ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್ ಲಾರಿಯೊಂದು ಹೆದ್ದಾರಿ ಬದಿಯ ಚರಂಡಿಗೆ ಬಿದ್ದಿದ್ದು, ಲಾರಿಯ ಕಂಟೈನರ್ ಹೆದ್ದಾರಿಯಲ್ಲಿ ಅಡ್ಡಲಾಗಿ ತಿರುಗಿ ನಿಂತ ಘಟನೆ ಉಪ್ಪಿನಂಗಡಿ ಬಳಿಯ ಕೂಟೇಲು ಎಂಬಲ್ಲಿ ಇಂದು ನಡೆದಿದೆ. ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿರುದ್ಧ ದಿಕ್ಕಿನಲ್ಲಿ

ಬೆಂಗಳೂರು, ಜೂನ್.25: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ  ಪೂರ್ವಭಾವಿ ಸಭೆ ನಡೆದಿದ್ದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಡಿಸೆಂಬರ್‌ 20ರಿಂದ 3 ದಿನಗಳ ಕಾಲ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮಂಡ್ಯದಲ್ಲಿ

ಮಂಗಳೂರು, ಜೂನ್.25: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್ ಕುಟುಂಬ ಸಮೇತ ಭೇಟಿ ನೀಡಿ ಮಹಾಪೂಜೆ, ಆಶ್ಲೇಷ ಬಲಿ ಪೂಜೆಯಲ್ಲಿ ಭಾಗಿಯಾದರು. ಕುಟುಂಬ ಸಮೇತರಾಗಿ ಆಗಮಿಸಿದ ಡಿಕೆ ಶಿವಕುಮಾರ್ ಅವರು ಆನೆ ಬಳಿ ಆಶೀರ್ವಾದ ಪಡೆದರು. ಸುಬ್ರಹ್ಮಣ್ಯ ದೇವಾಲಯದ ಆಡಳಿತ

T20 World Cup 2024: ಟಿ20 ವಿಶ್ವಕಪ್​ನಿಂದ ಆಸ್ಟ್ರೇಲಿಯಾ ತಂಡ ಹೊರಬಿದ್ದ ಬೆನ್ನಲ್ಲೇ ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸೂಪರ್-8 ಸುತ್ತಿನ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ದ ಆಸ್ಟ್ರೇಲಿಯಾ 24 ರನ್​ಗಳಿಂದ ಸೋಲನುಭವಿಸಿತ್ತು. ಈ ಸೋಲಿನೊಂದಿಗೆ ವಾರ್ನರ್ ತಮ್ಮ ಟಿ20 ಕೆರಿಯರ್ ಅಂತ್ಯಗೊಳಿಸಿದ್ದಾರೆ.ಈ ಬಾರಿಯ

ರಷ್ಯಾದ ಡಾಗೆಸ್ತಾನ್‌ನಲ್ಲಿ ಅಪರಿಚಿತ ಬಂಧೂಕುದಾರಿಗಳು ಸಿನಗಾಗ್, ಆರ್ಥೊಡಾಕ್ಸ್ ಚರ್ಚ್‌ಗಳು ಹಾಗೂ ಪೊಲೀಸ್ ಪೋಸ್ಟ್‌ನಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಆರ್ಥೊಡಾಕ್ಸ್ ಚರ್ಚ್‌ನ ಪಾದ್ರಿ, ನಾಗರಿಕರು ಹಾಗೂ ಕನಿಷ್ಠ 15 ಮಂದಿ ಪೊಲೀಸ್‌ ಅಧಿಕಾರಿಗಳನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ಕಳೆದ ಮೂರ‍್ನಾಲ್ಕು ತಿಂಗಳ ಹಿಂದೆಯಷ್ಟೇ ಮಾಸ್ಕೋ ಬಳಿಯ ಸಂಗೀತ ಕಛೇರಿ ಹಾಲ್

