ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕ ಅವರನ್ನು ಕೇರಳದಲ್ಲಿ ಪೋಲಿಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ನಾಯ್ಕ್ ಕೋರ್ಟ್ ನಲ್ಲಿ ನಿರೀಕ್ಷಣ ಜಾಮೀನು ಅರ್ಜಿ
ಉಡುಪಿ: ಪುತ್ತಿಗೆ ಮಠದ ವಿಶ್ವ ಗೀತಾ ಪರ್ಯಾಯ ಅಂಗವಾಗಿ ಪರ್ಯಾಯ ಪೀಠಾಧೀಶರಾದ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥತೀರ್ಥ ಶ್ರೀಪಾದರ ಮಹತ್ವಾಕಾಂಕ್ಷಿ ಯೋಜನೆಯಾದ ಭಗವದ್ಗೀತಾ ಕೋಟಿ ಲೇಖನ ಯಜ್ಞ ಹಿನ್ನೆಲೆಯಲ್ಲಿ ಕೃಷ್ಣಮಠದಲ್ಲಿ ಆಯೋಜಿಸಲಾಗುವ ಬೃಹತ್ ಗೀತೋತ್ಸವ ಉದ್ಘಾಟನೆಗೆ ಕಾಂಚೀ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿಯವರನ್ನು ಆಹ್ವಾನಿಸಲಾಯಿತು. ಶ್ರೀಕ್ಷೇತ್ರ
ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಪಾಲಾದ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಕಳೆದ ಅ. 21ರಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಖ್ಯಾತ ಸಾಂಸ್ಕೃತಿಕ ಸಂಘಟಕ ಮತ್ತು ಕೊಂಕಣಿ ನಾಟಕ ಸಭಾ ಸಂಸ್ಥೆ ಹಾಗೂ ಮಂಗಳೂರಿನ ಹೆಸರಾಂತ ಡಾನ್ ಬಾಸ್ಕೋ ಸಭಾಂಗಣದ ದೀರ್ಘಕಾಲದ ವ್ಯವಸ್ಥಾಪಕ ಬೋನಿಫಾಸ್ ಪಿಂಟೋ(62) ಅವರು ಅಲ್ಪಾವಧಿಯ ಆರೋಗ್ಯ ಸಮಸ್ಯೆಯಿಂದ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಬೋನಿಫಾಸ್ ಪಿಂಟೋ ಅವರು ತಮ್ಮ ವೃತ್ತಿಜೀವನದ ಅವಧಿಯಲ್ಲಿ 28 ವರ್ಷಗಳ ಕಾಲ ಕೆಎನ್‌ಎಸ್‌ಗೆ ವ್ಯವಸ್ಥಾಪಕರಾಗಿ
ವಾಷಿಂಗ್ಟನ್: ಅಮೆರಿಕದ ನೂತನ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರತಿಸ್ಪರ್ಧಿ ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಅವರನ್ನು ಅರಿಜೋನಾ ಸೇರಿ ಎಲ್ಲಾ 7 ನಿರ್ಣಾಯಕ ರಾಜ್ಯಗಳಲ್ಲಿ ಸೋಲು ಕಾಣುವಂತೆ ಮಾಡಿ, ಗೆಲುವಿನ ನಗೆ ಬೀರಿದ್ದಾರೆ. ಈ ಬಾರಿಯ ಅಧ್ಯಕ್ಷೀಯ ಚುನಾವಣೆಯಲ್ಲಿ ಪೆನ್ಸಿಲ್ವೇನಿಯಾ, ಮಿಷಿಗನ್, ವಿಸ್ಕಾನ್‌ಸಿನ್, ನೆವಾಡ, ಅರಿಜೋನಾ, ಜಾರ್ಜಿಯಾ
