವವು ಡಿಸೆಂಬರ್ 3 ರಂದು ನಡೆಯಲಿದೆ. ಪರ್ಯಾಯಯತಿಗಳು ಈ ಸ೦ದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.

ಬೆಂಗಳೂರು: ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಬ್ಲ್ಯಾಕ್‌ಮೇಲ್ ಪ್ರಕರಣ ಸಂಬಂಧ ಅವರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಅಶ್ಲೀಲ ವಿಡಿಯೋ ಸೃಷ್ಟಿಸಿ ಲಗ್ಗೆರೆ ವಾರ್ಡ್ ಮಾಜಿ ಕಾರ್ಪೋರೇಟರ್‌ವೊಬ್ಬರ ಪತಿಗೆ ಬ್ಲ್ಯಾಕ್‌ಮೇಲ್ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಶಾಸಕ ಮುನಿರತ್ನ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ

ಚೆನ್ನೈ: ಶನಿವಾರ ಸಂಜೆ ತಮಿಳುನಾಡಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡು ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ದಾಖಲೆಯ ಮಳೆಯಾಗಿದೆ. ಶನಿವಾರ ತಡರಾತ್ರಿ ಅಪ್ಪಳಿಸಿದ 'ಫೆಂಗಲ್' ಚಂಡಮಾರುತವು ಪುದುಚೇರಿಯಲ್ಲಿ ಇತಿಹಾಸದಲ್ಲೇ ಗರಿಷ್ಟ ದಾಖಲೆಯ ಅತಿ ಹೆಚ್ಚು ಪ್ರಮಾಣದ ಮಳೆ ಸುರಿಸಿದೆ. ಅಂತೆಯೇ ತಮಿಳುನಾಡಿನ ವಿಳ್ಳುಪುರಂ ಜಿಲ್ಲೆಯಲ್ಲೂ ದಾಖಲೆಯ ಮಳೆಯನ್ನು ಸುರಿದಿದೆ. ಪ್ರಸ್ತುತ

ಹೈದರಾಬಾದ್:ಡಿ.01 ,ಇಂದು ಬೆಳಿಗ್ಗೆ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಉನ್ನತ ಕಮಾಂಡರ್ ಸೇರಿದಂತೆ ಏಳು ಮಾವೋವಾದಿಗಳು ಹತರಾಗಿದ್ದಾರೆ. ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಪೊಲೀಸ್ ಮಾಹಿತಿದಾರರು ಎಂಬ ಶಂಕೆಯಲ್ಲಿ ಇಬ್ಬರು ಬುಡಕಟ್ಟು ಯುವಕರನ್ನು ಹತ್ಯೆಗೈದ ಒಂದು ವಾರದ ನಂತರ ಈ ಘಟನೆ ನಡೆದಿದೆ. ಗ್ರೇಹೌಂಡ್ಸ್ ಕೂಂಬಿಂಗ್ ಕಾರ್ಯಾಚರಣೆಯ ಸಮಯದಲ್ಲಿ ಮಾವೋವಾದಿ ಗುಂಪನ್ನು ಗುರುತಿಸಿ

ಕಂಟೈನರ್ ನ ಬ್ರೇಕ್ ಲೈನರ್ ಜಾಮ್ ಆಗಿ ಬೆಂಕಿ ಕಾಣಿಸಿಕೊಂಡು ಟಯರ್ ಮೇಲ್ಗಡೆ ಹೊತ್ತಿ ಉರಿದಿದ್ದು ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ಬಪ್ಪನಾಡು ಸೇತುವೆ ಬಳಿ ನಡೆದಿದೆ. ಪಡುಬಿದ್ರೆ ನಂದಿಕೂರು ಕೈಗಾರಿಕಾ ಪ್ರದೇಶದ ಬ್ರೈಟ್ ಫ್ಲೆಕ್ಸ್ ಕಂಪನಿಯಿಂದ ಮಂಗಳೂರು ಬಂದರ್ ಕಡೆಗೆ