ಹಿರಿಯಡ್ಕ:ಜೂ.25: ಉಡುಪಿ ಜಿಲ್ಲೆಯಲ್ಲಿ ಅತಂಕ‌ ಸೃಷ್ಟಿಸಿದ್ದ ಗ್ಯಾಂಗ್ ವಾರ್ ಅರೋಪಿಗಳು ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಸಂಭವಿಸಿದೆ. ಕಾರಾಗೃಹದಲ್ಲಿರುವ ಈ ಖತರ್ ನಾಕ್ ಗ್ಯಾಂಗ್ ಕುರ್ಚಿ ಅಡುಗೆ ಮನೆಯಲ್ಲಿದ್ದ ಚಾಹಾ ಸೌಟು ಪಾತ್ರೆಗಳಿಂದ ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್ ಹುದ್ದೆಗೆ ಇಂದು ಅಭ್ಯರ್ಥಿಗಳ ನಾಮನಿರ್ದೇಶನ ನಡೆಯಲಿದ್ದು, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ತನ್ನ ಅಭ್ಯರ್ಥಿಯನ್ನು ಘೋಷಿಸುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ ಹಿಂದಿನ ಲೋಕಸಭೆಯಲ್ಲಿ ಸ್ಪೀಕರ್ ಆಗಿದ್ದ ಓಂ ಬಿರ್ಲಾ ಅವರನ್ನು ಸ್ಪೀಕರ್ ಸ್ಥಾನಕ್ಕೆ ಒಮ್ಮತದ ಅಭ್ಯರ್ಥಿಯಾಗಿ ಎನ್‌ಡಿಎ ಸೂಚಿಸಿದೆ ಆದರೆ ವಿರೋಧ ಪಕ್ಷಗಳಿಂದ

ಮಂಗಳೂರು: ಮಂಗಳೂರು ಹೊರವಲಯದಲ್ಲಿರುವ ಪಾವೂರು ಉಳಿಯ ದ್ವೀಪವು ಅಕ್ರಮ ಮರಳು ದಂಧೆಯಿಂದಾಗಿ ನಿಧಾನವಾಗಿ ಕಣ್ಮರೆಯಾಗುತ್ತಿದ್ದು, ಪರಿಣಾಮ ಈ ಪ್ರದೇಶದಲ್ಲಿ ಮೂರು ತಲೆಮಾರುಗಳಿಂದ ವಾಸವಿರುವ 50ಕ್ಕೂ ಅಧಿಕ ಕುಟುಂಬಗಳು ಭಯ, ಆತಂಕದಲ್ಲೇ ಜೀವನ ಸಾಗಿಸುವಂತಾಗಿದೆ. ದ್ವೀಪ ಉಳಿಸಿ, ಜನತೆಯ ಬದುಕು ರಕ್ಷಿಸಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಕಥೋಲಿಕ್ ಸಭಾ ಮಂಗಳೂರು ಪ್ರದೇಶ್,

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ನಂದಿನಿ ಹಾಲಿನ ದರಗಳನ್ನು ಏರಿಕೆ ಮಾಡಿದೆ. ಪ್ರತಿ ಲೀಟರ್‌ಗೆ 2 ರುಪಾಯಿ ಏರಿಕೆ ಮಾಡಲಾಗಿದ್ದು, ಒಂದು ಲೀಟರ್‌ ಹಾಲಿನ ದರ ನಾಳೆಯಿಂದ 44 ರೂ. ಆಗುತ್ತಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಂದಿನಿ ಹಾಲಿನ ದರ ಹೆಚ್ಚಿಸಿದೆ ಎಂದು ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ.

ಅಯೋಧ್ಯೆ: ಜನವರಿ 22 ರಂದು ಪ್ರಾಣ ಪ್ರತಿಷ್ಠೆಯಾಗಿ ಲೋಕಾರ್ಪಣೆಯಾದ ಅಯೋಧ್ಯೆ ರಾಮಮಂದಿರದ ಮಾಳಿಗೆಯಲ್ಲಿ ನೀರು ಸೋರಿಕೆಯಾಗುತ್ತಿದೆ ಎಂದು ಮಂದಿರ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ರಾಮ ಮಂದಿರವು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾದ ನಂತರದಲ್ಲಿ ಸುರಿದ ಮೊದಲ ಭಾರಿ ಮಳೆಯ ಸಂದರ್ಭದಲ್ಲಿ ಗರ್ಭಗುಡಿಯಲ್ಲಿ ನೀರು ಸೋರುತ್ತಿದೆ.