ಉಡುಪಿ ಕಿನ್ನಿಮೂಲ್ಕಿ ವೇಗಸ್ ಲೇಔಟ್‌ನಲ್ಲಿ ನಿರ್ಮಿಸಲಾದ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಆಶ್ರಯದ ನೇತ್ರಜ್ಯೋತಿ ಇನ್ಸ್ಟಿಟ್ಯೂಷನ್ಸ್‌ನ ನೂತನ ಕಟ್ಟಡ ಶುಕ್ರವಾರ ಉದ್ಘಾಟನೆಗೊಂಡಿತು. ಕಾಠ್ಯಕ್ರಮ ಉದ್ಘಾಟಿಸಿದ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಶ್ರೀಕೃಷ್ಣ ಗೀತೆಯ ಮೂಲಕ ಹೊಸ ಬೆಳಕನ್ನು ನೀಡಿದ್ದಾನೆ. ಮನುಷ್ಯನಿಗೆ ಭಗವಂತ ನೀಡಿದ ಕಣ್ಣುಗಳಿಗೆ ಧಕ್ಕೆಯುಂಟಾದಾಗ ನೇತ್ರ ವೈದ್ಯರ ಸಹಕಾರ
ಪರ್ತ್ನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಕೇವಲ 140 ರನ್ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಮೊಹಮ್ಮದ್ ರಿಝ್ವಾನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು ನಿರೀಕ್ಷಿತ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕರಾಗಿ ಕಣಕ್ಕಿಳಿದ ಮ್ಯಾಥ್ಯೂ ಶಾರ್ಟ್
ಉಡುಪಿ : ಬ್ಯಾಂಕ್‌ನ ಸಾಲ ವಿತರಣೆ ಪ್ರಕ್ರಿಯೆಯಲ್ಲಿ ಸಹಕಾರಿ ನಿಯಮ ಉಲ್ಲಂಘಿಸಿದ್ದಾರೆ ಎಂಬ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಅವರ ಆರೋಪಕ್ಕೆ ಉಡುಪಿ ಶಾಸಕ ಹಾಗೂ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಅಧ್ಯಕ್ಷ ಯಶಪಾಲ್ ಸುವರ್ಣ ಶನಿವಾರ ಹೇಳಿದ್ದಾರೆ. ನಗರದ ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾಗುತ್ತಿರುವ ಆರೋಪದ ಬಗ್ಗೆ,
ಭಾರತದ ಡಬಲ್ ಒಲಿಂಪಿಕ್ ಪದಕ ವಿಜೇತ ಮತ್ತು ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ತಮ್ಮ ಕೋಚ್ ಅನ್ನು ಬದಲಿಸಿದ್ದಾರೆ. ವಾಸ್ತವವಾಗಿ, ನೀರಜ್ ಚೋಪ್ರಾ ಇಲ್ಲಿಯವರೆಗೆ ಜರ್ಮನ್ ಕೋಚ್ ಕ್ಲಾಸ್ ಬಾರ್ಟೋನಿಟ್ಜ್ ಅವರ ತರಬೇತಿಯಲ್ಲಿ ಅಭ್ಯಾಸ ನಡೆಸುತ್ತಿದ್ದರು. ಆದರೆ ಕ್ಲಾಸ್ ಬಾರ್ಟೋನಿಟ್ಜ್ ಇತ್ತೀಚೆಗಷ್ಟೇ ಕೋಚಿಂಗ್‌ನಿಂದ ನಿವೃತ್ತರಾಗಿದ್ದು, ಇದೀಗ ಅವರ ಸ್ಥಾನಕ್ಕೆ
ಬೆಂಗಳೂರು, ನವೆಂಬರ್ 09: ಚಿನ್ನದ ವ್ಯಾಪಾರಿ ಸುರೇಂದ್ರ ಕುಮಾರ್ ಜೈನ್ ಅವರ ಜ್ಯುವೆಲರಿ ಶಾಪ್ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ ವ್ಯಕ್ತಿ ವ್ಯಾಪಾರಿಯ ಮನೆಯಲ್ಲಿ ಬರೋಬ್ಬರಿ 15.15 ಕೋಟಿ ರೂ. ಮೌಲ್ಯದ 18.4 ಕೆ.ಜಿಯ ಚಿನ್ನಾಭರಣ ಕದ್ದು ಪರಾರಿಯಾಗಿರುವಂತಹ ಘಟನೆ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನ.7ರಂದು ಊರಿನಿಂದ ವಾಪಸಾದಾಗ ಕಳ್ಳತನ ಬೆಳಕಿಗೆ