ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್​ ಘೋಷಿಸಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜುಲೈ 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್​, ಗ್ರಾಮ ಒನ್ ಅಥವಾ ಬಾಪೂಜಿ ಸೇವಾ

ಬೆಂಗಳೂರು: ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದೆ. ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್‌ಎಲ್‌ವಿ ಮಾರ್ಕ್ 3 'ಬಾಹುಬಲಿ ರಾಕೆಟ್'

ಉಡುಪಿ:4ನೇ ಪರ್ಯಾಯ ನಮ್ಮದೇ ಮು೦ದಿನ ಪರ್ಯಾಯ ನಮ್ಮ ಶಿಷ್ಯರಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಗಳಿ೦ದ ಶ್ರೀಕೃಷ್ಣನಿಗೆ ಸೇವೆ ನಡೆಯಲಿದೆ ಎ೦ದು ಶುಕ್ರವಾರದ೦ದು ಪುತ್ತಿಗೆ ಮಠದ ಸಭಾ೦ಗಣದಲ್ಲಿ ನಡೆದ ಪರ್ಯಾಯ ಸಮಾಲೋಚನಾ ಸಭೆಯಲ್ಲಿ ಪುತ್ತಿಗೆ ಶ್ರೀಸುಗುಣೇ೦ದ್ರ ತೀರ್ಥಶ್ರೀಗಳು ತಿಳಿಸಿದ್ದಾರೆ. 2ನೇ ತರಗತಿಯ ಪರೀಕ್ಷೆಯನ್ನು ಮುಗಿಸಿದ ತಾವು ನೇರವಾಗಿ ನಮ್ಮ ಗುರುಗಳಿ೦ದ ಶಿಷ್ಯ ಸ್ವೀಕರಿಸಿದ ತಾವು

ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ಅವರು ವರ್ಗಾವಣೆಗೊಂಡಿದ್ದಾರೆ. ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ.ಕೆ ಅವರು, ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ರಾಜ್ಯ

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿ ಅಕ್ಷರಶಃ ಪ್ರವಾಹಕ್ಕೆ ಸಿಲುಕಿದ್ದು, ಕಳೆದ ಮೂರು ದಿನದಿಂದ ದೆಹಲಿಯಲ್ಲಿ ಮಳೆಯಾಗಿಲ್ಲ.. ಆದರೂ ದೆಹಲಿಯಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದ್ದು, ದೆಹಲಿ ಮೆಟ್ರೋಗೆ ಸ್ಪೀಡ್ ಲಿಮಿಟ್ ಹೇರಲಾಗಿದ್ದು, ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಅಗತ್ಯ ವಸ್ತುಗಳ ಟ್ರಕ್‌ಗಳಿಗೆ ಮಾತ್ರ ದೆಹಲಿಯಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಉಕ್ಕಿ

ತಿರುಪತಿ: ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನವು ತನ್ನ ಮೂರನೇ ದಂಡಯಾತ್ರೆಯಲ್ಲಿ ಚಂದ್ರನ ಕಡೆಗೆ ಹಾರಲು ಸಿದ್ಧವಾಗಿದ್ದು, ಈ ಮಧ್ಯೆ ಚಂದ್ರಯಾನ-3 ಉಪಗ್ರಹ ನೌಕೆಯ ಮಾಡೆಲ್ ಜೊತೆ ಇಸ್ರೋ ವಿಜ್ಞಾನಿಗಳು ಹಾಗೂ ಸಿಬ್ಬಂದಿಗಳ ತಂಡ ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದೆ. ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಬಾಲಾಜಿಯ ದೇಗುಲಕ್ಕೆ

ರಾಂಚಿ: ಹಣೆಗೆ ಬಿಂದಿ (Bindi) ಧರಿಸಿ ಶಾಲೆಗೆ ಹೋಗಿದ್ದ ವಿದ್ಯಾರ್ಥಿನಿಯನ್ನು (Student) ಶಿಕ್ಷಕಿಯೊಬ್ಬರು (Teacher) ಥಳಿಸಿದ್ದು, ಘಟನೆಯಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ಜಾರ್ಖಂಡ್ ನ ಧನ್‌ಬಾದ್‌ನಲ್ಲಿ (Dhanbad) ಈ ಘಟನೆ ನಡೆದಿದ್ದು, ಹಣೆಗೆ ಬಿಂದಿ ಧರಿಸಿ ಶಾಲೆಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕಿಯೊಬ್ಬರು (Teacher) ಥಳಿಸಿದ್ದು, ಘಟನೆಯಿಂದ

ಭೋಪಾಲ್: ಮಧ್ಯಪ್ರದೇಶದ ಝಬುವಾ ಜಿಲ್ಲೆಯ ಸರ್ಕಾರಿ ಬುಡಕಟ್ಟು ಬಾಲಕಿಯರ ವಸತಿ ನಿಲಯದಲ್ಲಿ ತಪಾಸಣೆ ವೇಳೆ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಿ, ಬಂಧಿಸಲಾಗಿದೆ. ಬಂಧಿತ ಡೆಪ್ಯುಟಿ ಕಲೆಕ್ಟರ್ ಸುನಿಲ್ ಕುಮಾರ್ ಝಾ(58) ಅವರ ವಿರುದ್ಧ ಮಂಗಳವಾರ ಬೆಳಗ್ಗೆ ಪೋಕ್ಸೊ ಕಾಯಿದೆ ಮತ್ತು SC/ST ದೌರ್ಜನ್ಯ ತಡೆ

ಬೆಂಗಳೂರು: ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಇಂದು ಬುಧವಾರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ಬಿಜೆಪಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿ, ರಾಜ್ಯ ಸರ್ಕಾರದ ವಿರುದ್ಧ

ಬೆಂಗಳೂರು: ನಗರದಲ್ಲಿ ಟೆಕ್ ಕಂಪನಿಯೊಂದರ ವ್ಯವಸ್ಥಾಪಕ ನಿರ್ದೇಶಕ (MD) ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಹತ್ಯೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಘಟನೆ ನಡೆದ 24 ಗಂಟೆಯೊಳಗೆ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಫಿಲೆಕ್ಸ್​, ಶಿವು ಮತ್ತು ಬೆಂಗಳೂರಿನ ರೂಪೇನಾ ಅಗ್ರಹಾರದ ವಿನಯ್​ ರೆಡ್ಡಿ ಬಂಧಿತ ಆರೋಪಿಗಳು. ಬೆಂಗಳೂರಿನ ಅಮೃತಹಳ್ಳಿಯಲ್ಲಿ