ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಕಾರ್ಕಳ: ಬೋಳ ಗ್ರಾಮದ ಎರಡು ಮನೆಗಳಲ್ಲಿ ಗೋವಾ ರಾಜ್ಯದ ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಮದ್ಯದ ಬಾಕ್ಸ್ ಗಳನ್ನು ಅಬಕಾರಿ ಇಲಾಖೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ. ಅಬಕಾರಿ ಉಪ ಆಯುಕ್ತೆ ಬಿಂದು ಅವರ ನೇತೃತ್ವದಲ್ಲಿ ಬೋಳದ ಅವಿನಾಶ್ ಮಲ್ಲಿ ಎಂಬುವವರ ಎರಡು ಮನೆಗೆ ದಾಳಿ ನಡೆಸಿದ್ದು,

ಬೆಂಗಳೂರು, ನವೆಂಬರ್​ 15: ಕರ್ನಾಟಕ ಸರ್ಕಾರ ಆಡಳಿತ ವಿಭಾಗಕ್ಕೆ ಮೇಜರ್​ ಸರ್ಜರಿ ಮಾಡಿದೆ. ಐಪಿಎಸ್​ ಏಳು ಮಂದಿ ಅಧಿಕಾರಿಗಳನ್ನು ದಿಢೀರ್​ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಹುದ್ದೆ ನಿರೀಕ್ಷೆಯಲ್ಲಿದ್ದ ಸಂತನು ಸಿನ್ಹಾ ಅವರನ್ನು ಸಿಐದಿಯ ಡಿಐಜಿ ಹುದ್ದೆಗೆ ಹಾಗೂ ಸಿಐಡಿಯ ಎಸ್​​ಪಿ ಹುದ್ದೆಗೆ ಜಿ.ಸಂಗೀತ ಅವರನ್ನು

ಲಂಡನ್:ನ.14ಮೈಸೂರು ಹುಲಿ ಟಿಪ್ಪು ಸುಲ್ತಾನ್‌ಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ ಎಂದು ತಿಳಿದುಬಂದಿದೆ. ಈ ಖಡ್ಗ ಟಿಪ್ಪು ಸುಲ್ತಾನ್‌ನ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿತ್ತು. ಈ ಖಡ್ಗವನ್ನು ಟಿಪ್ಪು 1799 ರಲ್ಲಿ ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಸೋತ ನಂತರ ಆಗಿನ ಬ್ರಿಟಿಷ್ ಸೇನೆಯ ಕ್ಯಾಪ್ಟನ್ ಜೇಮ್ಸ್ ಆಂಡ್ರ‍್ಯೂ

ಬೆಂಗಳೂರು: ರಾಜ್ಯ ಕೇಡರ್ ನ ಹಿರಿಯ ಐಎಎಸ್ ಅಧಿಕಾರಿ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ. ಶಿಖಾ ಅವರು ಕೇಂದ್ರ ಸೇವೆಗೆ ವರ್ಗಾವಣೆಗೊಂಡಿದ್ದಾರೆ. ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ಕಾರ್ಯದರ್ಶಿಯಾಗಿ ಸಿ. ಶಿಖಾ ನೇಮಕವಾಗಿದ್ದು, ಶೀಘ್ರವೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ. 2004ರ ಐಎಎಸ್ ಅಧಿಕಾರಿಯಾಗಿರುವ ಶಿಖಾ ಅವರು ಮೈಸೂರು

ಉಡುಪಿ:ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನ ನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಇದರ ಅರಿವೇ ತಮಗೆ ಇಲ್ಲದಂತೆ ಇರುತ್ತಿರುವ ನಮ್ಮ ಉಡುಪಿ ಲೋಕಸಭಾ ಸದಸ್ಯರು ಉಡುಪಿ ಶಾಸಕರು ಆದರೆ ಪರ್ಕಳ ರಾಷ್ಟ್ರೀಯ ಹೆದ್ದಾರಿಯೂ ಜನಸಾಮಾನ್ಯರಿಗೆ ವಾಹನದಲ್ಲಿ ಚಲಿಸಲು ಆಗದಂತ ಪರಿಸ್ಥಿತಿಯನ್ನು ತಂದಿದೆ. ಶಾಲಾ ಪುಟ್ಟ ಮಕ್ಕಳನ್ನು ಕರೆದುಕೊಂಡು ಹೋಗುವ ರಿಕ್ಷವೇ ಅಲ್ಲಿ ಪಲ್ಟಿಯಾಗಿ

