ಮಂಗಳೂರು:ಸೆ.11: ಧರ್ಮಸ್ಥಳ ಬುರುಡೆ ಪ್ರಕರಣ ತನಿಖೆ ಚುರುಕುಗೊಳಿಸಿರುವ ಎಸ್ಐಟಿ, ಈಗಾಗಲೇ ಬುರುಡೆ ಚಿನ್ನಯ್ಯನನ್ನು ತೀವ್ರ ವಿಚಾರಣೆಗೊಳಪಡಿಸಿ ಶಿವಮೊಗ್ಗ ಜೈಲಿಗೆ ಸ್ಥಳಾಂತರ ಮಾಡಿದೆ. ಚಿನ್ನಯ್ಯ ನೀಡಿದ ಹೇಳಿಕೆ ಆಧರಿಸಿ ಹಲವರ ವಿಚಾರಣೆಯನ್ನು ತೀವ್ರಗೊಳಿಸಲಾಗಿದ್ದು, ಯಾವುದೇ ಕ್ಷಣದಲ್ಲಿ ಗ್ಯಾಂಗ್ನ ಹಲವರನ್ನು ಬಂಧಿಸುವ ಸಾಧ್ಯತೆ ಇದೆ. ಬುರುಡೆ ಕೇಸ್ನಲ್ಲಿ 6 ಮಂದಿಗೆ ಸಂಕಷ್ಟ
ಬೆಳಗಾವಿ: ಆರು ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆಗೈದು ಅಪಘಾತ ಎಂದು ಬಿಂಬಿಸಿದ್ದ ಪತಿ ಹಾಗೂ ಆತನ ಇಬ್ಬರು ಸಹಜರರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಚೈತಾಲಿ ಪ್ರದೀಪ್ ಕಿರಣಗಿ (23) ಹತ್ಯೆಯಾದ ಗರ್ಭಿಣಿ ಮಹಿಳೆ. ಆರೋಪಿಗಳನ್ನು ಮಹಿಳೆಯ ಪತಿ ಪ್ರದೀಪ್ ಅನ್ನಾಸಾಬ್ ಕಿರಣಗಿ ಈತನ ಸಹಚರರಾದ ಸದ್ದಾಂ ಅಕ್ಬರ್ ಇಮಂದರ್ ಮತ್ತು ರಾಜನ್
ಬೆಂಗಳೂರು: 14 ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ಗೋರಕ್ಷಕ. ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ ಅವರನ್ನು ಬಸವನಗುಡಿ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಪುನೀಕ್ ಕೆರೆಹಳ್ಳಿ ಅವರನ್ನು ಬಿಎನ್ಎಸ್ಎಸ್ನ ಸೆಕ್ಷನ್ 127 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ದಕ್ಷಿಣ ವಿಭಾಗದ ವಿಶೇಷ
ಬೆಂಗಳೂರು: ಕಾರಾಗೃಹದಲ್ಲಿರುವ ವಿಚಾರಣಾಧೀನ ಹಾಗೂ ಸಜಾ ಕೈದಿಗಳಿಗೆ ಕದ್ದುಮುಚ್ಚಿ ಮೊಬೈಲ್ ಪೂರೈಕೆ ಸೇರಿದಂತೆ ಇತ್ತೀಚಿಗಿನ ನಟ ದರ್ಶನ್ಗೆ ದೊರಕುತ್ತಿದ್ದ ರಾಜಾತಿಥ್ಯ ವಿಚಾರವಾಗಿ ಪರಪ್ಪನ ಅಗ್ರಹಾರ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಇದೀಗ ಪರಪ್ಪನ ಅಗ್ರಹಾರ ಮತ್ತೆ ಸುದ್ದಿಯಲ್ಲಿದ್ದು ಜೈಲು ವಾರ್ಡನ್ನಿಂದಲೇ ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ ಮಾಡಲಾಗಿದೆ ಎಂಬುದು ಬಹಿರಂಗಗೊಂಡಿದೆ. ಕೈದಿಗಳಿಗೆ
ಪ್ಯಾರಿಸ್: ನೇಪಾಳದಲ್ಲಿ ಹಿಂಸಾಚಾರದ ಬೆಂಕಿಯ ಕಾವು ಇನ್ನೂ ಕಡಿಮೆಯಾಗಿಲ್ಲ. ಇದರ ಬೆನ್ನಲ್ಲೇ ಫ್ರೆಂಚ್ ರಾಜಧಾನಿ ಪ್ಯಾರಿಸ್ ಕೂಡ ಧಗಧಗಿಸುತ್ತಿದೆ. ಬ್ಲಾಕ್ ಎವೆರಿಥಿಂಗ್ ಆಂದೋಲನದ ನಂತರ, ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರು ಬೀದಿಗಿಳಿದಿದ್ದಾರೆ. ಪ್ಯಾರಿಸ್ನ ಎಲ್ಲೆಡೆ ಬೆಂಕಿ ಹಚ್ಚಿದ್ದಾರೆ. ಪ್ರತಿಭಟನೆ ಹಿನ್ನಲೆ ಪೊಲೀಸರು 200 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಪ್ಯಾರಿಸ್ನಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ
ಭಾಲ್ಕಿ: ಒಂದೇ ಕುಟುಂಬದ ನಾಲ್ವರು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನಲ್ಲಿ ಮಂಗಳವಾರ ನಡೆದಿದೆ. ಕಾರಂಜಾ ಜಲಾಶಯದ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಬೀದರ್ ನ ಮೈಲೂರಿನವರಾದ ಶಿವಮೂರ್ತಿ ಮಾರುತಿ ಬ್ಯಾನರ್ಜಿ (45) ಅವರ ಮೂವರು ಮಕ್ಕಳಾದ ಶ್ರೀಶಾಂತ (9)
ನವದೆಹಲಿ: ಭಾರತ-ಅಮೇರಿಕಾ ಆಪ್ತ ಸ್ನೇಹಿತರು ಮತ್ತು ನೈಸರ್ಗಿಕ ಪಾಲುದಾರರು. ನಿಮ್ಮೊಂದಿಗೆ ಮಾತನಾಡಲು ನಾನೂ ಉತ್ಸುಕನಾಗಿದ್ದೇನೆಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಹೇಳಿದ್ದಾರೆ. ಆತ್ಮೀಯ ಸ್ನೇಹಿತನೊಂದಿಗೆ ಮಾತನಾಡಲು ಎದುರು ನೋಡುತ್ತಿದ್ದೇನೆಂಬ ಟ್ರಂಪ್ ಅವರ ಹೇಳಿಕೆ ಕುರಿತು ಪ್ರಧಾನಿ ಮೋದಿಯವರು ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್
ಮಂಗಳೂರು, ಸೆಪ್ಟೆಂಬರ್ 07: ಧರ್ಮಸ್ಥಳ ಬುರುಡೆ ಪ್ರಕರಣದ (Dharmasthala Case) ಒಂದೊಂದೆ ಸತ್ಯಗಳು ಹೊರ ಬರುತ್ತಿವೆ. ಇಷ್ಟು ದಿನ ಬುರುಡೆ ಕಥೆ ಕೇಳಿ ಗುಂಡಿ ತೋಡಿದ್ದ ಎಸ್ಐಟಿ ಅಧಿಕಾರಿಗಳಿಗೂ ಪಿತ್ತ ನೆತ್ತಿಗೇರಿತ್ತು. ತನಿಖೆ ವೇಳೆ ಒಬ್ಬೊಬ್ಬರದ್ದೂ ಒಂದೊಂದು ಹೇಳಿಕೆ ನೀಡಿದ್ದರು. ಜಯಂತ್.ಟಿ ನೋಡಿದರೆ ನಾನು ಕೊಟ್ಟಿರೋದು ಅಲ್ಲ, ಗಿರೀಶ್
ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅನುಭವಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೆಲಸ ಹಂಚಿಕೆ ಮಾಡಲಾಗಿದ್ದು, ಗ್ರಂಥಾಲಯದಲ್ಲಿ ಕ್ಲರ್ಕ್ ಕೆಲಸ ನೀಡಲಾಗಿದೆ. ಜೈಲು ಅಧಿಕಾರಿಗಳ ಪ್ರಕಾರ, ವಿಚಾರಣಾಧೀನ ಕೈದಿಗಳು ಮತ್ತು ಸಜಾಬಂದಿಗಳಿಗೆ ಗ್ರಂಥಾಲಯದಿಂದ ಪುಸ್ತಕ ವಿತರಣೆ
ಉಡುಪಿಯ ಶ್ರೀಕೃಷ್ಣಮಠದಲ್ಲಿ ಸೆ.14,15ರ೦ದು ನಡೆಯಲಿರುವ ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಮಕ್ಕಳಿಗೆ ಹಾಗೂ ಮಹಿಳೆಯರಿಗಾಗಿ ವಿವಿಧ ಆಟೋಸ್ಪರ್ಧೆಯನ್ನು ಭಾನುವಾರದ೦ದು ನಡೆಸಲಾಯಿತು. ಟೊ೦ಕ,ತಲೆಮೇಲೆ ಬಟ್ಟಲನ್ನು ಹಿಡಿದು ನಡೆದುಕೊ೦ಡು ಹೋಗುವ ಸ್ಪರ್ಧೆ, ಗೋಣಿ ಚೀಲದೊಳಗೆ ಕಾಲು ಹಾಕಿ ಹಾರಿಹೋಗುವ ಸ್ಪರ್ಧೆ, ನಿಧಾನ ಸೈಕಲ್ ಬಿಡುವ ಸ್ಪರ್ಧೆ ಹಾಗೂ ಇತರರ ಆಟಗಳ ಸ್ಪರ್ಧೆಯನ್ನು ಉಡುಪಿಯ ರಥಬೀದಿಯ ಪುತ್ತಿಗೆ ಮಠದ