ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ. ಸಂಸತ್ ಭವನಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಈ ವೇಳೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮೋದಿಯವರಿಗೆ ಗಂಧದ ಹಾರ ಹಾಕಿ, ಮೈಸೂರು ಪೇಟ ಧರಿಸಿ, ಅಂಬಾರಿ ಕೊಟ್ಟು

ಚಿತ್ರದುರ್ಗ: ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟು 36 ಮಂದಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ಮೃತರನ್ನು ಚಿತ್ರದುರ್ಗದ ಹೊರವಲಯದ ಕವಾಡಿಗರಹಟ್ಟಿ ನಿವಾಸಿಗಳಾದ ಮಂಜುಳಾ (23 ವ) ಮತ್ತು ಯುವಕ ರಘು (27ವ) ಎಂದು ಗುರುತಿಸಲಾಗಿದೆ. ಮಂಜುಳಾ ನಿನ್ನೆ ಆಸ್ಪತ್ರೆಯಲ್ಲಿ ಮೃತಪಟ್ಟರೆ, ನೀರು ಸೇವಿಸಿ ಬೆಂಗಳೂರಿಗೆ ತೆರಳಿದ್ದ ರಘು ತೀವ್ರ

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಘರ್ಷಣೆಗೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಧ್ಯಂತರ ಶಿಫಾರಸುಗಳನ್ನು ಕಳುಹಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಇಬ್ಬರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಬಿಂಬಿಸುವ ವೈರಲ್ ವೀಡಿಯೊ ವೈರಲ್ ಆದ ಬಳಿಕ ಸ್ವಾತಿ ಮಲಿವಾಲ್,

ನವದೆಹಲಿ: ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಹಾಗೂ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ಕುರಿತು ಎಫ್ ಐಆರ್ ದಾಖಲಿಸುವಲ್ಲಿ ವಿಳಂಬವಾಗಿರುವುದಕ್ಕೆ ಕಿಡಿಕಾರಿರುವ ಸುಪ್ರೀಂಕೋರ್ಟ್, ಮುಂದಿನ ವಿಚಾರಣೆಯನ್ನು ಆಗಸ್ಟ್ 7 ರಂದು ನಿಗದಿಪಡಿಸಿದ್ದು, ಅಂದು ಮಧ್ಯಾಹ್ನ 2 ಗಂಟೆಗೆ ಮಣಿಪುರದ ಡಿಜಿಪಿ ನ್ಯಾಯಾಲಾಯದ ಮುಂದೆ ಹಾಜರಾಗಬೇಕು ಎಂದು ಸಮಗ್ರ ವಿವರ ಒದಗಿಸಬೇಕು

ಮಂಗಳೂರು: ನೈತಿಕ ಪೊಲೀಸ್ ಗಿರಿ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ. ಕಾನೂನಿನಲ್ಲಿ ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ. ಕಾನೂನನ್ನು ಕೈಗೆತ್ತಿಕೊಳ್ಳಬೇಡಿ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಕರಾವಳಿ ಜಿಲ್ಲೆಗಳ ಪ್ರವಾಸ ವೇಳೆ ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸೌಜನ್ಯ ಕೇಸ್ ಕೋರ್ಟ್ ನಲ್ಲಿ ಇತ್ಯರ್ಥವಾಗಿದೆ. ಸೌಜನ್ಯ

ಥಾಣೆ : ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಸಮೃದ್ಧಿ ಎಕ್ಸ್‌ಪ್ರೆಸ್‌ವೇ ಮೂರನೇ ಹಂತದ ನಿರ್ಮಾಣದ ವೇಳೆ ಸೇತುವೆಯ ಚಪ್ಪಡಿ ಮೇಲೆ ಕ್ರೇನ್ ಬಿದ್ದು 16 ಕಾರ್ಮಿಕರು ಮೃತಪಟ್ಟು ಹಲವರು ಗಾಯಗೊಂಡಿರುವ ದುರದೃಷ್ಟಕರ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಶಾಹಪುರದ ಶಹಾಪುರದ ಸರ್ಲಾಂಬೆ ಗ್ರಾಮದ ಬಳಿ ಗಿರ್ಡರ್ ಉಡಾವಣಾ ಯಂತ್ರ(girder

