ಬೆಂಗಳೂರು: 70 ‘ಅತಿ ಹಿಂದುಳಿದ ಸಮುದಾಯ’ಗಳ ಮುಖಂಡರ ಗುಂಪು ಗುರುವಾರ ಶಾಸಕರ ಭವನದಲ್ಲಿ ಸಭೆ ನಡೆಸಿದ್ದು, ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೋರಿದೆ. ಸ್ಪಷ್ಟ ದಿನಾಂಕ ನಿಗದಿಪಡಿಸಿ ಕಾಂತರಾಜ್ ಆಯೋಗದ ವರದಿಯನ್ನು ಸಾರ್ವಜನಿಕವಾಗಿ ಮಂಡಿಸುವಂತೆ ಒತ್ತಾಯಿಸುತ್ತೇವೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕಾನಾಥ್,
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಜನತಾ ದಳ (ಜಾತ್ಯತೀತ) ಜೊತೆ ಬಿಜೆಪಿ ಮೈತ್ರಿಗೆ ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ವಿರೋಧ ವ್ಯಕ್ತ ಪಡಿಸಿದ್ದಾರೆ. ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮೇಲಿನವರು ಸುಲಭವಾಗಿ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ಕೆಳಹಂತದ ಕಾರ್ಯಕರ್ತರು ಹಿಂಸೆ ಅನುಭವಿಸುತ್ತಾರೆ. ಉಸಿರುಕಟ್ಟುವ ವಾತಾವರಣ ಸೃಷ್ಟಿಯಾಗಿದೆ. ಮೈತ್ರಿಗೆ
ಇಟಲಿ:ಅ 04. ಇಟಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕ್ಯಾಂಪ್‌ಗ್ರೌಂಡ್‌ಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ ಉತ್ತರ ಇಟಲಿಯ ವೆನಿಸ್ ಬಳಿಯ ಮೇಲ್ಸೇತುವೆಯಿಂದ ಉರುಳಿಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 21 ಪ್ರವಾಸಿಗರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಟಲಿಯ ಅಧಿಕಾರಿಗಳ ಮಾಹಿತಿ ಪ್ರಕಾರ ಅಪಘಾತಕ್ಕೆ ಕಾರಣ
ಬೆಂಗಳೂರು: ರಾಜ್ಯದಲ್ಲಿ ಸದ್ಯ ತಲೆದೋರಿರುವ ಬರ ಪರಿಸ್ಥಿತಿಯನ್ನು ಅವಲೋಕಿಸಲು ಕೇಂದ್ರದ ಮೂರು ತಂಡಗಳು ಗುರುವಾರ ಕರ್ನಾಟಕಕ್ಕೆ ಭೇಟಿ ನೀಡಲಿವೆ. ಮೌಲ್ಯಮಾಪನ ಆರಂಭಿಸುವ ಮುನ್ನ ತಂಡಗಳು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿವೆ ಎಂದು ಮೂಲಗಳು ಖಚಿತಪಡಿಸಿವೆ. ಅಕ್ಟೋಬರ್ 9ರವರೆಗೆ ರಾಜ್ಯದಲ್ಲಿಯೇ ಇರಲು ನಿರ್ಧರಿಸಲಾಗಿದ್ದು, ಈ ವೇಳೆ ತಂಡಗಳು ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ,
ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಟೋಕಿಯೊ ಒಲಿಂಪಿಕ್ ಪದಕ ವಿಜೇತೆ ಲೊವ್ಲಿನಾ ಬೊರ್ಗೊಹೈನ್ ಅವರು ಬುಧವಾರ ಬೆಳ್ಳಿ ಪದಕ ಗೆದ್ದಿದಾರೆ. ಇಂದು ನಡೆದ ಬಾಕ್ಸಿಂಗ್ ಸ್ಪರ್ಧೆಯ ಮಹಿಳೆಯರ 75 ಕೆಜಿ ವಿಭಾಗದ ಫೈನಲ್ ನಲ್ಲಿ ಲೊವ್ಲಿನಾ ಬೊರ್ಗೊಹೈನ್ ಅವರು, ಹಾಲಿ ವಿಶ್ವ
ಉಡುಪಿ:ಉಡುಪಿಯ ಪ್ರಸಿದ್ಧ ಚಿನ್ನಾಭರಣ ಮಳಿಗೆಯಾದ ಆಭರಣ ಮಳಿಗೆ ಮಧುಕರ್ ಕಾಮತ್ ರವರ ಧರ್ಮಪತ್ನಿಯವರಾದ ಶ್ರೀಮತಿ ರಾಧಾ ಕಾಮತ್(77) ರವರು ಬುಧವಾರದ೦ದು ಸ್ವಗೃಹದಲ್ಲಿ ನಿಧನಹೊ೦ದಿದ್ದಾರೆ. ಅಲ್ಪಕಾಲಸೌಖ್ಯದಿ೦ದ ಕೂಡಿದವರಾಗಿದ್ದರು.ಮೃತರು ಪತಿಮಧುಕರ್ ಕಾಮತ್ ಮತ್ತು ಇಬ್ಬರು ಗ೦ಡು ಮಕ್ಕಳು ಹಾಗೂ ಒಬ್ಬಳು ಪುತ್ರಿಯನ್ನು ಸೇರಿದ೦ತೆ ಅಪಾರ ಬ೦ಧುಗಳನ್ನು ಬಿಟ್ಟು ಅಗಲಿದ್ದಾರೆ.
