ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಉಡುಪಿ:ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ರಥಬೀದಿಯಲ್ಲಿರುವ ಮಠವೊ೦ದರಲ್ಲಿನ ಕಾಣಿಕೆಯ ಡಭ್ಬಿಯನ್ನು ಕಳ್ಳನೊಬ್ಬನು ಮ೦ಗಳವಾರದ೦ದು ತಡರಾತ್ರೆಯಲ್ಲಿ ಕದ್ದು ಪರಾರಿಯಾಗುತ್ತಿದ್ದ೦ತೆ ಪೊಲೀಸರ ವಶಕ್ಕೆ ಸಿಕ್ಕಿಬಿದ್ದಿರುವ ಘಟನೆಯೊ೦ದು ನಡೆದಿದೆ. ರಥಬೀದಿಯ ಶ್ರೀವ್ಯಾಸರಾಯ ಮಠದ ಒಳಭಾಗದಲ್ಲಿ ಇರಿಸಲಾಗಿದ್ದ ಕಾಣಿಕೆ ಡಬ್ಬಿಯನ್ನು ಕಳ್ಳನೊಬ್ಬನು ಕೈಯಲ್ಲಿ ಹಿಡಿದುಕೊ೦ಡು ಹೋಗುತ್ತಿರುವಾಗ ಕಳ್ಳನ್ನು ಹಿ೦ಬಾಲಿಸಿದಾಗ ಪಕ್ಕದ ಮಠದ ಕೌ೦ಪಾ೦ಡ್ ಹಾಲ್ಗೆ

ಬೆಂಗಳೂರು: ನಟ ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್‌ ಮಾಡಿಸಿದರಿಗೆ ಬಿಸಿ ಮುಟ್ಟಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮುಂದಾಗಿದೆ. ದರ್ಶನ್‌ ಮೇಲಿನ ಅಂಧಭಿಮಾನ ಪ್ರದರ್ಶನಕ್ಕೆ ಮುಂದಾಗಿ ಕಾನೂನಿನ ಕುಣಿಕೆಗೆ ಈಗ ಪೋಷಕರು ತಗ್ಲಾಕಿಕೊಂಡಿದ್ದಾರೆ. ಈ ವಿಚಾರ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಸ್ವಯಂ

ಹಾಸನ, ಜುಲೈ 3: ಹಾಸನ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಮುಂದುವರಿದಿದ್ದು, ನಿರ್ಮಾಣ ಹಂತದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಹಲವೆಡೆ ಭೂ ಕುಸಿತ ಸಂಭವಿಸಿದೆ. ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಢಿಘಾಟ್ ಮಾರ್ಗದ ಸಕಲೇಶಪುರ ಬೈಪಾಸ್​ನಲ್ಲಿ ಹಲವೆಡೆ ದೊಡ್ಡ ದೊಡ್ಡ ಬಂಡೆ ಕಲ್ಲುಗಳ ಜೊತೆ ಭಾರೀ ಪ್ರಮಾಣದಲ್ಲಿ

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತದಿಂದ 122 ಜನ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಧಾರ್ಮಿಕ ಸಭೆಯ ಸಂಘಟಕರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಬುಧವಾರ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಸ್ವಯಂ ಘೋಷಿತ ದೇವ ಮಾನವ ಬೋಲೆ ಬಾಬಾ ಹೆಸರನ್ನು ಎಫ್ಐಆರ್ ನಿಂದ ಕೈಬಿಡಲಾಗಿದೆ. ಹತ್ರಾಸ್ ಪಟ್ಟಣದಿಂದ 47 ಕಿಮೀ ದೂರದಲ್ಲಿರುವ ಫುಲ್ರೈ

