ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಬೆಂಗಳೂರು, ಜೂ. 07; ಮಹಿಳೆಯ ಅಪಹರಣ ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭವಾನಿ ರೇವಣ್ಣ ಅವರು ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಇದರ ಬೆನ್ನಲ್ಲೇ ಅವರ ಕಾರು ಚಾಲಕ ಅಜಿತ್‌ನನ್ನೂ ಎಸ್‌ಐಟಿ ಬಂಧಿಸಿರುವುದಾಗಿ ತಿಳಿದುಬಂದಿದೆ. ಬುಧವಾರ ರಾತ್ರಿಯೇ ಚಿಕ್ಕಮಗಳೂರಿನಲ್ಲಿ ಅಜಿತ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು. ಚಾಲಕ ಅಜಿತ್ ಚಿಕ್ಕಮಗಳೂರಿನ ಸಂಬಂಧಿಕರ

ಮುಂಬೈ , ಜೂ. 07: ರಷ್ಯಾದ ನದಿಯಲ್ಲಿ ಮುಳುಗಿ ಮೃತಪಟ್ಟ ಭಾರತದ ನಾಲ್ವರು ವಿದ್ಯಾರ್ಥಿಗಳಲ್ಲಿ ಒಬ್ಬ ಸಾಯುವ ಹೊತ್ತಿನಲ್ಲಿ ಮನೆಯವರಿಗೆ ವಿಡಿಯೊ ಕರೆ ಮಾಡಿದ್ದ ಎಂದು ವರದಿಯಾಗಿದೆ. ರಷ್ಯಾದ ವಿಲಿಕಿ ನವ್‌ಗೊರೊಡ್‌ನಲ್ಲಿರುವ ನವ್‌ಗೊರೊಡ್‌ ಸ್ಟೇಟ್‌ ಯೂನಿವರ್ಸಿಟಿಯಲ್ಲಿ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ ಹರ್ಷಲ್ ಅನಂತ್‌ರಾವ್‌ ದೆಸಾಲೆ, ಜಿಶಾನ್ ಅಷ್ಪಕ್ ಪಿಂಜಾರಿ,

ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಮಹಿಳಾ ಪ್ರಯಾಣಿಕರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬಂಧನಕ್ಕೊಳಪಡಿಸಿದ್ದು, 6 ಕೋಟಿ ರೂಪಾಯಿ ಮೌಲ್ಯದ 9 ಕೆಜಿಗೂ ಅಧಿಕ ಚಿನ್ನಾಭರಣವನ್ನು ವಶಕ್ಕೆ ಪಡದಿದ್ದಾರೆ. ಬಂಧಿತ ಇಬ್ಬರು ಮಹಿಳೆಯರು ಪಶ್ಚಿಮ ಬಂಗಾಳ ಹಾಗೂ ಹರಿಯಾಣ

ಇಂಫಾಲ: ಜನಾಂಗೀಯ ಕಲಹ ಎದುರಿಸಿದ್ದ ಮಣಿಪುರ ಮತ್ತೆ ಆತಂಕದ ಪರಿಸ್ಥಿತಿ ಎದುರಿಸಿದೆ. ಜಿರಿಬಮ್ ಜಿಲ್ಲೆಯಲ್ಲಿ 59 ವರ್ಷದ ನಿರ್ದಿಷ್ಟ ಸಮುದಾಯವೊಂದರ ವ್ಯಕ್ತಿಯನ್ನ ಮತ್ತೊಂದು ಸಮುದಾಯದ ಉಗ್ರರು ಹತ್ಯೆ ಮಾಡಿದ್ದಾರೆ. ಸೋಯಬಮ್ ಶರತ್‌ಕುಮಾರ್ ಸಿಂಗ್ ಎಂದು ಗುರುತಿಸಲಾದ ವ್ಯಕ್ತಿ ಬೆಳಿಗ್ಗೆ ತನ್ನ ಜಮೀನಿಗೆ ಹೋದ ನಂತರ ನಾಪತ್ತೆಯಾಗಿದ್ದ. ಆ ಬಳಿಕ ಆತನ ಮೃತದೇಹ

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದಾರೆ ಎಂದು ಬಿಜೆಪಿ ಕರ್ನಾಟಕ ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ರಾಹುಲ್ ಗಾಂಧಿ ಇಂದು 42ನೇ ಎಸಿಎಂಎಂ ಕೋರ್ಟ್ ಗೆ ವಿಚಾರಣೆಗೆ ಖುದ್ಧ ಹಾಜರಾಗಿದ್ದರು.

