ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಮೈಸೂರು: ಇಂದು ಬೆಳಗಿನ ಜಾವ ಟ್ರಕ್ ಮತ್ತು ಬಸ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ . ಮೈಸೂರು-ಮಡಿಕೇರಿ ರಸ್ತೆಯ ಹುಣಸೂರು ತಾಲ್ಲೂಕಿನ ಜಡಗನಕೊಪ್ಪಲು ಬಳಿ ಬೆಳಗಿನ ಜಾವ 4.30 ರ ಸುಮಾರಿಗೆ ಈ ಅಪಘಾತ ಸಂಭವಿಸಿತ್ತು. ಮೃತರನ್ನು ಬಸ್ ಚಾಲಕ ಶಂಶಾದ್ ಮತ್ತು

ಮಡಿಕೇರಿ: ವಸತಿ ಶಾಲೆಯೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ. ವಸತಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ. ಪುಷ್ಪಕ್ ಚೆಟ್ಟಿಮಾನಿ ನಿವಾಸಿ ಅನೀಲ್ ಅವರ ಪುತ್ರ ಎಂದು ತಿಳಿದುಬಂದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಗೇರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬೆಳಗಿನ

ಚೆನ್ನೈ: 20 ಮಕ್ಕಳ ಸಾವಿಗೆ ಸಂಬಂಧಿಸಿದಂತೆ ಕೋಲ್ಡ್ರಿಫ್ ಸಿರಪ್ ತಯಾರಕ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಮಾಲೀಕನನ್ನು ಬಂಧಿಸಲಾಗಿದೆ. ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಶ್ರೀಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯ ಮಾಲೀಕ ರಂಗನಾಥನ್ ಅವರನ್ನು

ಗಾಜಾ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್ ತನ್ನ ಭೂಪ್ರದೇಶದ ಮೇಲಿನ ದಾಳಿಯನ್ನು ನಿಲ್ಲಿಸುವಂತೆ ಒತ್ತಾಯಿಸಿದ ನಂತರವೂ, ಶನಿವಾರ ಬೆಳಗಿನ ಜಾವದಿಂದ ಇಸ್ರೇಲಿ ಬಾಂಬ್ ದಾಳಿಯಲ್ಲಿ ಕನಿಷ್ಠ 60 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ. ಇಂದು ಬೆಳಗಿನ ಜಾವದಿಂದ ನಡೆಯುತ್ತಿರುವ ಇಸ್ರೇಲಿ ಬಾಂಬ್ ದಾಳಿಯಿಂದ ಸಾವನ್ನಪ್ಪಿದವರ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ ಪ್ರಮುಖ ಮಾರ್ಗಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡ ಪರಿಣಾಮ ಬರೊಬ್ಬರಿ ಹದಿನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ನಿನ್ನೆ ರಾತ್ರಿ ಭಾರೀ ಮಳೆಯಾಗಿದ್ದು, ಮಿರಿಕ್ ಮತ್ತು ಸುಖಿಯಾ ಪೋಖಾರಿಯಂತಹ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದೆ. ಪೊಲೀಸರು ಮತ್ತು ಸ್ಥಳೀಯ

ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾದ ಆಕರ್ಷಣೆಯ ಕೇಂದ್ರಬಿಂದುವಾಗಿರುವ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಸಂಜೆ 4.42ರಿಂದ 5.06 ವರೆಗಿನ ಕುಂಭ ಲಗ್ನದ ಶುಭ ಮುಹೂರ್ತದಲ್ಲಿ, ಚಿನ್ನದ ಅಂಬಾರಿಯಲ್ಲಿ ಆಸೀನಳಾಗಿರುವ ಚಾಮುಂಡೇಶ್ವರಿ ತಾಯಿಗೆ ಸಿಎಂ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಆರಂಭಗೊಂಡಿದೆ. ಜಂಬೂ ಸವಾರಿಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ

ಉಡುಪಿ:ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಶ್ರೀ ದೇವರ ಸನ್ನಿಧಿಯಲ್ಲಿ ನವರಾತ್ರಿಯ ದಶಮಿ ದಿನವಾದ ಗುರುವಾರದ೦ದು ಚಂಡಿಕಾ ಯಾಗ ನಡೆಯಿತು. ಅರ್ಚಕರಾದ ಕೃಷ್ಣಾನಂದ ಭಟ್ ಮಣಿಪಾಲ್ , ಶರತ್ ಭಟ್ ಮಲ್ಪೆ ಧಾರ್ಮಿಕ ಪೂಜಾ ವಿಧಿಗಳನ್ನು ನಡೆಸಿ ಕೊಟ್ಟರು. ದೇವಳದ ಅರ್ಚಕರಾದ ದೀಪಕ್ ಭಟ್ , ದಯಾಘನ್ ಭಟ್ , ವಿನಾಯಕ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು ವಿಜಯದಶಮಿ ಜಂಬೂ ಸವಾರಿಯೊಂದಿಗೆ ನವರಾತ್ರಿ ಹಬ್ಬ ಮುಕ್ತಾಯವಾಗುತ್ತಿದೆ.  ಈ ವರ್ಷ 11 ದಿನ ದಸರಾ ಆಚರಣೆ ಕಂಡಿದೆ. ಇಷ್ಟು ದಿನಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಅರಮನೆಯಲ್ಲಿ ಖಾಸಗಿ ದರ್ಬಾರ ನಡೆಯಿತು. ಚಾಮುಂಡೇಶ್ವರಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ

ಮೈಸೂರು: ಗಾಂಧೀಜಿಯವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿದರು. ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಬಾಪು ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ

ಸಿಡೋರ್ಜೊ: ಇಸ್ಲಾಮಿಕ್ ಶಾಲಾ ಕಟ್ಟಡ ಕುಸಿದು ಎರಡು ದಿನಗಳ ನಂತರ ಕನಿಷ್ಠ 91 ವಿದ್ಯಾರ್ಥಿಗಳು ಕಾಂಕ್ರೀಟ್ ಅವಶೇಷಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲೆಯಲ್ಲಿ ಮಕ್ಕಳ ಹಾಜರಾತಿ ದಾಖಲೆಗಳು ಮತ್ತು ಕಾಣೆಯಾದವರ ಆತಂಕಗೊಂಡ ಕುಟುಂಬಗಳ ವರದಿಗಳನ್ನು ಪರಿಶೀಲಿಸಿದ ನಂತರ ಅಧಿಕಾರಿಗಳು ಈ ಸಂಖ್ಯೆಯನ್ನು ತಿಳಿಸಿದ್ದಾರೆ. ಪೂರ್ವ ಜಾವಾ ಪ್ರಾಂತ್ಯದ ಶತಮಾನಗಳಷ್ಟು ಹಳೆಯದಾದ