ನವದೆಹಲಿ: ನೆರೆಯ ನೇಪಾಳದಲ್ಲಿ ಇಂದು ಪ್ರಬಲ ಭೂಕಂಪನ ಸಂಭವಿಸಿದ್ದು, ಕೇವಲ 1 ಗಂಟೆಗಳ ಅವಧಿಯಲ್ಲಿ ಸತತ 4 ಭೂಕಂಪನಗಳು ವರದಿಯಾಗಿವೆ. ಪಶ್ಚಿಮ ನೇಪಾಳದಲ್ಲಿ 10 ಕಿಲೋಮೀಟರ್ ಆಳದಲ್ಲಿ ಮಧ್ಯಾಹ್ನ 2:25 ಕ್ಕೆ 4.6 ತೀವ್ರತೆಯ ಮೊದಲ ಭೂಕಂಪ ಸಂಭವಿಸಿದೆ, ನಂತರ ಮೊದಲ ಕಂಪನ ಸಂಭವಿಸಿದ 25 ನಿಮಿಷಗಳಲ್ಲಿ ಅಂದರೆ 2:51 ಕ್ಕೆ
ಬೆಂಗಳೂರು/ಶಿವಮೊಗ್ಗ: ಜಿಲ್ಲಾ ಕೇಂದ್ರ ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 24 ಪ್ರಕರಣಗಳು ದಾಖಲಾಗಿದ್ದು, 60 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ರಾಗಿ ಗುಡ್ಡ ಪ್ರದೇಶದಲ್ಲಿ ಭಾನುವಾರ ನಡೆದ ಕಲ್ಲು ತೂರಾಟದ ನಂತರ ಉದ್ವಿಗ್ನತೆ ಉಂಟಾದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪರಿಸ್ಥಿತಿ
ಮಹಾರಾಷ್ಟ್ರ: ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ಮಂದಿ ಸಾವನ್ನಪ್ಪಿದ ವರದಿ ಬೆಳಕಿಗೆ ಬಂದ ಬಳಿಕ ಮತ್ತೆ ಏಳು ರೋಗಿಗಳು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಇದರಲ್ಲಿ ನಾಲ್ವರು ಮಕ್ಕಳು ಸೇರಿದ್ದಾರೆಂದು ಹೇಳಲಾಗುತ್ತಿದ್ದು, ಇದರೊಂದಿಗೆ ಕಳೆದ 48ಗಂಟೆಯಲ್ಲಿ ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಒಟ್ಟು ಮೂವತ್ತೊಂದು ಮಂದಿ
ಬೆಂಗಳೂರು: ಕಳೆದ ಭಾನುವಾರ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆ ಪ್ರಕರಣ ಒಂದು ಸಣ್ಣ ಘಟನೆ, ಈ ಬಗ್ಗೆ ನಮಗೆ ಮೊದಲೇ ಸೂಚನೆಯಿತ್ತು, ಹೀಗಾಗಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದೆವು ಎಂದು ನಿನ್ನೆ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ ಜಿ ಪರಮೇಶ್ವರ್ ಇಂದು ಮಂಗಳವಾರ ಕೂಡ ಅದೇ ಮಾತನ್ನು ಪುನರುಚ್ಛರಿಸಿದ್ದಾರೆ. ಘಟನೆಯ