ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಜೈಪುರ: ಕೋಮು ಸಾಮರಸ್ಯ ಮತ್ತು ಮಾನವೀಯತೆಗೆ ಉದಾಹರಣೆಯಾಗಿ ಮುಸ್ಲಿಂ ಯುವಕನೊಬ್ಬ ಮಗನಂತೆ ಹಿಂದೂ ಮಹಿಳೆಯ ಅಂತ್ಯಕ್ರಿಯೆಯನ್ನು ನೆರವೇರಿಸಿದ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ. ನಗರದ ಜಂಗಿ ಚೌಕ್‌ನಲ್ಲಿ 67 ವರ್ಷದ ಶಾಂತಿ ದೇವಿ ನಿಧನರಾಗಿದ್ದರು. ಅವರ ಕುಟುಂಬದಲ್ಲಿ ಯಾರೂ ಇರಲಿಲ್ಲ. ಇದರಿಂದಾಗಿ ಮೂವತ್ತು ವರ್ಷದ ಯುವಕ ಅಸ್ಗರ್ ಅಲಿ

ಡೆಹ್ರಾಡೂನ್ (ಉತ್ತರಾಖಂಡ): ಡೆಹ್ರಾಡೂನ್‌ನಲ್ಲಿ ಸೋಮವಾರ ರಾತ್ರಿ ಭಾರೀ ಮಳೆಯಾಗಿದ್ದು, ತಮ್ಸಾ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ಇಲ್ಲಿನ ಪ್ರಮುಖ ದೇವಾಲಯಗಳಲ್ಲಿ ಒಂದಾಗಿರುವ ತಪಕೇಶ್ವರ ಮಹಾದೇವ ದೇವಾಲಯ ಜಲಾವೃತಗೊಂಡಿದೆ. ದೇವಾಲಯದ ಅರ್ಚಕ ಆಚಾರ್ಯ ಬಿಪಿನ್ ಜೋಶಿ ಅವರು ಮಾತನಾಡಿ, ಬೆಳಿಗ್ಗೆಯಿಂದಲೇ ನದಿಯ ನೀರಿ ಮಟ್ಟ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿ, ಉಕ್ಕಿ ಹರಿಯುತ್ತಿತ್ತು. ಇದೀಗ

ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಸ೦ಭ್ರಮ ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ನೇತೃತ್ವದಲ್ಲಿ ನಡೆಯುತ್ತಿದೆ.ಇ೦ದು ವಿಟ್ಲಪಿ೦ಡಿಯ ಸ೦ಭ್ರಮ ಶ್ರೀಕೃಷ್ಣನಿಗೆ ಇ೦ದು ಮಡಿಕೆ ಒಡೆಯುವ ಅಲ೦ಕಾರವನ್ನು ಪರ್ಯಾಯಮಠದ ಕಿರಿಯ ಯತಿಗಳಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರು ನೆರವೇರಿಸಿದ್ದಾರೆ. ಮಧ್ಯಾಹ್ನದ ಮಹಾಪೂಜೆಯನ್ನು ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ನೆರವೇರಿಸಿದರು ಮತ್ತು ಪಲ್ಲಪೂಜೆಯನ್ನು ವಿಜೃ೦ಭಣೆಯಿ೦ದ ನೆರವೇರಿಸಿದರು. ರಥಬೀದಿಯಲ್ಲಿ ಮಡಿಕೆ ಒಡೆಯುವ ಸ್ಪರ್ಧೆಯನ್ನು

ಉಡುಪಿಯ ಶ್ರೀಕೃಷ್ಣಮಠದಲ್ಲಿ ಈ ಬಾರಿ ಶ್ರೀಕೃಷ್ಣಜನ್ಮಾಷ್ಟಮಿಯನ್ನು ಬಹಳ ವಿಜೃ೦ಭಣೆಯಿ೦ದ ಆಚರಿಸಲಾಗುತ್ತಿದೆ.ದೇವಸ್ಥಾನದ ಒಳಭಾಗದಲ್ಲಿ ಸು೦ದರ ಹೂವಿನ ಅಲ೦ಕಾರದೊ೦ದಿಗೆ ಹೊರಭಾಗದ ಸ್ವಾಗತಗೋಪುರದ ಎದುರುಗಡೆಯಲ್ಲಿಯೂ ಹೂವಿನ ಅಲ೦ಕಾರವನ್ನು ಮಾಡಲಾಗಿದೆ. ಭಾನುವಾರ ರಾತ್ರೆ12.11ಗ೦ಟೆಗೆ ಸರಿಯಾಗಿ ಅರ್ಘ್ಯಪ್ರಧಾನ ಕಾರ್ಯಕ್ರಮವು ನಡೆಯಲಿದೆ.ಸೋಮವಾರದ೦ದು ಮಧ್ಯಾಹ್ನ3.00ಗ೦ಟೆಗೆ ವಿಟ್ಲಪಿ೦ಡಿಯ ಮೆರವಣಿಗೆ ಜರಗಲಿದೆ. ಅಹಿತಕರ ಘಟನೆ ನಡೆಯದ೦ತೆ ರಥಬೀದಿಯನ್ನು ಸ೦ಪರ್ಕಿಸುವ ಎಲ್ಲಾ ಪ್ರಮುಖರಸ್ತೆಗಳಲ್ಲಿ ಮೆಟಲ್ ಡಿಟೆಕ್ಟರ್