ಫೆಂಗಲ್ ಚಂಡಮಾರುತತೀವ್ರತೆ ಪಡೆದುಕೊಂಡಿದೆ. ಚೆನ್ನೈನಲ್ಲಿ ಭಾರಿ ಮಳೆಯಿಂದಾಗಿ ವಿಮಾನ ಮತ್ತು ರೈಲು ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಮಳೆಯ ಅಬ್ಬರದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 10ಕ್ಕೂ ಹೆಚ್ಚು ಆಗಮನ ಮತ್ತು ನಿರ್ಗಮನ ರದ್ದುಗೊಳಿಸಲಾಗಿದೆ. ಇಂಡಿಯೋ ತನ್ನ ಎಲ್ಲಾ ಆಗಮನ ಮತ್ತು ನಿರ್ಗಮನ ವಿಮಾನ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇದರೊಂದಿಗೆ ಅಬುದಾಬಿಯಿಂದ

ಉಡುಪಿ: ನ.30: ನಕ್ಸಲ್‌ ವಿಕ್ರಮ್‌ಗೌಡ ಎನ್‌ಕೌಂಟರ್‌ ನಕಲಿ ಅಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟಪಡಿಸಿದ್ದಾರೆ. ಎನ್‌ಕೌಂಟರ್‌ನ ನ್ಯಾಯಸಮ್ಮತತೆಯನ್ನು ಅನುಮಾನಿಸಬೇಡಿ ಎಂದು ಅವರು ಜನರನ್ನು ಒತ್ತಾಯಿಸಿದರು. ಉಡುಪಿ ಜಿಲ್ಲಾ ಗೃಹ ಕಚೇರಿಯಲ್ಲಿ ಶನಿವಾರ ಮಾತನಾಡಿದ ಸಚಿವರು, ಘಟನೆಯ

ಪುತ್ತೂರು: ಪುತ್ತೂರಿನ ಹಿರಿಯ ಸಾಮಾಜಿಕ ಧುರೀಣ, ಮಾಡನ್ನೂರು ಗ್ರಾಮದ ಅಮ್ಚಿನಡ್ಕ ನಿವಾಸಿ ಮಾಡನ್ನೂರು ಕೊಚ್ಚಿ ಮರ್ಹೂಂ ಅಬ್ದುಲ್ ಖಾದರ್ ಹಾಜಿಯವರ ಪುತ್ರ ಕೆ.ಕೆ.ಕುಂಞಿ ಅಹ್ಮದ್ ಹಾಜಿ(87) ವಯೋಸಹಜ ಅನಾರೋಗ್ಯದಿಂದ ಶನಿವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು. ಮಾಡನ್ನೂರು ಜುಮಾ ಮಸೀದಿಯ ಮತ್ತು ಅಮ್ಚಿನಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯಲ್ಲಿ ಹಲವಾರು ವರ್ಷಗಳ ಕಾಲ

ಚಿಕ್ಕಮಗಳೂರು, ನವೆಂಬರ್​ 30: ಚಿಕ್ಕಮಗಳೂರು  ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠ  ಸಂಪೂರ್ಣ ಹಿಂದೂ  ಪೀಠಕ್ಕಾಗಿ ಆಗ್ರಹಿಸಿ ಭಜರಂಗದಳ ಮತ್ತು ವಿಹೆಚ್​ಪಿ ನೇತೃತ್ವದಲ್ಲಿ 25ನೇ ವರ್ಷದ ದತ್ತಜಯಂತಿ ಆಚರಣೆಗೆ ಚಾಲನೆ ದೊರೆತಿದೆ. ಚಿಕ್ಕಮಗಳೂರು ನಗರ, ಪಟ್ಟಣಗಳಲ್ಲಿ ಕೇಸರಿ ಭಾವುಟ ಮತ್ತು ಬಂಟಿಂಗ್ಸ್​ ಕಟ್ಟಿ ಅಲಂಕಾರ

ಬಳ್ಳಾರಿ, ನವೆಂಬರ್​ 30: ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರು ಮೃತಪಟ್ಟಿದ್ದಾರೆ. ನಾಲ್ವರಲ್ಲಿ ಬಳ್ಳಾರಿ ತಾಲೂಕಿನ ಬಾಣಾಪುರ ಗ್ರಾಮದ ನಂದಿನಿ ಎಂಬುವರು ನವೆಂಬರ್​ 09 ರಂದು ಹೆರಿಗೆಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ನವೆಂಬರ್​ 12 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ, ಅಂದು ಮಧ್ಯರಾತ್ರಿ ಮೃತಪಟ್ಟಿದ್ದು, ದುರ್ದೈವದ