ಬೆಂಗಳೂರು, (ಜೂನ್ 07):  ವಾಲ್ಮೀಕಿ ಅಭಿವೃದ್ಧಿ ನಿಗಮದ 185 ಕೋಟಿ ರೂಪಾಯಿ  ಅಕ್ರಮದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಇಂದು (ಜೂನ್ 06) ತಮ್ಮ ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಗೇಂದ್ರ ಅವರು

ನವದೆಹಲಿ: ಆಡಳಿತರೂಢ ಆಮ್ ಆದ್ಮಿ ಪಕ್ಷ ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಪಕ್ಷದ ಎಲ್ಲಾ ಶಾಸಕರ 'ತುರ್ತು' ಸಭೆ ಕರೆದಿದೆ. ಮೂಲಗಳ ಪ್ರಕಾರ, ಮುಂಬರುವ ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯದೆ ಇದೆ. ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವಾಗ, ಪಕ್ಷದ ಭವಿಷ್ಯದ

ಉಡುಪಿ: ತಾನೇ ದೇವಮಾನವ ಎಂದು ಹೇಳಿಕೊಂಡು ನಮ್ಮ ದೇಶದ ಜನಸಾಮಾನ್ಯರಲ್ಲಿ ಸುಳ್ಳು ಹೇಳಿಕೊಂಡು ತಾನೇ ದೊಡ್ಡ ಭವಿಷ್ಯದ ನಾಯಕ ಎಂದು ಬಿಂಬಿಸಿದ ನರೇಂದ್ರ ಮೋದಿಯವರ ಡೋಂಗಿ ರಾಜಕಾರಣಕ್ಕೆ ತೆರೆ ಹಾಕಿದ ನಮ್ಮ ದೇಶದ ಮತದಾರರು ಎ೦ದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸುರೇಶ್

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅದನ್ನು ವಿಡಿಯೋ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿಯನ್ನು ಗುರುವಾರ ಕೋರ್ಟ್ ಜೂನ್ 10ರ ವರೆಗೆ ವಿಸ್ತರಿಸಿ ಆದೇಶಿಸಿದೆ. ಪ್ರಜ್ವಲ್‌ ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ

ಚುನಾವಣೆ ಫಲಿತಾಂಶ ಬಳಿಕ ಎನ್‌ಡಿಎ ಮೊದಲ ಸಭೆ ಆರಂಭಕ್ಕೆ ಮುನ್ನವೇ ಮೈತ್ರಿಕೂಟದಲ್ಲಿ ಅಪಸ್ವರ ಎದ್ದಿದೆ. ನಿತೀಶ್ ಕುಮಾರ್ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ ಎಂದು ಜೆಡಿಯು ಶಾಸಕರೊಬ್ಬರು ಹೇಳಿಕೆಯೊಂದನ್ನು ಕೊಟ್ಟಿದ್ದಾರೆ.  ಪ್ರಜಾಪ್ರಭುತ್ವ ಮೌಲ್ಯಗಳನ್ನು ಗೌರವಿಸುವ ಜನರ ನಾಡಿ ಮಿಡಿತ ಅರಿತಿರುವ ನಿತೀಶ್ ಕುಮಾರ್‌ಗಿಂತ ಬೇರೆ ಸೂಕ್ತ ಅಭ್ಯರ್ಥಿ ಇಲ್ಲ ಎಂದು ಜೆಡಿಯು ಎಂಎಲ್‌ಸಿ