ಸಿಂಗಾಪುರ, ಮೇ. 19: ದಿನದಿಂದ ದಿನಕ್ಕೆ ಸಿಂಗಾಪುರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಒಂದು ವಾರಕ್ಕೆ ಸುಮಾರು 26 ಸಾವಿರ ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ಜನರಿಗೆ ಮಾಸ್ಕ್ ಧರಿಸುವಂತೆ ಸಿಂಗಾಪುರ ಸರ್ಕಾರ ಆದೇಶ ಹೊರಡಿಸಿದೆ. ಕೇವಲ ಒಂದು ವಾರದಲ್ಲಿ 25,900 ಜನರಿಗೆ ಕೊರೊನಾ ಸೋಂಕು ತಗುಲಿದೆ.
ಬೈಂದೂರು: ಮನೆಯ ಗೇಟ್ ಎದುರು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ ಎಂಬಲ್ಲಿ ರವಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ ಇರ್ಷಾದ್(52) ಎಂದು ಗುರುತಿಸಲಾಗಿದೆ. ಶನಿವಾರ ತಡರಾತ್ರಿ ಸುರಿದ ಗಾಳಿಮಳೆಗೆ ಹಡವಿನ ಕೋಣೆಯಿಂದ ಮುದ್ರುಮಕ್ಕಿಗೆ ತೆರಳುವ ಮಾರ್ಗದಲ್ಲಿದ್ದ
ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಬಾಲಿವುಡ್ನಿಂದ ಹೊರಬರುವುದಾಗಿ ನಟಿ, ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಹೇಳಿದ್ದಾರೆ. ಕಂಗನಾ ರಣಾವತ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ರಾಜಕೀಯದ ಮೊದಲ ಇನ್ನಿಂಗ್ಸ್ ಆರಂಭಿಸಿದ್ದಾರೆ. ಇದೀಗ ವೈರಲ್ ಆಗುತ್ತಿರುವ ಕಂಗನಾ ಹೇಳಿಕೆಯಲ್ಲಿ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್ನಿಂದ ಹೊರಬರುವುದಾಗಿ ಹೇಳಿದ್ದಾರೆ. ಕಳೆದ ಮಂಗಳವಾರ
ಸುರತ್ಕಲ್: ಸಾಮಾಜಿಕ ಕಾರ್ಯಕರ್ತ ಆಸೀಫ್ ಆಪತ್ಬಾಂಧವ ಅವರಿಗೆ ಬೈಕ್ ನಲ್ಲಿ ಬಂದ ಅಪರಿಚಿತರಿಬ್ಬರು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೈಕಂಪಾಡಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಆಸೀಫ್ ಅವರು ಮಂಗಳೂರಿನಿಂದ ಹಳೆಯಂಗಡಿಯ ಆಪತ್ಬಾಂಧವ ಆಶ್ರಮಕ್ಕೆ ತನ್ನ ಕಾರಿನಲ್ಲಿ ಬರುತ್ತಿದ್ದರು. ಬೈಕಂಪಾಡಿ ತಲುಪುತ್ತಿದ್ದಂತೆ ಬೈಕ್ ನಲ್ಲಿ ಇಬ್ಬರು ಎಪಿಎಂಸಿ ಕಡೆಯಿಂದ ಏಕಾಏಕಿ ರಸ್ತೆಗೆ
ಉಡುಪಿ:ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ "ಗೀತಾ೦ಜಲಿ ಸಿಲ್ಕ್"ಮತ್ತು ಹೊಟೇಲ್ ಶಾ೦ತಿಸಾಗರ್ ಸ೦ಸ್ಥಾಪಕರಾದ ನೀರೆ ಬೈಲೂರು ಗೋವಿ೦ದ ನಾಯಕ್ (89)ರವರು ಮೇ 19 ಭಾನುವಾರದದ೦ದು ಬೆಳಿಗ್ಗೆ 6.10ಕ್ಕೆ ಹೃದಯಾಘಾತದಿ೦ದ ನಿಧನ ಹೊ೦ದಿದ್ದಾರೆ. ಪುತ್ರರಾದ ಶ್ರೀರಾಮಕೃಷ್ಣ ನಾಯಕ್ (ಆರ್.ಕೆ),ಲಕ್ಷ್ಮಣ ನಾಯಕ್, ರಮೇಶ್ ನಾಯಕ್,ಹರೀಶ್ ನಾಯಕ್,ಸ೦ತೋಷ್ ವಾಗ್ಳೆ,ಸುನೀತ ಪ್ರಕಾಶ್ ಪ್ರಭು,ಸೊಸೆಯ೦ದಿರು,ಮೊಮ್ಮಕ್ಕಳು ಹಾಗೂ ಅಪಾರ ಬ೦ಧು
