ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ನವದೆಹಲಿ: ದೆಹಲಿ ಜಲ ಮಂಡಳಿಗೆ ಸಂಬಂಧಿಸಿದ 'ನಕಲಿ' ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಹೊಸ ಸಮನ್ಸ್ ಕಳುಹಿಸಿದೆ ಎಂದು ಎಎಪಿ ಹಿರಿಯ ನಾಯಕಿ ಮತ್ತು ದೆಹಲಿ ಸಚಿವೆ ಅತಿಶಿ ಭಾನುವಾರ ಹೇಳಿದ್ದಾರೆ. 'ಈ ಡಿಜೆಬಿ (ದೆಹಲಿ ಜಲ ಮಂಡಳಿ) ಪ್ರಕರಣದ ಬಗ್ಗೆ ಯಾರಿಗೂ ತಿಳಿದಿಲ್ಲ.

ನವದೆಹಲಿ: ಸಮುದ್ರ ಪ್ರದೇಶದಲ್ಲಿ ಸರಕು ಸಾಗಾಣಿಕಾ ಹಡಗೊಂದರ ಮೇಲೆ ದಾಳಿ ಮಾಡಿ ಅದರಲ್ಲಿನ 17 ಮಂದಿ ಸಿಬ್ಬಂದಿಗಳನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದ ಸೊಮಾಲಿಯಾ ಕಡಲ್ಗಳ್ಳರ ವಿರುದ್ಧ ಸತತ 40 ಗಂಟೆಗಳ ಕಾಲ ಹೋರಾಡಿ 35 ಮಂದಿ ಕಡಲ್ಗಳ್ಳರನ್ನು ಭಾರತೀಯ ನೌಕಾಪಡೆ ಬಂಧಿಸಿದೆ. ಇಸ್ರೇಲ್‌ ಹಾಗೂ ಪ್ಯಾಲೆಸ್ತೀನ್‌ ಮಧ್ಯೆ (Israel Palestine War) ಯುದ್ಧ

ಬೆಂಗಳೂರು: ಬೆಂಗಳೂರಿನಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ಅನಾಥ ಆಶ್ರಮದ ಮೇಲೆ ದಾಳಿ ನಡೆಸಿದ್ದು ದಾಳಿಯಲ್ಲಿ 20 ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ. ಬಾಲಕಿಯರನ್ನು ಗಲ್ಫ್​ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರಿನಲ್ಲಿ ಮಾನವ ಕಳ್ಳಸಾಗಣೆ ನಡೆಯುತ್ತಿದೆ ಎಂದು ಎನ್​ಸಿಪಿಸಿಆರ್​ ದೂರು

ನವದೆಹಲಿ : ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಗೆ ದೆಹಲಿ ಇ ಡಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ ಹಿನ್ನೆಲೆ ಅವರು ದೆಹಲಿ ಕೋರ್ಟ್ ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು

ನವದೆಹಲಿ : 1990ರಲ್ಲಿ ನಕಲಿ ದಾಖಲೆ ಬಳಸಿಕೊಂಡು ಶಸ್ತ್ರಾಸ್ತ್ರ ಪರವಾನಗಿ ಪಡೆದ ಆರೋಪದಲ್ಲಿ ಗ್ಯಾಂಗ್‌ ಸ್ಟರ್‌, ರಾಜಕಾರಣಿ ಮುಖ್ತಾರ್‌ ಅನ್ಸಾರಿಗೆ ವಾರಣಾಸಿಯ ಎಂಪಿ/ಎಂಎಲ್‌ ಎ ಕೋರ್ಟ್‌ ಬುಧವಾರ (ಮಾರ್ಚ್‌ 13) ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಜೈಲಿನಲ್ಲಿರುವ ಮಾಫಿಯಾ ಡಾನ್‌ ಅನ್ಸಾರಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಸೆಕ್ಷನ್‌ 30

ಬೆಂಗಳೂರು:ಮಾ 15: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಬಳಿಕ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಗಂಭೀರ ಗಾಯವಾಗಿರುವ ಬಗ್ಗೆ ವರದಿಯಾಗಿದೆ. ಮಮತಾ ಬ್ಯಾನರ್ಜಿ ಅವರ ಹಣೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಟಿಎಂಸಿ ಪಕ್ಷ ಅಧಿಕೃತವಾಗಿ ತಿಳಿಸಿದೆ. ಟಿಎಂಸಿ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಮತಾ ಬ್ಯಾನರ್ಜಿ

ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ. ಬಾಲಕಿಯ ತಾಯಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳೆದ ಫೆಬ್ರವರಿ

ಬೆಂಗಳೂರು: ನಗರದ ಉತ್ತರ ಲೋಕಸಭಾ ಟಕೆಟ್ ಸಿಕ್ಕ ಬೆನ್ನಲ್ಲೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಜಿ ಸಿಎಂ ಹಾಗೂ ಕ್ಷೇತ್ರದ ಹಾಲಿ ಸಂಸದ ಸದಾನಂದ ಗೌಡ ಅವರನ್ನು ಭೇಟಿಯಾಗಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಲೋಕಸಭಾ ಚುನಾವಣೆ ಬಗ್ಗೆ ಚರ್ಚಿಸಿ, ಸಹಕಾರ ನೀಡುವಂತೆ ಶೋಭಾ ಅವರು ಕೇಳಿಕೊಂಡಿದ್ದಾರೆ. ಕಳೆದ