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ಪರ್ಯಾಯ ಶ್ರೀ ಪುತ್ತಿಗೆ ಮಠದ ಉಭಯ ಶ್ರೀಪಾದರು ರಥಬೀದಿಯ ಸುತ್ತಲೂ ಹಣತೆಯನ್ನಿಟ್ಟು ದೀಪೋತ್ಸವಕ್ಕೆ ಚಾಲನೆಯನ್ನು ನೀಡಿದರು. ಉಡುಪಿಯ ಶ್ರೀ ಕೃಷ್ಣ ಮಠದ ಮಧ್ವ ಸರೋವರದಲ್ಲಿ ಉತ್ಥಾನ ದ್ವಾದಶಿಯ ಪ್ರಯುಕ್ತ ಪರ್ಯಾಯ ಶ್ರೀ ಪುತ್ತಿಗೆ ಮಠದ ಉಭಯ ಶ್ರೀಪಾದರು ಕ್ಷೀರಾಭ್ದಿಯನ್ನು ಮಾಡಿ, ಅರ್ಘ್ಯವನ್ನು

ಉಡುಪಿ:ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮ ನ.17 ಮತ್ತು 18ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ ಸಂಭ್ರಮದಿಂದ ನಡೆಯಲಿದೆ ಎಂದು ಶತಮಾನೋತ್ತರ ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನ.17ರ ಬೆಳಗ್ಗೆ 10 ಗಂಟೆಗೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ

ನವದೆಹಲಿ: ದೆಹಲಿ ವಕ್ಫ್‌ ಬೋರ್ಡ್‌ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಪ್‌ ಶಾಸಕ ಅಮಾನತುಲ್ಲಾ ಖಾನ್‌ ಅವರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವಂತೆ ಇಲ್ಲಿನ ನ್ಯಾಯಾಲಯ ಗುರುವಾರ ಆದೇಶಿಸಿದ್ದು, ಅವರ ವಿರುದ್ಧ ಸಲ್ಲಿಸಲಾಗಿರುವ ಚಾರ್ಜ್‌ಶೀಟ್‌ನ ವಿಚಾರಣೆಗೆ ನಿರಾಕರಿಸಿದೆ. ಖಾನ್ ವಿರುದ್ಧ ಮುಂದುವರೆಯಲು ಸಾಕಷ್ಟು ಸಾಕ್ಷ್ಯಾಧಾರಗಳಿದ್ದರೂ, ಅವರ ವಿರುದ್ಧ

ಉಡುಪಿ ಶ್ರೀಕೃಷ್ಣಮಠದ ಲಕ್ಷದೀಪೋತ್ಸವಕ್ಕೆ ಸಕಲ ಸಿದ್ದತೆಯನ್ನು ಮಾಡಲಾಗಿದ್ದು ಉತ್ಥಾನ ದ್ವಾದಶಿಯದಿನವಾದ ಬುಧವಾರ ಮಧ್ಯಾಹ್ನ ಹಣತೆ ಇಡುವ ಕಾರ್ಯಕ್ರಮಕ್ಕೆ ಸ೦ಪನ್ನಗೊ೦ಡಿತು. ಕಾರ್ಯಕ್ರಮದಲ್ಲಿ ಪರ್ಯಾಯ ಶ್ರೀಕೃಷ್ಣಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು,ಕಿರಿಯ ತಿಗಳಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರು ಸೇರಿದ೦ತೆ ಪರ್ಯಾಯ ಮಠದ ದಿವಾನರಾದ ನಾಗರಾಜ ಆಚಾರ್ಯ,ಪ್ರಸನ್ನ ಆಚಾರ್ಯ,ವಿಷ್ಣುಮೂರ್ತಿ ಉಪಾದ್ಯಾ,ಕೊಟ್ಟಾರಿಗಳಾದ ರಾಮಚ೦ದ್ರ ಕೊಡ೦ಚ, ರತೀಶ್ ತ೦ತ್ರಿ ಹಾಗೂ ಮಠದ

ಮೈಸೂರು, ನವೆಂಬರ್​ 13: ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಿನ್ನೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ನೀಡಿದ್ದ ದೂರಿನ ಆಧಾರದ ಮೇಲೆ ಇಂದು ಎಫ್ಐಆರ್ ದಾಖಲಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ಮುಡಾದಿಂದ ಪಡೆದ ಸೈಟ್​ ಕ್ರಯಪತ್ರದ ಮುದ್ರಾಂಕ ಶುಲ್ಕದ