ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ತಗ್ಗಿದರೂ ಗುಡ್ಡ ಕುಸಿತದ ಆತಂಕ ತಪ್ಪಿಲ್ಲ. ಗೋಕರ್ಣದಲ್ಲಿ ಬೆಳ್ಳಂಬೆಳಿಗ್ಗೆ ಗುಡ್ಡ ಕುಸಿದಿದೆ. ಗೋಕರ್ಣ ಮುಖ್ಯಕಡಲತೀರದ ರಾಮಮಂದಿರ ಬಳಿ ಗುಡ್ಡ ಕುಸಿತವಾಗಿದೆ. ಮಂದಿರದಲ್ಲಿ ಯಾರು ಇಲ್ಲದ ಕಾರಣ ಅನಾಹುತ ನಡೆದಿಲ್ಲ. ಗುಡ್ಡದ ಕಲ್ಲುಗಳು ದೇವಾಲಯದ ಗೋಡೆತನಕ ಉರುಳಿ ಬಂದು ನಿಂತಿವೆ. ಹೆಚ್ಚಿನ ಅನಾಹುತವಾಗಿಲ್ಲ.
ಮಸ್ಕತ್: ಒಮನ್ ಕರಾವಳಿಯಲ್ಲಿ 117 ಮೀಟರ್ ಉದ್ದದ ತೈಲ ಟ್ಯಾಂಕರ್ ಮಗುಚಿ ಬಿದ್ದ ಪರಿಣಾಮ 13 ಮಂದಿ ಭಾರತೀಯರು ಸೇರಿ 16 ಮಂದಿ ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ನಾಪತ್ತೆಯಾಗಿರುವವರಲ್ಲಿ 13 ಭಾರತೀಯ ಪ್ರಜೆಗಳು ಹಾಗೂ ಮೂವರು ಶ್ರೀಲಂಕಾ ನಾಗರೀಕರು ಎಂದು ಕಡಲ ಭದ್ರತಾ ಕೇಂದ್ರ (MSC) ಮಾಹಿತಿ ನೀಡಿದೆ. ಕಾಣೆಯಾದವರ ಪತ್ತೆಹಚ್ಚಲು ಶೋಧ
ಬೆಂಗಳೂರು: 2 ದಿನಗಳಿಂದ ಸುರಿಯುತ್ತಿರುವ ಅವ್ಯಾಹಸ ಮಳೆ ಉತ್ತರ ಕನ್ನಡ ಕರಾವಳಿಯಲ್ಲಿ ಭಾರೀ ಅನಾಹುತ, ಅವಘಡಗಳ ಸರಮಾಲೆಯನ್ನೇ ಸೃಷ್ಟಿಸಿದೆ. ಹಲವೆಡೆ ಗುಡ್ಡ ಕುಸಿತದಿಂದ 11 ಜನ ಮೃತರಾಗಿರುವ ಶಂಕೆ ವ್ಯಕ್ತವಾಗಿದ್ದು, ಐದು ಮೃತದೇಹ ಪತ್ತೆಯಾಗಿದೆ. ಜಿಲ್ಲೆಯ ಕರಾವಳಿಯ ಪ್ರಮುಖ ರಸ್ತೆಗಳೆಲ್ಲವೂ ಬಂದ್ ಆಗಿದ್ದು, ಅಕ್ಷರಶಃ ದ್ವೀಪದಂತಾಗಿದೆ. ಕರಾವಳಿಯ ಐದೂ ತಾಲೂಕುಗಳ
ಕಾರವಾರ, ಜುಲೈ 16: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 9 ಮಂದಿ ಮಣ್ಣಿನಡಿ ಸಿಲುಕಿ 7 ಮಂದಿ ಮೃತ್ಯು ಆಗಿದ್ದಾರೆ. ಇದರಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಐವರು ಇದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ನಾಯ್ಕ, ಶಾಂತಿ
ಬೆಂಗಳೂರು, ಜುಲೈ 16: ನಂದಿನಿ ಹಾಲಿನ ಪ್ಯಾಕೆಟ್ಗಳಲ್ಲಿ ಪ್ರಮಾಣ ತುಸು ಹೆಚ್ಚಿಸಿ ದರ ಪರಿಷ್ಕರಣೆ ಮಾಡಿದ್ದ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಇದೀಗ ನಂದಿನಿ ಮೊಸರು, ಮಜ್ಜಿಗೆ ಹಾಗೂ ಲಸ್ಸಿಯ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಕೆಲವೆಡೆ ವರದಿಯಾಗಿದೆ. ಆದರೆ ಇದು ಸುಳ್ಳು
ಉಡುಪಿ : ಉಡುಪಿ ನಗರದಲ್ಲಿನ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ “ಕಲ್ಸ೦ಕ ಗಿರಿಜಾ ಸಿಲ್ಕ್”ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಆರ೦ಭಿಸಿರುವ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊ೦ಡಿದ್ದು ಇದೀಗ ಇ೦ದಿಗೆ ಬರೋಬರಿ 46ನೇ ದಿನಗಳತ್ತ ಸಾಗುತ್ತಿದ್ದು ಮಹಿಳಾ-ಪುರುಷ ಗ್ರಾಹಕರು ಸೇರಿದ೦ತೆ ಪುಟ್ಟಮಕ್ಕಳ
ಬೆಂಗಳೂರು, ಜುಲೈ 15: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದೆ. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಮಗ ಹಗರಣ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ ಎಸ್ಟಿ ಅನುದಾನದ ಹಣ ಬಳಸಿರುವ ವಿಚಾರವನ್ನು ಮುಂದಿಟ್ಟುಕೊಂಡು ಸದನ ಆರಂಭಕ್ಕೂ ಮುನ್ನವೇ ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಸಿಎಂ ಸಿದ್ದರಾಮಯ್ಯ, ವಾಲ್ಮೀಕಿ
ಮಂಗಳೂರು: ಬಸ್ನಲ್ಲಿ ಸೀಟು ಕೊಡುವ ನೆಪದಲ್ಲಿ ಬಾಲಕಿಯೊಬ್ಬಳನ್ನು ಪಕ್ಕದಲ್ಲಿ ಕೂರಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಗೆ ಬಸ್ ನಲ್ಲೇ ಸಾರ್ವಜನಿಕರು ಥಳಿಸುರವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆ.ಎಸ್ಆರ್ಟಿಸಿ ಬಸ್ನಲ್ಲಿ ಘಟನೆ ನಡೆದಿದ್ದು, ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬನಿಗೆ ಬಸ್ನಲ್ಲಿದ್ದ ಮಹಿಳೆಯರೇ ಧರ್ಮದೇಟು ಕೊಟ್ಟಿದ್ದಾರೆ. ಮೂಲಗಳ ಪ್ರಕಾರ ಸೀಟು ಬಿಟ್ಟುಕೊಡುವ ನೆಪದಲ್ಲಿ
ಉಡುಪಿ, ಜುಲೈ.15: ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಅಗ್ನಿ ಅವಘಡ (Fire) ಸಂಭವಿಸಿದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲೀಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇನ್ನು ಮೃತರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅದೃಷ್ಟವಶಾತ್ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ
ನವದೆಹಲಿ, ಜುಲೈ 15: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಡಿಕೆ ಶಿವಕುಮಾರ್ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ಸುಪ್ರೀಂಕೋರ್ಟ್ನ ನ್ಯಾ.