ಬೆಂಗಳೂರು: ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಶಿಬಿರ 2025ರಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (NCC) ಕರ್ನಾಟಕ-ಗೋವಾ ನಿರ್ದೇಶನಾಲಯಕ್ಕೆ ಪ್ರತಿಷ್ಠಿತ ಪ್ರಧಾನ ಮಂತ್ರಿ ಬ್ಯಾನರ್ 2025ರ ಪ್ರಶಸ್ತಿ ಲಭಿಸಿದೆ. ಪ್ರಧಾನಿ ಮೋದಿಯವರಿಂದ ಎನ್‌ಸಿಸಿ ನಿರ್ದೇಶನಾಲಯ ಕರ್ನಾಟಕ ಮತ್ತು ಗೋವಾದ ಉಪ ಮಹಾನಿರ್ದೇಶಕ ಏರ್ ಕಮೋಡೋರ್ ಎಸ್‌ಬಿ ಅರುಣ್‌ಕುಮಾರ್ ವಿಎಸ್‌ಎಂ ಅವರು ಪ್ರಧಾನ ಮಂತ್ರಿಗಳ ಬ್ಯಾನರ್
ನವದೆಹಲಿ: ಭಾರತದ ಮೆಟ್ರೋ ರೈಲು ಜಾಲವು ಈಗ 1,000 ಕಿಲೋಮೀಟರ್ ಮೈಲಿಗಲ್ಲನ್ನು ದಾಟಿದೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ಮೆಟ್ರೋ ಜಾಲವನ್ನು ಹೊಂದಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಇಂದು ಶುಕ್ರವಾರ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಸಭೆಯನ್ನುದ್ದೇಶಿಸಿ ಭಾಷಣ
ಬೆಂಗಳೂರು;ಜನವರಿ 30: ಚೆಕ್ ಬೌನ್ಸ್ ಪ್ರಕರಣದಲ್ಲಿ ಮುಡಾ ಹಗರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಶಿಕ್ಷೆಗೆ ಗುರಿಯಾಗಿದ್ದಾರೆ. ಕುಮಾರ್ ಎಂಬುವವರು ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಮೈಸೂರಿನ ಮೂರನೇ ಜೆಎಂಎಫ್ ಸಿ ನ್ಯಾಯಾಲಯವು ಇಂದು(ಜನವರಿ 30) ಸ್ನೇಹಮಯಿ ಕೃಷ್ಣಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಪಿಕ್ಅಪ್ ವ್ಯಾನ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿರುವ ಘಟನೆ ಪಂಜಾಬ್ನ ಫಿರೋಜ್ಪುರದಲ್ಲಿ ಶುಕ್ರವಾರ ನಡೆದಿದೆ. 25-30 ಜನರನ್ನು ಕರೆದೊಯ್ಯುತ್ತಿದ್ದ ಪಿಕ್ ಅಪ್ ವ್ಯಾನ್ ಗುರುಹರ್‌ಸಹೈ ಪ್ರದೇಶದಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು
ನೆಲಮಂಗಲ, ಜನವರಿ 30: ತಮ್ಮ ವಿಶೇಷ ಡ್ರೆಸ್ ಕೋಡ್ನಲ್ಲಿ ಕಳ್ಳತನಕ್ಕಿಳಿಯುವ ಮೂಲಕ ಚಡ್ಡಿ ಗ್ಯಾಂಗ್ ಜನರಲ್ಲಿ ಸಾಕಷ್ಟು ಭಯ ಹುಟ್ಟಿಸಿತ್ತು. ಇದೀಗ ಇದೇ ರೀತಿಯಾಗಿ ಬೆಂಗಳೂರಿಗೆ ನಟೋರಿಯಸ್ ಗರುಡ ಗ್ಯಾಂಗ್ (Garuda Gang) ಎಂಟ್ರಿ ಕೊಟ್ಟಿದೆ. ಈ ಗ್ಯಾಂಗ್ ಸದಸ್ಯರ ಮೇಲೆ ಬೇರೆ ಬೇರೆ ಠಾಣೆಯಲ್ಲಿ ಸಾಕಷ್ಟು ಪ್ರಕರಣಗಳಿವೆ
ಪ್ರಯಾಗರಾಜ್:ಜ.30: ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯ ಮಹಾಕುಂಭ ಮೇಳ ನಡೆಯುವ ಪ್ರದೇಶದ ಸೆಕ್ಟರ್ 22 ಪ್ರದೇಶದಲ್ಲಿ ಇಂದು ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಪೆಂಡಾಲ್‌ಗಳು ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದು, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಉಂಟಾದ ಬಗ್ಗೆ ವರದಿಯಾಗಿಲ್ಲ. ಹಿರಿಯ ಅಧಿಕಾರಿಗಳು
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್
ಲಖನೌ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸೀತಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಗುರುವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಸದ ರಾಕೇಶ್ ರಾಥೋಡ್ ಅವರನ್ನು ಇಂದು ಅವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾಗಲೇ ಬಂಧಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ತನ್ನ ಮೇಲೆ ಲೈಂಗಿಕ ದೌರ್ಜನ್ಯ
ಬೆಂಗಳೂರು, ಜನವರಿ 29: ಮೈಸೂರು ರಾಜಮನೆತನ ಮತ್ತು ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದ್ದು, ಬೆಂಗಳೂರು ಅರಮನೆ ಆಸ್ತಿ ವಿಚಾರದಲ್ಲಿ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದಾರೆ. ಆ ಮೂಲಕ 472 ಎಕರೆ ಮತ್ತು 16 ಗುಂಟೆ ಬೆಂಗಳೂರು ಅರಮನೆಯ ಭೂಮಿ ಬಳಕೆ ಮತ್ತು
ವಾಷಿಂಗ್ಟನ್: ಪಿಎಸ್ ಎ ನಿರ್ವಹಣೆಯ ಅಮೆರಿಕನ್ ಏರ್ಲೈನ್ಸ್ ವಾಣಿಜ್ಯ ವಿಮಾನ ನಿನ್ನೆ ರಾತ್ರಿ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಿಲಿಟರಿ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಪೊಟೊಮ್ಯಾಕ್ ನದಿಗೆ ಬಿದ್ದು ವಿಮಾನದಲ್ಲಿದ್ದ ಎಲ್ಲಾ 64 ಮಂದಿ ಮೃತಪಟ್ಟಿರುವ ಶಂಕೆಯಿದೆ, ಈಗಾಗಲೇ ಇಬ್ಬರ ಮೃತದೇಹಗಳನ್ನು ರಕ್ಷಣಾ ಕಾರ್ಯ ತಂಡ ಹೊರತೆಗೆದಿದೆ. ನದಿಯಿಂದ