ಬೆಂಗಳೂರು, ಆಗಸ್ಟ್ 30: ಕರ್ನಾಟಕದಲ್ಲಿ ಮಳೆ ಹೆಚ್ಚಳದ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರ್ತಿಲ್ಲ. ಹೀಗಾಗಿ ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರುಹಿಸಿಕೊಳ್ಳಲಾಗುತ್ತಿದ್ದು, ಬೆಲೆ ಏರಿಕೆಯಾಗಿದೆ. ಒಂದು ಕೆಜಿ ಈರುಳ್ಳಿಯ ಬೆಲೆ 60-70 ರೂಪಾಯಿ ಆಗಿದೆ. ಹಬ್ಬದ ವೇಳೆಗೆ ಈರುಳ್ಳಿಯ ಬೆಲೆ ಮತ್ತಷ್ಟು