ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ ಕೇಳಿ ಬಂದಿದೆ. ಪಾರ್ವತಿ ಮೇಲೆ ಮೈಸೂರಿನಲ್ಲಿ ಆರ್‌ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದು, ಈ ಕುರಿತು ದಾಖಲೆ ಬಿಡುಗಡೆ ಮಾಡಿದ್ದಾರೆ. ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ 20 ಗುಂಟೆ ಜಾಗವನ್ನು 2023ರ ಸೆಪ್ಟೆಂಬರ್ 29

ಬೈತ್ ಲಹಿಯಾದಲ್ಲಿರುವ ಇಂಡೊನೇಷ್ಯಾ ಆಸ್ಪತ್ರೆಯನ್ನು ಇಸ್ರೇಲ್ ಪಡೆಗಳು ಸುತ್ತುವರೆದು ದಾಳಿ ನಡೆಸಿದ್ದು, ಈ ದಾಳಿಯ ಪರಿಣಾಮ ವೈದ್ಯಕೀಯ ಸಿಬ್ಬಂದಿ ಹಾಗೂ ರೋಗಿಗಳಿಗೆ ಗಾಯಗಳಾಗಿವೆ ಎಂದು ಗಾಜಾದ ವೈದ್ಯಕೀಯ ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಇಸ್ರೇಲ್ ಟ್ಯಾಂಕ್‌ಗಳು ಆಸ್ಪತ್ರೆಯನ್ನು ಸುತ್ತುವರಿದು, ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ಎರಡು ಹಾಗೂ ಮೂರನೇ ಮಹಡಿಯನ್ನು ಗುರಿಯಾಗಿಸಿಕೊಂಡು ದಾಳಿ

ಇಂಫಾಲ್: ಜಿರಿಬಾಮ್ ಜಿಲ್ಲೆಯ ಹಳ್ಳಿಯೊಂದರ ಮೇಲೆ ಉಗ್ರರು ಶನಿವಾರ ದಾಳಿ ನಡೆಸಿದ್ದರಿಂದ ಮಣಿಪುರದಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸಿ, ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಬೊರೊಬೆಕ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅವರು

ನವದೆಹಲಿ/ಮುಂಬೈ: ಭಾರತೀಯ ವಿಮಾನಯಾನ ಸಂಸ್ಥೆಗಳ ಸುಮಾರು 20 ವಿಮಾನಗಳಿಗೆ ಶನಿವಾರ ಬಾಂಬ್‌ ಬೆದರಿಕೆಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ. ಇಂದು ಬೆಳಗ್ಗೆಯಿಂದ ಇಲ್ಲಿಯವರಿಗೆ ಏರ್ ಇಂಡಿಯಾ, ಇಂಡಿಗೋ, ಆಕಾಶ ಏರ್, ವಿಸ್ತಾರಾ, ಸ್ಪೈಸ್ ಜೆಟ್, ಸ್ಟಾರ್ ಏರ್ ಮತ್ತು ಅಲಯನ್ಸ್ ಏರ್ ವಿಮಾನ ಸೇರಿದಂತೆ 20 ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ

ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಹಾಗೂ ಜಿಲ್ಲೆಯ ಸರ್ವ ಸದಸ್ಯರಿಂದ 60% ಕನ್ನಡ ನಾಮಫಲಕ ಕಡ್ಡಾಯ ಕುರಿತು ಉಡುಪಿ ಜಿಲ್ಲಾಧಿಕಾರಿಗೆ ಮನವಿ. ದಿನಾಂಕ -14/10/2024 ರಂದು ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಡುಪಿ ಜಿಲ್ಲಾದ್ಯಂತ ಜಾಹಿರಾತು ಫಲಕಗಳು, ಶಿಕ್ಷಣ ಸಂಸ್ಥೆಗಳ ಫಲಕಗಳು, ವಾಣಿಜ್ಯ ಮಳಿಗೆಗಳು, ಆಸ್ಪತ್ರೆಯ ಜಾಹಿರಾತು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆದರಿಕೆ ವಿಚಾರವಾಗಿ ನಿರ್ಮಾಪಕ ದಾಖಲಿಸಿದ್ದ ಕೇಸ್ ಮರುಜೀವ ಪಡೆದುಕೊಂಡಿದೆ. ಈ ಹಿಂದೆ `ಭಗವಾನ್ ಶ್ರೀ ಕೃಷ್ಣಾ’ ಎಂಬ ಭರತ್ ನಿರ್ಮಾಣದ ಸಿನಿಮಾದಲ್ಲಿ ಧೃವನ್ ನಾಯಕನಾಗಿ ನಟಿಸುತ್ತಿದ್ದ. 2020ರಲ್ಲಿ ನಿರ್ಮಾಪಕ ಭರತ್ ಸಿನಿಮಾದ ಶೂಟಿಂಗ್ ಶುರು ಮಾಡಿದ್ದರು.

