ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!...ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ...

ನವದೆಹಲಿ:ಅ. 01. 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 15.50 ರೂ. ಏರಿಕೆ ಮಾಡುವ ಮೂಲಕ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ ಏರಿಕೆಯ ಶಾಕ್ ಕೊಟ್ಟಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಮಾರುಕಟ್ಟೆ ಕಂಪನಿಗಳು ಹೊಸ ಪರಿಷ್ಕರಣೆಯನ್ನು ಘೋಷಿಸಿದ್ದು, ಇಂದಿನಿಂದಲೇ ಈ ದರ ಜಾರಿಗೆ

ಭೋಪಾಲ್: ಕೇವಲ 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ಫೇಲ್ ಆಗಿ ಸಾವನ್ನಪ್ಪಿರುವ ಧಾರುಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ಈ ಬೆಚ್ಚಿಬೀಳಿಸುವ ಹೃದಯ ವಿದ್ರಾವಕ ದುರಂತ ಸಂಭವಿಸಿದ್ದು, ಕಳೆದ 15 ದಿನಗಳಲ್ಲಿ ಆರು ಮಕ್ಕಳು ಮೂತ್ರಪಿಂಡ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ. ಆರಂಭದಲ್ಲಿ ಋತುಮಾನದ ಜ್ವರದ ಸಾಮಾನ್ಯ ಸಮಸ್ಯೆಗಳಂತೆ

ಮೈಸೂರು: ಇಂದು ಆಯುಧಪೂಜೆ, ಮಹಾನವಮಿ ಪ್ರಯುಕ್ತ ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ಬೆಳಗ್ಗೆಯಿಂದಲೇ ಸಾಂಪ್ರದಾಯಿಕ ಪೂಜೆ-ಪುನಸ್ಕಾರಗಳು ನಡೆದಿದೆ. ಮೈಸೂರು ರಾಜಸಂಸ್ಥಾನ ಪರಂಪರೆಯಂತೆ ಯದುವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜಾ ಕೈಂಕರ್ಯ ನೆರವೇರಿಸಿದರು. ಬೆಳಗ್ಗೆ ಅರಮನೆಯಲ್ಲಿ ಚಂಡಿಕಾ ಹೋಮ ನಡೆದಿದೆ. 'ಆಯುಧ ಪೂಜೆ'ಗೆ ರಾಜ ವೈಭವ; ಮೆರವಣಿಗೆಯಲ್ಲಿ

ಬೆಂಗಳೂರು: ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಮನೆಯೊಂದರಲ್ಲಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಸುದರ್ಶನ್ (32) ಮತ್ತು ಕಾವ್ಯಾ (28) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲೆಯಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ

ಉಡುಪಿ: ಮಲ್ಪೆ ಕೊಡವೂರಿನ ಸಾಲ್ಮರದಲ್ಲಿ ನಡೆದ ಎಕೆಎಂಎಸ್ ಬಸ್ ಮಾಲೀಕ ರೌಡಿಶೀಟರ್ ಸೈಫುದ್ದೀನ್ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ‌ ಇಂದು ಹಾಜರುಪಡಿಸಲಾಯಿತು. ಉಡುಪಿ ಮಿಷನ್ ಕಂಪೌಂಡ್ ನಿವಾಸಿ ಮಹಮದ್ ಫೈಸಲ್ ಖಾನ್ (27), ಕರಂಬಳ್ಳಿ ಕುಂಜಿಬೆಟ್ಟು ನಿವಾಸಿ ಮೊಹಮ್ಮದ್ ಶರೀಫ್ (37) ಮತ್ತು ಕಾಟಿಪಳ್ಳ ನಿವಾಸಿ ಅಬ್ದುಲ್

ಉಡುಪಿ: ಸೆ.29: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಸಾಲ್ಮರದ ಮನೆಯಲ್ಲಿ ಶನಿವಾರ ನಡೆದ ಎಕೆಎಂಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಅತ್ರಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಉಡುಪಿ ಮಿಷನ್ ಕಂಪೌಂಡ್ ಬಳಿಯ ನಿವಾಸಿ ಮಹಮದ್ ಫೈಸಲ್ ಖಾನ್(27),

ಕರೂರು:ಸೆ. 29ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದ್ದು, ಇದಕ್ಕೆ ನಟ, ರಾಜಕಾರಣಿ ವಿಜಯ್ ತಡವಾಗಿ ಬಂದಿದ್ದೇ ಕಾರಣ, ಅಷ್ಟೇ ಅಲ್ಲದೆ ರೋಡ್​ ಶೋಗೆ ಅನುಮತಿಯೂ ಇರಲಿಲ್ಲ ಎಂದು ಎಫ್​ಐಆರ್​ನಲ್ಲಿ ಉಲ್ಲೇಖಿಸಲಾಗಿದೆ. ಎಫ್​ಐಆರ್‌ನಲ್ಲಿ ಜಿಲ್ಲಾ ಕಾರ್ಯದರ್ಶಿ ಮತಿಯಜಗನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಬುಷಿ ಆನಂದ್ ಮತ್ತು ರಾಜ್ಯ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ನಡೆಯುತ್ತಿರುವ ಸಮಯದಲ್ಲೇ ಸಾಂಸ್ಕೃತಿಕ ನಗರಿ ಬೆಚ್ಚಿ ಬೀಳುವಂತಹ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಮೈಸೂರಿನ ವಿಜಯನಗರ ಪೊಲೀಸರು, ಸರ್ಕಾರೇತರ ಸಂಸ್ಥೆ(ಎನ್ ಜಿಒ) ಒಡನಾಡಿ ಸಹಯೋಗದೊಂದಿಗೆ ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ವರ್ಜಿನ್ ಸೆಕ್ಸ್ ದಂಧೆಯನ್ನು ಬೇಧಿಸಿದ್ದಾರೆ. ಇತ್ತೀಚೆಗೆ ಋತುಮತಿಯಾದ ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಪರ್ಕ ಏರ್ಪಡಿಸಲು 20

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ,ಶ್ರೀಕೃಷ್ಣಮಠದ ರಾಜಾ೦ಗಣ,ಉಪ್ಪೂರು,ಹೇರೂರು,ಕಾಪು ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನ,ಮು೦ಡ್ಕೂರುಗಳಲ್ಲಿ ನವರಾತ್ರೆಯ ಒ೦ಭತ್ತು ದಿನಗಳ ಕಾಲ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಚ೦ಡಿಕಾ ಹೋಮ,ಶ್ರೀದುರ್ಗಾ ನಮಸ್ಕಾರ,ದೀಪಾರಾಧನೆ ಕಾರ್ಯಕ್ರಮದೊ೦ದಿಗೆ ಶ್ರೀಶಾರದಾ ಪೂಜೆಯು ವಿಜೃ೦ಭಣೆಯಿ೦ದ ನರೆವೇರುತ್ತಿದೆ. ಸಾವಿರಾರುಮ೦ದಿ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಾನರಾಗಿದ್ದಾರೆ. ಅಲ್ಲಲ್ಲಿ ವಿವಿಧ ಸ೦ಸ್ಕೃತಿ ಕಾರ್ಯಕ್ರಮದೊ೦ದಿಗೆ ಭಜನಾ ಕಾರ್ಯಕ್ರಮವು ನಡೆಯುತ್ತಿದೆ.