ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಪಿಥೋರಗಢ: ಉತ್ತರಾಖಂಡದ ಪಿಥೋರಗಢದ ಮುವಾನಿ ಪಟ್ಟಣದಲ್ಲಿ 13 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ವೊಂದು ಕಂದಕಕ್ಕೆ ಉರುಳಿಬಿದ್ದಿದ್ದು, ಭೀಕರ ಅಪಘಾತದಲ್ಲಿಕನಿಷ್ಠ ಎಂಟು ಜನ ಸಾವನ್ನಪ್ಪಿದ್ದಾರೆ. ಸೋನಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ 150 ಮೀಟರ್ ಆಳದ ಕಂದಕಕ್ಕೆ ವಾಹನ ಬಿದ್ದಿದೆ. ದುರಂತ ಘಟನಾ ಸ್ಥಳಕ್ಕೆ ಪೊಲೀಸರು ತಲುಪಿದ್ದು, ರಕ್ಷಣಾ ಕಾರ್ಯಾಚರಣೆ

ಶ್ರೀನಗರ: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಟೆಂಪೋ ಟ್ರಾವೆಲರ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, ಕನಿಷ್ಠ 17 ಜನರು ಗಾಯಗೊಂಡಿದ್ದಾರೆ. ವಾಹನವು ಗುಡ್ಡಗಾಡು ಪ್ರದೇಶದಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗಿಳಿದು ಕಡಿದಾದ ಇಳಿಜಾರಿನಲ್ಲಿ ಉರುಳಿದೆ ಎಂದು ವರದಿಯಾಗಿದೆ. ವಾಹನದಲ್ಲಿ ಎಷ್ಟು

ನ್ಯೂಯಾರ್ಕ್: ಯಶಸ್ವಿ ಬಾಹ್ಯಾಕಾಶ ಯಾನ ಮುಕ್ತಾಯಗೊಳಿಸಿದ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲ ಅವರಿದ್ದ ತಂಡ ಇಂದು ಡ್ರ್ಯಾಗನ್ ನೌಕೆಯ ಮೂಲಕ ಯಶಸ್ವಿಯಾಗಿ ಭೂಮಿಗೆ ಮರಳಿದ್ದಾರೆ. "ನಾವು ಮನೆಗೆ ಮರಳಿದ್ದೇವೆ" ಆಕ್ಸಿಯಮ್ -4 ಮಿಷನ್ ಕಮಾಂಡರ್ ಪೆಗ್ಗಿ ವಿಟ್ಸನ್, ಜುಲೈ 15 ರಂದು ಪೆಸಿಫಿಕ್ ಮಹಾಸಾಗರದ ಸ್ಯಾನ್ ಡಿಯಾಗೋ ಬಳಿಯ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ

ಬೆಂಗಳೂರು: ಸೋಮವಾರ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರು ಮಂಗಳವಾರ ತಮ್ಮ ಹುಟ್ಟೂರು ಚನ್ನಪಟ್ಟಣದ ದಶಾವರದ ಮಣ್ಣಲ್ಲಿ ಮಣ್ಣಾಗಿದ್ದು, ಅಭಿನಯ ಸರಸ್ವತಿ ಇನ್ನೂ ನೆನಪು ಮಾತ್ರ. ಇಂದು ಮಧ್ಯಾಹ್ನ ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿತು. ದಶಾವರದಲ್ಲಿ ಅವರ ತಾಯಿಯ ಸಮಾಧಿ ಪಕ್ಕವೇ

ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಇಂದು ಉಡುಪಿ ನಗರದ ಬನ್ನಂಜೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ವಿವಿಧ ಇಲಾಖೆಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿ ಒಳಗೊಂಡ ಈ ವಸ್ತು ಪ್ರದರ್ಶನವನ್ನು

ಚೆನ್ನೈ:ಜು. 14: ತಮಿಳು ಸಿನಿಮಾದ ಸಾಹಸ ದೃಶ್ಯ ಚಿತ್ರೀಕರಣದ ವೇಳೆ ಸ್ಟಂಟ್ ಮಾಸ್ಟರ್ ಎಸ್.ಎಂ. ರಾಜು ಅವರು ನಿಧನರಾಗಿದ್ದಾರೆ. ನಟ ಆರ್ಯ ಅವರ ವೆಟ್ಟುವಂ ಚಿತ್ರದ ಚಿತ್ರೀಕರಣದ ವೇಳೆ ಸಾಹಸ ಕಲಾವಿದರೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಮಿಳು ಸ್ಟಾರ್ ನಟ ವಿಶಾಲ್ ದೃಢಪಡಿಸಿದ್ದಾರೆ. ಜುಲೈ 13 ರಂದು ಪಾ. ರಂಜಿತ್ ನಿರ್ದೇಶನದ ಆರ್ಯ

ಉಡುಪಿ: ಜು. 14: ಉಡುಪಿಯ ಸರ್ಕಾರಿ ಬಾಲಕರ ವೀಕ್ಷಣಾ ಕೇಂದ್ರದಿಂದ ಇಬ್ಬರು ಬಾಲಕರು ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಕಾಣೆಯಾದ ಮಕ್ಕಳನ್ನು ಬೆಂಗಳೂರಿನ ಜ್ಞಾನ ಮಂದಿರ ಸರ್ಕಾರಿ ಶಾಲೆಯ ವಿದ್ಯಾರ್ಥಿ ದಿಲೀಪ್ (14) ಮತ್ತು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ರಾಜೇಶ್ವರಿ ನಗರ ಗಾರ್ಡನ್ ನಿವಾಸಿ ಧನರಾಜ್ (13) ಎಂದು

ಶಿವಮೊಗ್ಗ: ಎಡಬಿಡದೆ ಸುರಿಯುತ್ತಿರುವ ಮಳೆಯ ನಡುವೆಯೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಮಧ್ಯಾಹ್ನ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಿರುವ ಭಾರತದ ಎರಡನೇ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆಯನ್ನು ಉದ್ಘಾಟಿಸಿದರು. ಬಿಜೆಪಿಯ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ

ನವದೆಹಲಿ: ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ(ಐಎಸ್‌ಎಸ್‌) 18 ದಿನಗಳ ವಾಸ್ತವ್ಯದ ನಂತರ ಭಾರತೀಯ ಗಗನಯಾನಿ ಶುಭಾಂಶು ಶುಕ್ಲಾ ಹಾಗೂ ಇತರೆ ಮೂವರು ಗಗನಯಾತ್ರಿಗಳು ಸೋಮವಾರ ಮಧ್ಯಾಹ್ನ ಡ್ರ್ಯಾಗನ್ ಗ್ರೇಸ್ ಬಾಹ್ಯಾಕಾಶ ನೌಕೆಯನ್ನು ಪ್ರವೇಶಿಸಿದ್ದು, ಭೂಮಿಯತ್ತ ತಮ್ಮ ಪ್ರಯಾಣ ಆರಂಭಿಸಲು ಸಿದ್ಧರಾಗಿದ್ದಾರೆ. ಮಿಷನ್ ಪೈಲಟ್ ಶುಕ್ಲಾ, ಕಮಾಂಡರ್ ಪೆಗ್ಗಿ ವಿಟ್ಸನ್

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸರೋಜಾ ದೇವಿ 1938ರ ಜನವರಿ 7ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ. ಸರೋಜಾ ಬಳಿ ಭೈರಪ್ಪ