ತುಮಕೂರು, ಜು.12: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ಹಣದಾಸೆಗೆ ಚಿಕ್ಕ ಮಕ್ಕಳನ್ನ ಕಿಡ್ನಾಪ್ ಮಾಡಿ ಮಾರಾಟ ಮಾಡುವ ಜಾಲವೊಂದನ್ನ ಪೊಲೀಸರು ಪತ್ತೆಹಚ್ಚಿ ಜೈಲಿಗೆ ಕಳುಹಿಸಿದ್ದರು. ಆ ಪ್ರಕರಣ ಆಗಿ ಕೆಲವೇ ದಿನಕ್ಕೆ ಸ್ವಂತ ಚಿಕ್ಕಮಳೆ ತನ್ನ ಸಾಲ ತೀರಿಸಲಾಗದೇ ಮನೆಗೆ ಬಂದಿದ್ದ 11 ವರ್ಷದ ಅಕ್ಕನ ಮಗಳನ್ನು ಮಾರಾಟ
ಬೆಂಗಳೂರು, ಜುಲೈ 12: ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ವಾಲ್ಮೀಕಿ ನಿಗಮದ ಹಗರಣ ಪ್ರಕರಣ, ಕೇಂದ್ರ ವರ್ಸಸ್ ರಾಜ್ಯ ಸರ್ಕಾರವಾಗಿ ಬದಲಾಗಿದೆಯಾ ಎಂಬ ಅನುಮಾನ ಮೂಡಿದೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಸೈಟ್ ನೀಡಲಾಗಿದೆ ಎಂದು ಆರೋಪಿಸಿ ಮೈಸೂರಿಗೆ ತೆರಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ಮಾರ್ಗ ಮಧ್ಯದಲ್ಲಿಯೇ ವಶಕ್ಕೆ ಪಡೆದರು. ಮುಖ್ಯಮಂತ್ರಿ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿ
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜತೆಗೆ ಸುಪ್ರೀಂ ಕೋರ್ಟ್ ನ್ಯಾಯಪೀಠವು ಜಾರಿ ನಿರ್ದೇಶನಾಲಯದಿಂದ ತಮ್ಮ ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಭರ್ಜರಿ ಭೇಟಿಯಾಡಿದೆ. ಹಗರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆಗೆ ಇತ್ತೀಚಿಗೆ ರಾಜೀನಾಮೆ ನೀಡಿದ್ದ ಮಾಜಿ ಬಿ. ನಾಗೇಂದ್ರ ಅವರನ್ನು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮೈಸೂರು : ಆಷಾಢ ಮಾಸದ ಮೊದಲ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಮುಂಜಾನೆಯಿಂದಲೇ ಬೆಟ್ಟದ ಪಾದದಿಂದ ಸಾವಿರ ಮೆಟ್ಟಿಲು ಹತ್ತಿದ ಭಕ್ತರು, ದಾರಿಯುದ್ದಕ್ಕೂ ಜಯಘೋಷ ಮೊಳಗಿಸಿದರು. ಮೆಟ್ಟಿಲುಗಳಿಗೆ ಅರಿಶಿನ- ಕುಂಕುಮ ಹಚ್ಚಿ ಹರಕೆ ತೀರಿಸುತ್ತಿದ್ದಾರೆ. ಆಷಾಢ ಮಾಸದಲ್ಲಿ ಶಕ್ತಿ ದೇವತೆಗೆ ವಿಶೇಷ
ಕಠ್ಮಂಡು: ನೇಪಾಳದ ಹೆದ್ದಾರಿಯಲ್ಲಿ ಭಾರೀ ಕುಸಿತ ಸಂಭವಿಸಿದ್ದು, ಪರಿಣಾಮ ಹೆದ್ದಾರಿಯಲ್ಲಿ ಸಾಗುತ್ತಿದ್ದ ಎರಡು ಬಸ್ ಗಳು ಜಖಂಗೊಂಡು 7 ಭಾರತೀಯರು ಸೇರಿ ಒಟ್ಟು 65 ಮಂದಿ ಪ್ರಯಾಣಿಕರು ನಾಪತ್ತೆಯಾಗಿರುವ ಘಟನೆ ಶುಕ್ರವಾರ ವರದಿಯಾಗಿದೆ. ಚಿತ್ವಾನ್ ಜಿಲ್ಲೆಯ ನಾರಾಯಣಘಾಟ್-ಮುಗ್ಲಿಂಗ್ ರಸ್ತೆಯ ಸಿಮಲ್ಟಾಲ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಈ ವೇಳೆ ಹೆದ್ದಾರಿಯಲ್ಲಿ ಸಾಗುತ್ತಿದ್ದ
ಬೆಂಗಳೂರು, ಜು.11: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮ ದಲ್ಲಿ ಆಗಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ(SIT) ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಅದರಂತೆ ದಿನಕ್ಕೊಂದು ವಿಚಾರಗಳು ಬೆಳಕಿಗೆ ಬರುತ್ತಲಿದೆ. ಇದೀಗ ಆರೋಪಿಗಳ ಮತ್ತೊಂದು ಕಹಾನಿ ಬಯಲಾಗಿದ್ದು, ಹೈದರಾಬಾದ್ ಫಸ್ಟ್ ಬ್ಯಾಂಕ್ನಲ್ಲಿ ತೆರೆದಿದ್ದ 18 ನಕಲಿ ಖಾತೆಗಳಿಗೂ ಬೆಂಗಳೂರಿನ ಕನೆಕ್ಷನ್ ಇರುವುದು ತಿಳಿದು
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ (Valmiki Development Corporation) ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿ ನಿನ್ನೆ ಬುಧವಾರ ಆರಂಭವಾಗಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಬೃಹತ್ ಕಾರ್ಯಾಚರಣೆ ಇಂದು ಗುರುವಾರ ಕೂಡ ಮುಂದುವರಿದಿದೆ. ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸವನಗೌಡ
ಮೈಸೂರು: ಮುಡಾ ಗೆಬ್ಬೆದ್ದು ನಾರುತ್ತಿದೆ, ಅದನ್ನ ಕ್ಲೀನ್ ಮಾಡುವ ಕೆಲಸ ಮಾಡುತ್ತೇನೆ. ಮುಡಾ ಹಗರಣದ ಬಗ್ಗೆ ಇಬ್ಬರು ಐಎಎಸ್ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ. ತನಿಖಾ ವರದಿ ಬಂದ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇನೆ. ನಮ್ಮ ಕಾಲದಲ್ಲೂ ತಪ್ಪುಗಳು ಆಗಿದೆ. ಬಿಜೆಪಿ ಕಾಲದಲ್ಲೇ ಹೆಚ್ಚು ತಪ್ಪಾಗಿರುವುದು. ಅದನ್ನ ಸರಿಪಡಿಸುತ್ತೇನೆ ಎಂದು ಮುಖ್ಯಮಂತ್ರಿ