ಅಯೋಧ್ಯೆ: ರಾಮ ಜನ್ಮಭೂಮಿಯ ಗೆಸ್ಟ್ಹೌಸ್ನಲ್ಲಿ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸೆಕ್ಸ್ ದಂಧೆಯನ್ನು ಅಯೋಧ್ಯೆಯ ಪೊಲೀಸರು ಭೇದಿಸಿದ್ದು, 11 ಮಹಿಳೆಯರು ಸೇರಿದಂತೆ 14 ಜನರನ್ನು ಬಂಧಿಸಿರುವುದಾಗಿ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ಮಧ್ಯರಾತ್ರಿ ಮತ್ತು ಶನಿವಾರ ಪೊಲೀಸರು ಗೆಸ್ಟ್ಹೌಸ್ ಮೇಲೆ ದಾಳಿ ನಡೆಸಿ, 11 ಮಹಿಳೆಯರನ್ನು ಬಂಧಿಸಿದ್ದಾರೆ. ಅತಿಥಿ ಗೃಹದ ಮಾಲೀಕ
ಬೆಂಗಳೂರು: ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಕುರಿತಂತೆ ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ಇದರ ಮಧ್ಯೆ ವಿವಾದ ಕುರಿತಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಧ್ಯ ಪ್ರವೇಶಿಸಿದ್ದು ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಕುರಿತಂತೆ ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಮುಂಬರುವ ಸಾಮಾಜಿಕ ಮತ್ತು ಶೈಕ್ಷಣಿಕ
ಮಂಗಳೂರು: ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಂದೆ ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಮತ್ತು ಮಾಜಿ ಅಧ್ಯಕ್ಷ ಕೇಶವಗೌಡ ಬೆಳಲು ಶುಕ್ರವಾರ ಹೇಳಿಕೆ ದಾಖಲಿಸಿದ್ದಾರೆ. ದೇವಾಲಯ ಆಡಳಿತವನ್ನು ಬೆಂಬಲಿಸಿ ಹಲವಾರು ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮತ್ತು ಧರ್ಮಸ್ಥಳ ಗ್ರಾಮದಲ್ಲಿನ ಸಾಮೂಹಿಕ
ಬೆಂಗಳೂರು: ಈ ವರ್ಷದ ಮೈಸೂರು ದಸರಾ ಆಚರಣೆಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದನ್ನು ಕರ್ನಾಟಕದ ರಾಜಕೀಯ ನಾಯಕರು ಸ್ವಾಗತಿಸಿದರು, ಈ ತೀರ್ಪನ್ನು "ಕೋಮುವಾದದ ಮೇಲೆ ಜಾತ್ಯತೀತತೆಯ ಗೆಲುವು" ಎಂದು ಬಣ್ಣಿಸಿದ್ದಾರೆ. ಈ ತೀರ್ಪು
ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ ಸ್ನಾನಘಟ್ಟದ ಬಳಿಯ ಬಂಗ್ಲೆಗುಡ್ಡ ಅರಣ್ಯದಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಅಸ್ಥಿಪಂಜರಗಳ ಅವಶೇಷಗಳನ್ನು ವಶಪಡಿಸಿಕೊಂಡಿದೆ ಎಂದು ವರದಿಯಾಗಿದೆ. ಅಧಿಕಾರಿಗಳ ಪ್ರಕಾರ, ಹಿಂದಿನ ಸಾಕ್ಷಿಗಳ ಸಾಕ್ಷ್ಯ ಸಂಗ್ರಹಣೆಯ ಸಮಯದಲ್ಲಿ ಸಂಭಾವ್ಯ ಪುರಾವೆ ಸ್ಥಳವೆಂದು
ಉಡುಪಿ: ಸೆ.17,ಇಂದ್ರಾಳಿ ರೈಲ್ವೆ ಸೇತುವೆಯ ಬಹುನಿರೀಕ್ಷಿತ ಕೆಲಸವು ಅಂತಿಮ ಹಂತದತ್ತ ಸಾಗುತ್ತಿದೆ ಮತ್ತು ಸೆಪ್ಟೆಂಬರ್ 21 ರ ಭಾನುವಾರದಂದು ನಿಗದಿಯಾಗಿರುವ ಉದ್ಘಾಟನೆಗೆ ಮುಂಚಿತವಾಗಿ ಪೂರ್ಣಗೊಳ್ಳುವ ಹಂತದಲ್ಲಿದೆ. ಹೊಸ ಇಂದ್ರಾಳಿ ರೈಲ್ವೆ ಸೇತುವೆಯನ್ನು ಸೆಪ್ಟೆಂಬರ್ 21, 2025 ರ ಭಾನುವಾರ ಭಾರತ ಸರ್ಕಾರದ ರೈಲ್ವೆ ಸಚಿವ ವಿ. ಸೋಮಣ್ಣ ಉದ್ಘಾಟಿಸಲಿದ್ದಾರೆ. ಇಂದ್ರಾಳಿ
ಬೆಂಗಳೂರು: ಮಾಜಿ ಸಿಎಂ ಸದನಾಂದ ಗೌಡ ಅವರ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ ಸೈಬರ್ ಕಳ್ಳರು 3 ಲಕ್ಷ ರೂ. ಹಣವನ್ನು ಕದ್ದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 75 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ 75 ಪೌರ ಕಾರ್ಮಿಕರರಿಗೆ ಆರ್ಎಂವಿ ಎಕ್ಸ್ ಟೆನ್ಷನ್ನ ಬಿಬಿಎಂಪಿ ಪಾರ್ಕ್ನಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಿದೆ.
ನವದೆಹಲಿ: 2001 ರಲ್ಲಿ ಮುಂಬೈನಲ್ಲಿ ನಡೆದ ಹೋಟೆಲ್ ಉದ್ಯಮಿ ಜಯ ಶೆಟ್ಟಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಗ್ಯಾಂಗ್ಸ್ಟರ್ ಛೋಟಾ ರಾಜನ್ಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ. ಕಳೆದ ವರ್ಷ ಅಕ್ಟೋಬರ್ 23 ರಂದು ರಾಜನ್ಗೆ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ಮತ್ತು ಪ್ರಕರಣದಲ್ಲಿ ಜಾಮೀನು ನೀಡಿದ ಬಾಂಬೆ
ಮಂಗಳೂರು: ಧರ್ಮಸ್ಥಳ ದೇವಸ್ಥಾನ ಆಡಳಿತ ಮಂಡಳಿಯಿಂದ ನಡೆದಿದೆ ಎನ್ನಲಾದ ಭೂಕಬಳಿಕೆ, ಆರ್ಥಿಕ ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪಗಳ ಕುರಿತು ಜಾರಿ ನಿರ್ದೇಶನಾಲಯದ (ಇ.ಡಿ) ಮೂಲಕ ತನಿಖೆ ನಡೆಸುವಂತೆ ಖ್ಯಾತ ಬರಹಗಾರ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ಮತ್ತು ಹಲವಾರು ಸಾಮಾಜಿಕ ಕಾರ್ಯಕರ್ತರು ಕೇಂದ್ರ