ಹಾಸನ: ಹಾಸನಾಂಬ ದೇವಿಯ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಎರಡು ಬೈಕ್ಗಳಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ನಡೆದಿದೆ. ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದ್ದು, ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ನೇಹಿತ ಬಸವರಾಜು ಜೊತೆಯಲ್ಲಿ
ಚಂಡೀಗಢ: ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಬ್ ರಥ ಎಕ್ಸ್ಪ್ರೆಸ್ ರೈಲಿನಲ್ಲಿ (ರೈಲು ಸಂಖ್ಯೆ 12204) ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಕೋಚ್ಗಳು ಹೊತ್ತಿಉರಿದ ಪಂಜಾಬ್ನಲ್ಲಿ ನಡೆದಿದೆ. ಓರ್ವ ಮಹಿಳಾ ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದೆ, ಗಾಯಾಳು ಮಹಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಸಮಯದಲ್ಲಿ ರೈಲು ಅಮೃತಸರದಿಂದ ಪ್ರಯಾಣಿಸುತ್ತಿತ್ತು. ಆದ್ರೆ ಪ್ರಯಾಣಿಕರಿಗೆ ಯಾವುದೇ
ಕಲಬುರಗಿ: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಅಳವಡಿಸಿದ್ದ ಬ್ಯಾನರ್ ಗಳು ಮತ್ತು ಭಗವಾಧ್ವಜಗಳನ್ನು ತೆಗೆದುಹಾಕಲಾಗಿದ್ದು, ಈ ಸಂಬಂಧ ರಾಜ್ಯ ಬಿಜೆಪಿ ಶನಿವಾರ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಆದರೆ ಕೇಸರಿ ಸಂಘಟನೆಯು ಈ ಕಾರ್ಯಕ್ರಮಕ್ಕೆ ಅನುಮತಿ ಪಡೆದಿಲ್ಲ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ
ಬೆಂಗಳೂರು, ಅಕ್ಟೋಬರ್ 17: ಪ್ರೀತಿ ನಿರಾಕರಿಸಿದ್ದಕ್ಕೆ ಯಾಮಿನಿ ಪ್ರಿಯಾ ಎನ್ನುವ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಕೋ ಕಿಲ್ಲರ್ ವಿಘ್ನೇಶ್ ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಗೈದು ಬಳಿಕ ಸೋಲದೇವನಹಳ್ಳಿಯಲ್ಲಿ ಅಡಗಿಕೊಂಡಿದ್ದ ವಿಘ್ನೇಶ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ನಿನ್ನೆ(ಅಕ್ಟೋಬರ್ 16) ಕಾಲೇಜು ಮುಗಿಸಿಕೊಂಡು ವಾಪಸ್ ಮನೆಗೆ
ಹಾವೇರಿ: ರಸ್ತೆಬದಿ ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲಿಯೇ ಮೃತಪಟ್ಟು, 20 ಮಂದಿ ಸಣ್ಣಪುಟ್ಟ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹಾವೇರಿ (Haveri) ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಮೃತಪಟ್ಟವರನ್ನು ಚಮನಸಾಬ್ ಕೆರಿಮತ್ತಿಹಳ್ಳಿ (65
ಜಗದಲ್ಪುರ: ಛತ್ತೀಸ್ಗಢದಲ್ಲಿ ಒಂದೇ ದಿನ ನಡೆದ ಅತಿ ದೊಡ್ಡ ಶರಣಾಗತಿಯಲ್ಲಿ, 110 ಮಹಿಳಾ ನಕ್ಸಲರು ಸೇರಿದಂತೆ 208 ಮಾವೋವಾದಿಗಳು ಶುಕ್ರವಾರ ಶಸ್ತ್ರಾಸ್ತ್ರ ತ್ಯಜಿಸಿ ಪೊಲೀಸರಿಗೆ ಶರಣಾಗಿದ್ದಾರೆ. ರಾಯ್ಪುರದಿಂದ ದಕ್ಷಿಣಕ್ಕೆ 300 ಕಿ.ಮೀ ದೂರದಲ್ಲಿರುವ ಜಗದಲ್ಪುರ(ಬಸ್ತರ್ ಜಿಲ್ಲೆ)ದಲ್ಲಿರುವ ರಿಸರ್ವ್ ಪೊಲೀಸ್ ಲೈನ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ 208 ನಕ್ಸಲರು ಶಸ್ತ್ರಾಸ್ತ್ರ ತ್ಯಜಿಸಿದರು. ಈ ಬೆಳವಣಿಗೆಯು ಛತ್ತೀಸ್ಗಢದಲ್ಲಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಒಂದೆಡೆ ಟೀಕೆ ವ್ಯಕ್ತವಾಗುತ್ತಲೇ ಇದೆ. ಬಿಟ್ಟಿ ಭಾಗ್ಯಗಳನ್ನು ಜನರಿಗೆ ನೀಡಿ ರಾಜ್ಯವನ್ನು ದಿವಾಳಿ ಮಾಡುತ್ತಿದೆ ಎಂಬ ಕೂಗು ಕೇಳಿಬರುವ ಮಧ್ಯೆ ಮಹಿಳೆಯರಿಗೆ ಸರ್ಕಾರಿ ಸಾಮಾನ್ಯ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಇರುವ 'ಶಕ್ತಿ' ಯೋಜನೆ ವಿಶ್ವ ದಾಖಲೆ ಮಾಡಿದೆ. ಶಕ್ತಿ ಯೋಜನೆ ಲಂಡನ್ ಬುಕ್
ಬೆಂಗಳೂರು: ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಿಯ ಮುಖಕ್ಕೆ ಖಾರದ ಪುಡಿ ಎರಚಿ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ಹಳಿಯ ಬಳಿ ಗುರುವಾರ ಸಂಜೆ ನಡೆದಿದೆ. ಶ್ರೀರಾಂಪುರ ಸಮೀಪದ ಸ್ವತಂತ್ರಪಾಳ್ಯ ನಿವಾಸಿ ಯಾಮಿನಿ ಪ್ರಿಯಾ (20) ಕೊಲೆಯಾದ ವಿದ್ಯಾರ್ಥಿನಿ. ಯಾಮಿನಿ ಪ್ರಿಯಾ ಲವ್
ಬೆಂಗಳೂರು: ರಾಜ್ಯ ಮಾಹಿತಿ ಆಯುಕ್ತರಾಗಿ ನೇಮಕಗೊಂಡಿರುವ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಬಿ.ವೆಂಕಟ್ ಸಿಂಗ್ ಹಾಗೂ ಡಾ.ಮಹೇಶ್ ವಾಳ್ವೇಕರ್ ಅವರು ಗುರುವಾರ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನವಾಗಿ ನೇಮಕವಾಗಿರುವ ರಾಜ್ಯ ಮಾಹಿತಿ ಆಯುಕ್ತರುಗಳಿಗೆ ಅಧಿಕಾರ
ಉಡುಪಿ: ಉಡುಪಿ ಜಿಲ್ಲೆಯ ವಿವಿಧೆಡೆ ಅಕ್ರಮ ಹಾಗೂ ಅಪಾಯಕಾರಿಯಾಗಿ ಸಂಗ್ರಹಿಸಲಾಗಿದ್ದ ಪಟಾಕಿ ಮಳಿಗೆಗಳಿಗೆ ದಾಳಿ ನಡೆಸಿದ ಪೊಲೀಸರು, ಅಪಾರ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಮಿಯ್ಯಾರು, ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಂಜಾಲು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಟ್ಟೆ ಎಂಬಲ್ಲಿ ಪೊಲೀಸರು ದಾಳಿ ನಡೆಸಿ