ನವದೆಹಲಿ, ಜುಲೈ 3: ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಾಗೆಲ್ಲಾ ಹೊಸ ಮಟ್ಟದ ನಿರೀಕ್ಷೆಗಳು ಹುಟ್ಟುತ್ತವೆ. ಅಂತೆಯೇ ಮೋದಿ 3.0 ಸರ್ಕಾರದ ಮೊದಲ ಬಜೆಟ್ ಬಗ್ಗೆ ಬಹಳಷ್ಟು ನಿರೀಕ್ಷೆಗಳಿವೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈಗಾಗಲೇ ಬಜೆಟ್ ತಯಾರಿಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಜುಲೈ ಕೊನೆಯ ವಾರದಲ್ಲಿ ಬಜೆಟ್ ಮಂಡನೆ ಆಗಬಹುದು. ಜುಲೈ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಅವರ ಗೆಳತಿ ಪವಿತ್ರಾ ಗೌಡ ಅವರು ಎ1 ಆರೋಪಿ ಆದರೆ, ದರ್ಶನ್ ಎ2 ಆರೋಪಿ ಆಗಿದ್ದಾರೆ. ಇದರ ಜೊತೆಗೆ ಹಲವರು ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಕೋಲಾರ:ಜುಲೈ 2: ಅಪ್ರಾಪ್ತ ಬಾಲಕಿ ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದರಿಂದ ಕಾಲೇಜು ಉಪನ್ಯಾಸಕರು, ಸಹಪಾಠಿಗಳು ದಂಗಾಗಿದ್ದಾರೆ. ಸದ್ಯ

ನವದೆಹಲಿ: ವಿಶ್ವದ ಅತಿ ದೊಡ್ಡ ಚುನಾವಣಾ ಪ್ರಚಾರದಲ್ಲಿ ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ ಮತ್ತು ಕೆಲವರ ನೋವು ನನಗೆ ಅರ್ಥವಾಗುತ್ತದೆ. ನಿರಂತರವಾಗಿ ಸುಳ್ಳುಗಳನ್ನು ಹಬ್ಬಿಸಿದರೂ, ಅವರು ಸೋಲು ಅನುಭವಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದರು. ಇಂದು ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ

ಈಶಾನ್ಯ ಭಾರತದಲ್ಲಿ ಭಾರೀ ಮಳೆಯ ಕಾರಣ ಪ್ರವಾಹ ತಾಂಡವಾಡುತ್ತಿದ್ದು ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಭಾರೀ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿರುವುದರಿಂದ, ಅಸ್ಸಾಂ ಮತ್ತು ಅರುಣಾಚಲ ಪ್ರದೇಶಗಳು ತೀವ್ರ ಪ್ರವಾಹ ಪರಿಸ್ಥಿತಿ ಎದುರಿಸುತ್ತಿದೆ. ರಕ್ಷಣಾ ಕಾರ್ಯಕ್ಕಾಗಿ ಕೆಲವೆಡೆ ಐಎಎಫ್‌ ಹೆಲಿಕಾಪ್ಟರ್‌ಗಳನ್ನು ಬಳಸಲಾಗುತ್ತಿದೆ. ಅಸ್ಸಾಂನಲ್ಲಿನ ಪ್ರವಾಹ ಪರಿಸ್ಥಿತಿಯು ಜೂನ್ 30 ರ ಸಂಜೆ ಮೀತಿ ಮೀರಿತ್ತು.

ಹಾಥರಸ್ (ಉತ್ತರ ಪ್ರದೇಶ) ಜುಲೈ 02: ಮಂಗಳವಾರ ಉತ್ತರ ಪ್ರದೇಶದ  ಹಾಥರಸ್  ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ  23 ಮಹಿಳೆಯರು, ಮೂವರು ಮಕ್ಕಳು ಮತ್ತು ಒಬ್ಬ ಪುರುಷ ಸೇರಿದಂತೆ ಕನಿಷ್ಠ 27 ಜನರು ಸಾವಿಗೀಡಾಗಿದ್ದಾರೆ. ಹಾಥರಸ್ ಜಿಲ್ಲೆಯ ಸಿಕಂದ್ರ ರಾವು ಪ್ರದೇಶದ ರಾತಿ ಭನ್‌ಪುರ್ ಗ್ರಾಮದಲ್ಲಿ ವಿಶೇಷವಾಗಿ