ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಬಿಪಿಎಲ್ ಹೊಂದಿರುವವರಿಗೆ 'ಅನ್ನ ಭಾಗ್ಯ'(Anna Bhagya) ಯೋಜನೆ ನಾಳೆ ಜುಲೈ 1ರಂದು ಜಾರಿಗೆ ಬರಲಿದೆ. ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡು ಹೊಂದಿರುವವರಿಗೆ ನೀಡುವ 5 ಕೆಜಿ ಅಕ್ಕಿ (Rice) ಜೊತೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಹಣ(Money) ನೀಡುವುದಾಗಿ ರಾಜ್ಯ
ಕಾರವಾರ: ಆಘಾತಕಾರಿ ಘಟನೆಯೊಂದರಲ್ಲಿ ಗೋವಾದ ಮೂವರ ಕುಟುಂಬವೊಂದು ಸಾಲದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ಇಲ್ಲಿನ ಕಾಳಿ ನದಿ ದಂಡೆಯಲ್ಲಿ ಸಾವನ್ನಪ್ಪಿದ್ದರೆ, ಗೋವಾದಲ್ಲಿ ಒಬ್ಬರು ನೇಣು ಹಾಕಿಕೊಂಡಿದ್ದಾರೆ. ಕಾರವಾರದಿಂದ 5 ಕಿಮೀ ದೂರದಲ್ಲಿರುವ ದೇವಬಾಗ್ ದ್ವೀಪದಲ್ಲಿ ಬುಧವಾರ 12 ವರ್ಷದ ಬಾಲಕನ ಶವವನ್ನು ಸ್ಥಳೀಯರು ಪತ್ತೆ ಮಾಡಿದ ನಂತರ ಇದು ಗೊತ್ತಾಗಿದೆ.
ಬೆಂಗಳೂರು: ಆ್ಯಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸ್ನಾತಕೋತ್ತರ ಪದವೀಧರೆಯಾಗಿರುವ ಸಂತ್ರಸ್ತೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ, ಸಂತ್ರಸ್ತೆ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು. 2022ರ ಏಪ್ರಿಲ್ 28 ರಂದು ಆ್ಯಸಿಡ್ ದಾಳಿಗೆ ತುತ್ತಾಗಿದ್ದ
ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 10 ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ತಿಳಿಸಿದೆ. ಈ ಅವಧಿಯಲ್ಲಿ ಅಲಲ್ಲಿ ಅತಿ ಹೆಚ್ಚು 244.4 ಮಿಲಿ ಮೀಟರ್ ಮಳೆಯೊಂದಿಗೆ ಕರಾವಳಿ ಜಿಲ್ಲೆಯಲ್ಲಿ 64 ಮಿ.ಮೀ ನಿಂದ 115
ಬದ್ರಿನಾಥ್: ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದ್ದು, ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಿಲುಕಿದ್ದಾರೆ. ಉತ್ತರಾಖಂಡ್ ನ ಚಿಮೋಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ನೂರಾರು ಮಂದಿ ಯಾತ್ರಿಕರು ಸಿಲುಕಿದ್ದಾರೆ. ಯಾತ್ರಿಕರು ಬದ್ರಿನಾಥ್ ಹಾಗೂ ಹೇಮಕುಂಡ್ ಸಾಹಿಬ್ ಗೆ ಯಾತ್ರೆ ಕೈಗೊಂಡಿದ್ದರು. ರಸ್ತೆಯಲ್ಲಿ ಅವಶೇಷಗಳ ರಾಶಿ ಬಿದ್ದಿದ್ದು, ನೂರಾರು ವಾಹನಗಳು ಸಾಲುಗಟ್ಟಿ ನಿಂತಿರುವ ಹಿನ್ನೆಲೆಯಲ್ಲಿ
ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಬುಧವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಭಾರೀ ಮಳೆಯಿಂದಾಗಿ ಅನೇಕ ಪ್ರದೇಶಗಳು ಜಲಾವೃತವಾಗಿದ್ದು, ಅಂಧೇರಿ ಸುರಂಗಮಾರ್ಗವನ್ನು ಬಂದ್ ಮಾಡಲಾಗಿದೆ. ಇದರಿಂದ ಉಪನಗರ ರೈಲು ಸೇವೆ ವಿಳಂಬವಾಗುತ್ತಿದೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಬೃಹನ್
ಇಂಫಾಲ: ಮಣಿಪುರ ಹಿಂಸಾಚಾರದಿಂದ ಹೆಚ್ಚು ತತ್ತರಿಸಿರುವ ಚುರಚಂದಪುರ ಜಿಲ್ಲೆಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ಪಡೆ ವಾಹನವನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ಗುರುವಾರ ತಿಳಿದುಬಂದಿದೆ. ರಾಹುಲ್ ಗಾಂಧಿ ಇಂದು ಬೆಳಗ್ಗೆ ಇಂಫಾಲ್ ಗೆ ಬಂದಿಳಿದರು ಹಾಗೂ ಚುರಚಂದಪುರ ಜಿಲ್ಲೆಗೆ ತೆರಳುತ್ತಿದ್ದ ಮಾರ್ಗದಲ್ಲಿ ಅವರನ್ನು ತಡೆಯಲಾಗಿದೆ. ಮಣಿಪುರಕ್ಕೆ ಇಂದು
ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನಲೆಯಲ್ಲಿ ನಿನ್ನೆ ಹಲವೆಡೆ ದಾಳಿ ಮಾಡಿದ್ದ ಲೋಕಾಯುಕ್ತ ಪೊಲೀಸರು ಇಂದು ಕೆಆರ್ ಪುರ ತಹಶೀಲ್ದಾರ್ ಅಜಿತ್ ರೈ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರು ಸೇರಿ ಅಜಿತ್ಗೆ ಸೇರಿದ 12 ಕಡೆ ಲೋಕಾಯುಕ್ತ ಪೊಲೀಸರು ನಿನ್ನೆ ದಾಳಿ ನಡೆಸಿದ್ದರು. ಸತತ 30 ಗಂಟೆಗಳ
ಬೆಂಗಳೂರು: ಕರ್ನಾಟಕ ಸರ್ಕಾರವು ತನ್ನ ಚುನಾವಣಾ ಖಾತರಿಯನ್ನು ಪೂರೈಸಲು ಅಗತ್ಯವಾದ ದೊಡ್ಡ ಪ್ರಮಾಣದ ಅಕ್ಕಿಯನ್ನು ಸಂಗ್ರಹಿಸಲು ತೊಂದರೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಪ್ರತಿ ಕೆಜಿಗೆ 34 ರೂ.ನಂತೆ ಹಣ ಪಾವತಿಸಲು ನಿರ್ಧರಿಸಿದೆ. ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕೇಂದ್ರವು ಉಚಿತವಾಗಿ ನೀಡುವ ಐದು ಕೆಜಿ
ಕೀವ್: ಪೂರ್ವ ಉಕ್ರೇನ್‌ನ ಕ್ರಾಮಾಟೋರ್ಸ್ಕ್ ನಗರದ ಜನನಿಬಿಡ ಪಿಜ್ಜಾ ರೆಸ್ಟೋರೆಂಟ್‌ಗೆ ರಷ್ಯಾದ ಕ್ಷಿಪಣಿ ಅಪ್ಪಳಿಸಿದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ರಕ್ಷಣಾ ಕಾರ್ಯಕರ್ತರು ನಾಶವಾದ ಕಟ್ಟಡದ ಅವಶೇಷಗಳಲ್ಲಿ ಹುಡುಕಾಟ ಮುಂದುವರೆಸಿದ್ದಾರೆ. ಮಂಗಳವಾರ ಸಂಜೆ ಕ್ರಮಾಟೋರ್ಸ್ಕ್ ನಗರದ ರಿಯಾ ಪಿಜ್ಜಾ ರೆಸ್ಟೋರೆಂಟ್