ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ನವದೆಹಲಿ: ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ ನಡೆಯುತ್ತಿರುವ ಹಿನ್ನಲೆಯಲ್ಲಿ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ ಅವರಿಗೆ ಕುಟುಂಬವಷ್ಟೇ ಮುಖ್ಯ.. ದೇಶದ ಏನೂ ಅಲ್ಲ ಎಂದು ಕಿಡಿಕಾರಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್ ಪೋರ್ಟ್ ಬ್ಲೇರ್ ನಲ್ಲಿ ವೀರ್ ಸಾವರ್ಕರ್ ವಿಮಾನ ನಿಲ್ದಾಣದ ಟರ್ಮಿನಲ್ ನ ವರ್ಚುವಲ್ ಉದ್ಘಾಟನೆ ಬಳಿಕೆ ಮಾತನಾಡಿದ ಪ್ರಧಾನಿ ಮೋದಿ,

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್​ ನ್ಯಾಷನಲ್ ಡೆವಲಪ್ ಮೆಂಟಲ್​​ ಇನ್​ಕ್ಲೂಸಿವ್​​​​ ಅಲೈನ್ಸ್(INDIA) ಎಂದು ನಾಮಕರಣ ಮಾಡಿರುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಪ್ರತಿಪಕ್ಷಗಳ ಸಭೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ

ಉಡುಪಿ:ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜುಲೈ18ರಿ೦ದ ಅಗಸ್ಟ್17ರವರೆಗೆ ನಡೆಯಲಿರುವ ಶ್ರಾವಣ ಪುರುಷೋತ್ತಮ ಮಾಸ (ಅಧಿಕ)ಅಹೋರಾತ್ರಿ ಭಜನಾ ಮಹೋತ್ಸವಕ್ಕೆ ಮ೦ಗಳವಾರದ೦ದು ಅದ್ದೂರಿಯಿ೦ದ ಚಾಲನೆ ನೀಡಲಾಯಿತು. ದೇವಳದ ಅರ್ಚಕರಾದ ವಿನಾಯಕ ಭಟ್, ದಯಾಘನ ಭಟ್ ಇವರ ನೇತೃತ್ವದಲ್ಲಿ ಶ್ರೀದೇವರಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದ ಬಳಿಕ ದೀಪ ಪ್ರಜ್ವಲಿಸುವುದರೊ೦ದಿಗೆ ಶ್ರೀವಿಠೋಭ ರಖುಮಾಯಿ ದೇವರಿಗೆ ಆರತಿಯನ್ನು ಬೆಳಗಿಸಲಾಯಿತು.

ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ ಮಂಗಳವಾರ ಮುಂಜಾನೆ 4.25ಕ್ಕೆ ಬೆಂಗಳೂರಿನ ಚಿನ್ಮಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು, ಅವರು ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಉಮ್ಮನ್ ಚಾಂಡಿ ಅವರು ಕಳೆದ 50 ವರ್ಷಗಳಿಗೂ ಹೆಚ್ಚು ಕಾಲ ಕೊಟ್ಟಾಯಂ ಜಿಲ್ಲೆಯ ಪುತ್ತುಪಲ್ಲಿ

ಬೆಂಗಳೂರು: ಬೆಂಗಳೂರಿನಲ್ಲಿ ಕಾಂಗ್ರೆಸ್ ಕರೆದಿರುವ ಎರಡನೇ ಏಕತಾ ಸಭೆಗೆ 24 ವಿರೋಧ ಪಕ್ಷಗಳ ನಾಯಕರಿಗೆ ಆಹ್ವಾನ ನೀಡಲಾಗಿದ್ದು, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ಎಚ್ ಎಎಲ್ ವಿಮಾನ

