ಬೆಂಗಳೂರು: ಕಳ್ಳ ಸಾಗಾಣಿಕೆಯಲ್ಲಿ ಚಿನ್ನಾಭರಣ ಸಾಗಿಸಲು ಯತ್ನಿಸಿದ ಮೂವರು ವಿದೇಶಿಗರನ್ನು ಬಂಧಿಸಿ 2.44 ಕೆಜಿ ಚಿನ್ನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಥಾಯ್ಲೆಂಡ್ ದೇಶದ ಬ್ಯಾಂಕಾಂಕ್ ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 3 ವಿದೇಶಿಗರಿಂದ ರೂ.1.71 ಕೋಟಿ ಮೌಲ್ಯದ 2.44 ಕೆಜಿ
ಶಿರೂರು: ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬುಧವಾರ ಬೆಳಗ್ಗೆ ನಿಧಾನಗತಿಯಲ್ಲಿ ಪುನರಾರಂಭಗೊಂಡ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯು ಭಾರೀ ಮಳೆ ಮತ್ತು ಸ್ಥಳದಲ್ಲಿ ಸಣ್ಣ ಭೂಕುಸಿತದಿಂದಾಗಿ ಸ್ಥಗಿತಗೊಂಡಿದೆ. ಗುಡ್ಡದ ಭಾಗವು ಜಾರುತ್ತಲೇ ಇದೆ, ಇದು NDRI
ಪಾಟ್ನಾ: ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS)ಯ ಮೂವರು ವೈದ್ಯಕೀಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದೆ.ಅವರ ಮೊಬೈಲ್ ಫೋನ್ಗಳು ಮತ್ತು ಲ್ಯಾಪ್ಟಾಪ್ಗಳನ್ನು ಸಹ ತನಿಖಾ ಸಂಸ್ಥೆ ವಶಪಡಿಸಿಕೊಂಡಿದೆ. 2021 ರ ಬ್ಯಾಚ್ಗೆ ಸೇರಿದ ವಿದ್ಯಾರ್ಥಿಗಳನ್ನು
ಹಾಸನ, ಜುಲೈ: ಹಾಸನ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್ನಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು ವಾಹನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಇಂದು ಮುಂಜಾನೆ ದೊಡ್ಡತಪ್ಲು ಬಳಿ ಗುಡ್ಡ ಕುಸಿತ ಸಂಭವಿಸಿದೆ. ಗುಡ್ಡ ಕುಸಿತದಿಂದ ಸುಮಾರು 10 ಕಿಮೀ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ಟ್ರಕ್, ಲಾರಿ ಟ್ಯಾಕರ್
ಉಡುಪಿ, ಜುಲೈ.18: ವೈದ್ಯಕೀಯ ಲೋಕದಲ್ಲಿ ಸಾಧನೆಗೈದ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ, ಪದ್ಮ ವಿಭೂಷಣ ಪ್ರೊ.ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್(90)ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ವಲಿಯಥಾನ್ ತಡರಾತ್ರಿ 9.14ಕ್ಕೆ ಮಣಿಪಾಲದಲ್ಲಿ ನಿಧನರಾಗಿದ್ದಾರೆ. ಪತ್ನಿ, ಒಬ್ಬ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಉಡುಪಿ ಜಿಲ್ಲೆ ಮಣಿಪಾಲದ MAHE ಯುನಿವರ್ಸಿಟಿಯ ವಿಶ್ರಾಂತ ಉಪಕುಲಪತಿಯಾಗಿದ್ದ ಡಾ.ವಲಿಯಥಾನ್
ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಟಪಾಡಿ ಜಂಕ್ಷನ್ ಬಳಿ ಭೀಕರ ಅಪಘಾತ ನಡೆದ ಪರಿಣಾಮ ಹೈವೆ ಬಳಿ ಇದ್ದ ಪೊಲೀಸ್ ಹಾಗೂ ಕಾರಿನ ಪ್ರಯಾಣಿಕರು ಗಾಯಗೊಂಡ ಘಟನೆ ಜು.೧6 ರಂದು ನಡೆದಿದೆ. ಹರೀಶ್ ನಾರಾಯಣ ಪೂಜಾರಿ ಎಂಬವರು ತಮ್ಮ ಕಾರಿನಲ್ಲಿ ಉದ್ಯಾವರದಿಂದ ಪಡುಬಿದ್ರಿಗೆ ತೆರಳಿದ್ದರು. ಈ ವೇಳೆ ಹೈವೇ
ಬೆಂಗಳೂರು, ಜುಲೈ 17: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಹಗರಣದ ಆರೋಪಿಗಳ ಹೇಳಿಕೆ ಆಧರಿಸಿ ಈ
ಉಡುಪಿ:ಇ೦ದು ಆಷಾಢ ಏಕಾದಶಿ ವಿವಿದೆಡೆಯಲ್ಲಿ ತಪ್ತಮುದ್ರಾಧಾರಣೆಯು ನೆರವೇರಿತು. ಬೆಂಗಳೂರಿನ ಗೋವರ್ಧನ ಕ್ಷೇತ್ರ ಶ್ರೀ ಪುತ್ತಿಗೆ ಮಠದಲ್ಲಿ ಪರಮಪೂಜ್ಯ ಅದಮಾರು ಮಠದ ಹಿರಿಯ ಶ್ರೀಪಾದರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೇಪಾದರಿಂದ ನೆರೆದ ಭಕ್ತರಿಗೆ ತಪ್ತಮುದ್ರಾಧಾರಣೆ ನಡೆಯಿತು .ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ,ಉಡುಪಿಯಲ್ಲಿ ಬುಧವಾರ ಬೆಳಿಗ್ಗೆ ಘಂಟೆ
ಚಿಕ್ಕಮಗಳೂರು: ಮಳೆಯಲ್ಲಿ ಸಂಚರಿಸುತ್ತಿದ್ದಾಗಲೇ ಬಸ್ಸಿನ ಚಕ್ರ ಕಳಚಿ ಬಿದ್ದ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರೋಟರಿ ಸರ್ಕಲ್ನಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಖಾಸಗಿ ಬಸ್ಸು ಬೆಂಗಳೂರಿನಿಂದ ಹೊರಟು ಶೃಂಗೇರಿಗೆ ಬರುತ್ತಿತ್ತು. ಬೆಳಗ್ಗೆ 5:18 ರ ವೇಳೆಗೆ ರೋಟರಿ ಸರ್ಕಲ್ನಲ್ಲಿ ಬಸ್ಸು ಸಂಚರಿಸುತ್ತಿದ್ದಾಗ ಹಿಂಬದಿಯ ಎರಡೂ ಚಕ್ರ ಕಳಚಿದೆ. ಏಕಕಾಲಕ್ಕೆ ಬಸ್ಸಿನ ಎರಡು
ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ತಗ್ಗಿದರೂ ಗುಡ್ಡ ಕುಸಿತದ ಆತಂಕ ತಪ್ಪಿಲ್ಲ. ಗೋಕರ್ಣದಲ್ಲಿ ಬೆಳ್ಳಂಬೆಳಿಗ್ಗೆ ಗುಡ್ಡ ಕುಸಿದಿದೆ. ಗೋಕರ್ಣ ಮುಖ್ಯಕಡಲತೀರದ ರಾಮಮಂದಿರ ಬಳಿ ಗುಡ್ಡ ಕುಸಿತವಾಗಿದೆ. ಮಂದಿರದಲ್ಲಿ ಯಾರು ಇಲ್ಲದ ಕಾರಣ ಅನಾಹುತ ನಡೆದಿಲ್ಲ. ಗುಡ್ಡದ ಕಲ್ಲುಗಳು ದೇವಾಲಯದ ಗೋಡೆತನಕ ಉರುಳಿ ಬಂದು ನಿಂತಿವೆ. ಹೆಚ್ಚಿನ ಅನಾಹುತವಾಗಿಲ್ಲ.