ಶ್ರೀನಗರ, ಮೇ.19:ಜಮ್ಮು ಮತ್ತು ಕಾಶ್ಮೀರದಲ್ಲಿ ಲೋಕಸಭೆ ಚುನಾವಣೆಯ 5ನೇ ಹಂತದ ಮತದಾನಕ್ಕೆ ಕ್ಷಣನೆ ಬಾಕಿ ಇರುವಾಗಲೇ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಜಮ್ಮು ಮತ್ತು ಕಾಶ್ಮೀ ರದ ಶೋಪಿಯಾನ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ಭಯೋತ್ಪಾದಕ ದಾಳಿಯಲ್ಲಿ ಜೈಪುರದ ಪ್ರವಾಸಿ ದಂಪತಿಗಳು ಗಾಯಗೊಂಡಿದ್ದು, ಬಿಜೆಪಿಯ ಮಾಜಿ
ಬೆಂಗಳೂರು, ಮೇ 19: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿದೆ. ಸದ್ಯ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದು, ಭಾರತಕ್ಕೆ ಮರಳಿದ ಕೂಡಲೇ ಅವರನ್ನು ಬಂಧಿಸಲಾಗುತ್ತದೆ. ಜೊತೆಗೆ ಪ್ರಜ್ವಲ್ ಬಳಿಯಿರುವ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದತಿಗು ಕೂಡ
ಬೆಂಗಳೂರು, ಮೇ.19: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ (Rain) ಸುರಿಯುತ್ತಿದ್ದು ಭಾರೀ ಅವಾಂತರ ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ಯಲಹಂಕದ ನಾರ್ತ್ ಹುಡ್ ಅಪಾರ್ಟ್ಮೆಂಟ್ ಸುತ್ತಮುತ್ತ ನೀರು ತುಂಬಿಕೊಂಡಿದೆ. ಕಳೆದ ಒಂದು ವಾರದಿಂದ ರಾಜಕಾಲುವೆಯಿಂದ ನೀರು ಹರಿಯುತ್ತಿದೆ. ಸ್ಟಾರ್ಮ್ ವಾಟರ್ ಡ್ರೇನ್ ಓಪನ್ ಬಿಟ್ಟಿರೋದರಿಂದ
ಭೋಪಾಲ್ (ಮಧ್ಯಪ್ರದೇಶ): ಭೋಪಾಲ್ನ ಶಹಪುರದ ಶೀತಲ್ ಕೌಶಲ್(24) ಎಂದು ಗುರುತಿಸಲಾದ ಯುವತಿಯ ಶವ ಹಿಮಾಚಲ ಪ್ರದೇಶದ ಮನಾಲಿಯ ಹೋಟೆಲ್ವೊಂದರಲ್ಲಿ ಪತ್ತೆಯಾಗಿದೆ. ಸೋಶಿಯಲ್ ಮೀಡಿಯಾದ ಮೂಲಕ ಪರಿಚಯವಾದ ಆಕೆಯ ಸ್ನೇಹಿತ ವಿನೋದ್ ಠಾಕೂರ್ ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ . ಆರೋಪಿ ವಿನೋದ್ ಆಕೆಯ ಮೃತ ದೇಹವನ್ನು ಲಾಗೇಜ್ ಬ್ಯಾಗ್ನಲ್ಲಿ ತುಂಬಿಕೊಂಡು ಪರಾರಿಯಾಗಲು ಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ
ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಮೇ 23ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ,ಕೋಲಾರ, ಮಂಡ್ಯ,ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 20ರಂದು ಕೂಡ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಅತಿ ಹೆಚ್ಚು