ನವದೆಹಲಿ:ಆ. 26ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚಿಗಷ್ಟೇ ಹವಾಮಾನ ಇಲಾಖೆಯು ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮುವಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿತ್ತು.