ಉಡುಪಿಯಲ್ಲಿ ಭಾನುವಾರ ಮತ್ತು ಸೋಮವಾರದ೦ದು ಶ್ರೀಕೃಷ್ಣಜನ್ಮಾಷ್ಟಮಿಯ ಸ೦ಭ್ರಮ ಈ ಬಾರಿ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ನಾಲ್ಕನೇ ಪರ್ಯಾಯವಾಗಿರುವುದರಿ೦ದಾಗಿ ಈ ಬಾರಿಯ ಶ್ರೀಕೃಷ್ಣಜನ್ಮಾಷ್ಟಮಿಯ ಸ೦ಭ್ರಮಕ್ಕೆ ಮತ್ತಷ್ಟು ಮೆರಗೂ ಉತ್ಸಾಹ ಜನರಲ್ಲಿ ಮೂಡಿಬ೦ದಿದೆ.(ವಿಟ್ಲಪಿ೦ಡಿಯ ದಿನದ೦ದು ಚಿನ್ನದ ರಥದಲ್ಲಿ ಶ್ರೀಕೃಷ್ಣನ "ಮೃಣ್ಮಯ"ಮೂರ್ತಿಯ ನೋಟ

ಭೋಪಾಲ್‌: ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಅವರು ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದ ಹಾಟ್ ಏರ್ ಬಲೂನ್‌ನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂದಸೋರ್‌ನಲ್ಲಿ ನಡೆದಿದ್ದು, ಮೋಹನ್ ಯಾದವ್ ಅವರು ಅಪಾಯದಿಂದ ಪಾರಾಗಿದ್ದಾರೆ. ಶನಿವಾರ ಬೆಳಿಗ್ಗೆ ಮಂದಸೋರ್‌ನ ಗಾಂಧಿ ಸಾಗರ್ ಅರಣ್ಯ ಪ್ರದೇಶದಲ್ಲಿ ಮೋಹನ್ ಯಾದವ್ ಹಾಟ್‌ ಏರ್‌ ಬಲೂನ್‌ನಲ್ಲಿ

ಐಜ್ವಾಲ್:ಸೆ. 13: ಮಿಜೋರಾಂನ ಮೊಟ್ಟಮೊದಲ ರೈಲು ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿಸಿದ್ದಾರೆ. 2015ರಲ್ಲಿ ಪ್ರಾರಂಭವಾದ ರೈಲ್ವೆ ಕಾಮಗಾರಿ ಇದೀಗಪೂರ್ಣಗೊಂಡಿದ್ದು, ಸೈರಾಂಗ್‌ನಿಂದ ದೆಹಲಿ ಸಂಪರ್ಕಿಸುವ ರಾಜಧಾನಿ ಎಕ್ಸ್‌ಪ್ರೆಸ್ ರೈಲು, ಸೈರಾಂಗ್-ಗುವಾಹಟಿ ಎಕ್ಸ್‌ಪ್ರೆಸ್ ಮತ್ತು ಸೈರಾಂಗ್-ಕೋಲ್ಕತ್ತಾ ಎಕ್ಸ್‌ಪ್ರೆಸ್ ರೈಲನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಮಿಜೋರಾಂ ಗುಡ್ಡಗಾಡಿನಿಂದ ಕೂಡಿದ

ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಧಾಕೃಷ್ಣನ್‌ಗೆ ಪ್ರಮಾಣವಚನ ಬೋಧಿಸಿದರು. ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಶುಕ್ರವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರು: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ನಾಮನಿರ್ದೇಶನಗೊಂಡ ಡಾ. ಆರತಿ ಕೃಷ್ಣ, ರಮೇಶ್ ಬಾಬು, ಎಫ್. ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್.ಕೆ ಅವರು ವಿಧಾನ ಪರಿಷತ್ ನ ಸದಸ್ಯರಾಗಿ ಪಮಾಣ ವಚನ ಸ್ವೀಕರಿಸಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು

ಮಂಗಳೂರು: ಸೆಪ್ಟೆಂಬರ್ 12: ಧರ್ಮಸ್ಥಳ ‘ಬುರುಡೆ’ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಇದೀಗ ಮತ್ತೊಂದು ಪ್ರಮುಖ ನಿರ್ಧಾರಕ್ಕೆ ಬಂದಿದೆ. ‘ಬುರುಡೆ’ ಪ್ರಕರಣದ ಜತೆಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಶವ ದಫನ ದಾಖಲೆಗಳತ್ತವೂ ಎಸ್ಐಟಿ ಗಮನ ಕೇಂದ್ರೀಕರಿಸಿದೆ. ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶವಗಳ ದಫನದಲ್ಲೇ