ಉಡುಪಿ: ಸರಕಾರಿ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ನಿಧನ ಹೊ೦ದಿದ ಬಳಿಕ ಪತ್ರಿ ತಿ೦ಗಳಿಗೆ ಅವರ ಹೆ೦ಡತಿಗೆ ಬರುತ್ತಿದ್ದ ಸುಮಾರು 16,000/-ಮಾಶಸನವು ಬರದೇ ಜೀವನವನ್ನೇ ನಡೆಸಲು ಕಷ್ಟವಾಗಿರುವ ಘಟನೆಯೊ೦ದು ಉಡುಪಿಯಲ್ಲಿದ್ದು ಈ ಬಗ್ಗೆ ಸ೦ಬ೦ಧ ಪಟ್ಟರವರಲ್ಲಿ ವಿಚಾರಿಸಿದಾಗ ಯಾವುದೇ ಪರಿಹಾರವು ಕಳೆದ ಒ೦ದು ವರುಷದಿ೦ದಲೂ ಸಿಗುತ್ತಿಲ್ಲವೆ೦ದು ನೋ೦ದ ಮಹಿಳೆಯೊಬ್ಬರು ಕರಾವಳಿಕಿರಣ ಡಾಟ್

ಮಧ್ಯಪ್ರದೇಶ: ಎಸ್‌ಯುವಿ ಕಾರು ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ (Madhya Pradesh) ಸಾಗರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸನೋಧಾ ಪೊಲೀಸ್ ಠಾಣೆ ವ್ಯಾಪ್ತಿಯ ಸನೋಧಾ ಜಟಾಶಂಕರ ಕಣಿವೆ ಬಳಿ ಈ ದುರ್ಘಟನೆ ನಡೆದಿದೆ ಎಂದು ಅಧಿಕಾರಿಗಳು

ಬೆಂಗಳೂರು: ಲೋಕಸಭೆ ಚುನಾವಣೆ 2024ಕ್ಕೆ ಮುನ್ನುಡಿಯಾಗಿ ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಬಿರುಸಿನ ರಾಜಕೀಯ ಚಟುವಟಿಕೆಯ ತಾಣವಾಗುತ್ತಿದೆ. ದೇಶದ ಘಟಾನುಘಟಿ ರಾಜಕೀಯ ನಾಯಕರು ರಾಜಧಾನಿಗೆ ಆಗಮಿಸುತ್ತಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟವನ್ನು ಕಟ್ಟಿಹಾಕುವುದು ಈ ನಾಯಕರ ಸಭೆಯ ಉದ್ದೇಶವಾಗಿದೆ. ಕೇಂದ್ರದಲ್ಲಿ ಬಿಜೆಪಿ

ತಿರುಪತಿ: ಇನ್ಫೋಸಿಸ್ ಸಂಸ್ಥೆ ಸಹ ಸಂಸ್ಥಾಪಕ ಎನ್‌.ಆರ್. ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ತಿರುಪತಿ‌ ವೆಂಕಟೇಶ್ವರಸ್ವಾಮಿಗೆ  ಬಂಗಾರದ ಶಂಖ ಹಾಗೂ ಆಮೆ ವಿಗ್ರಹ ಕಾಣಿಕೆಯಾಗಿ ನೀಡಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ಮೂಲಕ ಸುಧಾಮೂರ್ತಿ ಅವರು ಸಾಕಷ್ಟು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ನಾರಾಯಣಮೂರ್ತಿ ದಂಪತಿ ಮೊದಲಿನಿಂದಲೂ ಸರಳ ಜೀವನ ನಡೆಸುತ್ತಾ

ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೆ ಗಲಭೆ ಭುಗಿಲೆದ್ದಿದ್ದು, ರಾಜಧಾನಿ ಪೂರ್ವ ಇಂಫಾಲ್​​ನಲ್ಲಿ (Imphal) ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇಂಫಾಲದ ಸಾವೊಂಬಂಗ್ ಪ್ರದೇಶದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು 50 ವರ್ಷ ವಯಸ್ಸಿನ ಮಾರಿಂಗ್ ಎಂಬ ಮಹಿಳೆಯ ಮನೆಗೆ ನುಗ್ಗಿ ಅವರ ಮುಖದ ಮೇಲೆ ಗುಂಡು ಹಾರಿಸಿದ್ದಾರೆ.