ಟೆಲ್ ಅವೀವ್: ಅಕ್ಟೋಬರ್ 7ರಂದು ಇಸ್ರೇಲಿಗರ ಮೇಲಿನ ದಾಳಿಯ ರೂವಾರಿ, ಹಮಾಸ್ ಉಗ್ರ ಸಂಘಟನೆ ಮುಖ್ಯಸ್ಥ ಯಾಹ್ಯಾ ಸಿನ್ವಾರ್  ಕೊನೆಗೂ ಇಸ್ರೇಲ್ ಸೇನೆ ಹೊಡೆದುರುಳಿಸಿದ್ದು, ಇಡೀ ಇಸ್ರೇಲ್ ಇದೀಗ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಗಾಜಾದಲ್ಲಿ ನಡೆದ ದಾಳಿಯಲ್ಲಿ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಅವರನ್ನು ಕೊಂದಿರುವುದಾಗಿ ಇಸ್ರೇಲ್ ಸೇನೆ ಗುರುವಾರ ಹೇಳಿಕೊಂಡಿದೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಗಳಲ್ಲಿ ಒಂದಾದ ಕನ್ನಡ ಚಿತ್ರರಂಗದ ಮಾಣಿಕ್ಯ ಕಿಚ್ಚ ಸುದೀಪ್ ಹೋಸ್ಟ್ ಮಾಡುತ್ತಿರುವ ಬಿಗ್ ಬಾಸ್ 11 ನೇ ಸೀಸನ್ ಗೆ ಒಂದಲ್ಲ ಒಂದು ಸಂಕಷ್ಟ ಎದುರಾಗುತ್ತಲೇ ಇದೆ. ಬಿಗ್ ಬಾಸ್ 11 ನೇ ಸೀಸನ್

ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಐಸಿಯುನಲ್ಲಿದ್ದ ಓರ್ವ ರೋಗಿ ಸಾವನ್ನಪ್ಪಿದ್ದಾನೆ. ಕೋಲ್ಕತ್ತಾದ ಸೀಲ್ದಾಹ್ ಪ್ರದೇಶದಲ್ಲಿರುವ ಇಎಸ್‌ಐ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು (ಅ.18) ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳಕ್ಕೆ 10 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡರು. ಈ ವೇಳೆ ಕೇವಲ 20 ನಿಮಿಷದಲ್ಲಿ

ನವದೆಹಲಿ, ಅಕ್ಟೋಬರ್ 18: ಅಪಹರಣ ಪ್ರಕರಣದಲ್ಲಿ ಜೆಡಿಎಸ್ ನಾಯಕ ಹೆಚ್​ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್​ ನೀಡಿರುವ ಜಾಮೀನನ್ನು ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್​ ಶುಕ್ರವಾರ ಹೇಳಿದೆ. ಇದರೊಂದಿಗೆ, ಭವಾನಿ ರೇವಣ್ಣ ನಿರಾಳರಾಗುವಂತಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠ, ಪ್ರಕರಣದಲ್ಲಿ ಈಗಾಗಲೇ ಚಾರ್ಜ್​ಶೀಟ್ ಸಲ್ಲಿಕೆ