ಶ್ರೀಹರಿಕೋಟಾ: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ನೌಕೆಯು ಭೂಮಿಯ ಕಕ್ಷೆ ತೊರೆದು ಚಂದ್ರನತ್ತ ಪಯಣ ಆರಂಭಿಸಿದೆ. ಈ ಬಗ್ಗೆ ಸ್ವತಃ ಇಸ್ರೋ ಮಾಹಿತಿ ನೀಡಿದ್ದು, ಚಂದ್ರಯಾನ–3 'ಬಾಹ್ಯಾಕಾಶ ನೌಕೆ'ಯನ್ನು ಟ್ರಾನ್ಸ್‌ಲೂನಾರ್‌ ಕಕ್ಷೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದೇವೆ. 'ಚಂದ್ರಯಾನ–3 ಬಾಹ್ಯಾಕಾಶ ನೌಕೆ ಭೂಮಿಯ ಸುತ್ತಲಿನ ಕಕ್ಷೆಯನ್ನು ಪೂರ್ಣಗೊಳಿಸಿದ್ದು, ಚಂದ್ರನ ಕಕ್ಷೆಯತ್ತ

ಲಖನೌ: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಬಿಸಿ ಹೆಚ್ಚುತ್ತಿದೆ. ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದ್ದು, ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ಕಳುಹಿಸಲಾಗಿದೆ. ರಾಮಮಂದಿರವನ್ನು ಬಿಜೆಪಿ ತನ್ನ ಸಾಧನೆ ಎಂದು ಬಿಂಬಿಸುತ್ತಿದೆ. ಅಯೋಧ್ಯೆಯ ನಂತರ ಮಥುರಾ ಮತ್ತು ಕಾಶಿಯಲ್ಲೂ

ಬಳ್ಳಾರಿ: ಸುಮಾರು 50 ವರ್ಷಗಳ ನಂತರ ತಿರುಪತಿ ತಿರುಮಲ ಟ್ರಸ್ಟ್ (ಟಿಟಿಡಿ) ತನ್ನ ಪ್ರಸಿದ್ಧ ಲಡ್ಡುಗಳನ್ನು ತಯಾರಿಸಲು ಕರ್ನಾಟಕ ಹಾಲು ಒಕ್ಕೂಟದಿಂದ (ಕೆಎಂಎಫ್) ತುಪ್ಪ ಖರೀದಿಯನ್ನು ಸ್ಥಗಿತಗೊಳಿಸಿದೆ. ಕೆಎಂಎಫ್ ನೀಡಿರುವ ಬೆಲೆಯನ್ನು ಒಪ್ಪಿಕೊಳ್ಳದ ಟಿಟಿಡಿ ಮತ್ತೊಂದು ಕಂಪನಿಯೊಂದಿಗೆ ಮುಂದಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಭಾನುವಾರ ಹೇಳಿದರು. ಕೆಎಂಎಫ್ ತುಪ್ಪದಿಂದ

ಕೋಲಾರ: ಟೊಮ್ಯಾಟೊ ಬೆಲೆ ಗಗನಕ್ಕೇರುತ್ತಿದ್ದಂತೆ ಅದರಿಂದ ಲಕ್ಷಗಟ್ಟಲೆ ಹಣ ಗಳಿಸಿದವರು, ಟೊಮ್ಯಾಟೊ ಕಳವಿನ ಸುದ್ದಿಯನ್ನು ಕೇಳುತ್ತಿದ್ದೇವೆ. ಕೋಲಾರದ ಎಪಿಎಂಸಿಯಿಂದ ಸುಮಾರು 21 ಲಕ್ಷ ರೂ. ಮೌಲ್ಯದ ಟೊಮ್ಯಾಟೊ ಹೊತ್ತು ನಾಪತ್ತೆಯಾಗಿದ್ದ ಲಾರಿ ಈಗ ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ಪತ್ತೆಯಾಗಿದೆ. ಮೊನ್ನೆ ಜುಲೈ 27 ರಂದು ಮಧ್ಯಾಹ್ನ ಕೋಲಾರದಿಂದ ಜೈಪುರಕ್ಕೆ ಸಾಗಿಸುತ್ತಿದ್ದ