......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

ಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ ಟಿಪ್ಪರ್ ಲಾರಿ ಮತ್ತು ಖಾಸಗಿ ಬಸ್ ಡಿಕ್ಕಿ ಹೊಡೆದು ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿತು. ಇದರ ಪರಿಣಾಮ ಬಸ್‌ನಲ್ಲಿದ್ದ 10 ಪ್ರಯಾಣಿಕರು ಸಜೀವ ದಹನವಾದರೆ, 18 ಮಂದಿ ಗಾಯಗೊಂಡಿದ್ದಾರೆ. ಬಸ್ ಮತ್ತು ಟಿಪ್ಪರ್

ಬೆಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಪೊಲೀಸಪ್ಪನ ಕಾಮಕಾಂಡ ಬಯಲಾಗಿದೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೇಡಿ ರೌಡಿಶೀಟರ್​​ಗೆ ಕಿರುಕುಳದ ಆರೋಪ ಮಾಡಿದ್ದಾರೆ. Love Me ಎಂದು ಇನ್ಸ್​ಪೆಕ್ಟರ್​​ ಪಾಪಣ್ಣ ಮಹಿಳಾ

ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಮಂಗಳವಾರ ರಾತ್ರಿ ತಿಗಳರ ಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಲಾಯಿತು. ದೇವಾಲಯದ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸುತ್ತಲೂ ದೀಪಾಲಂಕಾರಕ್ಕಾಗಿ 39 ಲಕ್ಷ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ. 11 ದಿನಗಳ ಈ ಕಾರ್ಯಕ್ರಮಕ್ಕೆ ಸಮಿತಿಯು ಸುಮಾರು 10 ಲಕ್ಷ ಜನರನ್ನು

ಶಿಮ್ಲಾ, ಮಾರ್ಚ್​ 22: ಹಿಮಾಚಲ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಭೂಕುಸಿತ ಉಂಟಾಗಿದೆ. ಮಂಡಿ ಜಿಲ್ಲೆಯ ಕೋಟ್ಲಿ ಹಳ್ಳಿಯಲ್ಲಿ ಭೂಕುಸಿತ ಉಂಟಾಗಿದೆ. ಬಂಡೆ, ಮಣ್ಣು ಎಲ್ಲವೂ ರಸ್ತೆಗೆ ಅಡ್ಡವಾಗಿ ಬಿದ್ದಿವೆ. ಎರಡು ದಿನಗಳ ಹಿಂದಷ್ಟೇ ಕುಲ್ಲುವಿನ ಪಾರ್ವತಿ ಕಣಿವೆಯಲ್ಲಿ, ಘಾಟಿಗಢದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದ್ದರಿಂದ ಮಣಿಕರಣ್-ಬರ್ಶೈನಿ ರಸ್ತೆಯಲ್ಲಿ

ಉಡುಪಿ: ಬಡನಿಡಿಯೂರಿನ ಸಮುದ್ರ ತೀರದಲ್ಲಿ ರೆಸಾರ್ಟ್ ನಿರ್ಮಿಸಲು ಕಾನೂನಿನಲ್ಲಿ ಯಾವುದೇ ತೊಡಕಿಲ್ಲದೇ ಇದ್ದರೂ ವೈಯಕ್ತಿಕ ದ್ವೇಷದಿಂದ ಶಾಸಕ ಯಶ್ವಾಲ್ ಸುವರ್ಣ ಅವರು ರೆಸಾರ್ಟ್ ನಿರ್ಮಾಣಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ. ಕರಂಬಳ್ಳಿಯ ಅವರ ನಿವಾಸದಲ್ಲಿ ಕರೆಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕಾರಣಿಗಿಂತ ಮೊದಲು ನಾನು

ಬೆಂಗಳೂರು: ಚಿಕ್ಕಮಗಳೂರಿನಲ್ಲಿ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ದೊಡ್ಡ ಸಂಚಲನವೊಂದು ಸೃಷ್ಟಿಯಾಗಿದೆ. ಜಿಲ್ಲೆಯ ಪ್ರಭಾವಿ ಹಿಂದೂ ಮುಖಂಡರು ಮತ್ತು ಬಿಜೆಪಿ ಪದಾಧಿಕಾರಿಗಳ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಗಡಿಪಾರಿನ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಹಾಗೂ ಭಜರಂಗದಳದ ಪ್ರಮುಖ ಮುಖಂಡ ಸೇರಿದಂತೆ ಒಟ್ಟು 10 ಜನರನ್ನು

ಬೆಂಗಳೂರು: ಅಮಾನತು ಕ್ರಮದ ಬೆನ್ನಲ್ಲೇ ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಶಿಕ್ಷಕಿ ಮೇಲಿನ ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ ಹೊಸ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಿಕ್ಷಣ ಸಂಸ್ಥೆಯ ಮುಖ್ಯ ಶಿಕ್ಷಕಿ ನೀಡಿದ ದೂರಿನ

ಕತಾರ್: ಮಾರ್ಚ್​ 19: ಇರಾನ್ ನಡೆಸುತ್ತಿರುವ ದಾಳಿಯು ಭಾರತಕ್ಕೆ ನೇರವಾಗಿ ಪರಿಣಾಮ ಬೀರದಿದ್ದರೂ ಕೂಡ ಪರೋಕ್ಷವಾಗಿ ಅದರ ಪರಿಣಾಮವನ್ನು ಅನುಭವಿಸುತ್ತಿದೆ. ಪಶ್ಚಿಮ ಏಷ್ಯಾ ಅಥವಾ ಮಧ್ಯಪ್ರಾಚ್ಯವು ಪೂರ್ಣ ಪ್ರಮಾಣದ ಯುದ್ಧಭೂಮಿಯಾಗಿದೆ. ಯುದ್ಧವು ಇರಾನ್ ಮತ್ತು ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವೆ ನೇರವಾಗಿ ನಡೆದರೂ, ಅದರ ಪರಿಣಾಮವು ಇಡೀ

ವಾಷಿಂಗ್ಟನ್‌: ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ನಿರ್ದೇಶಕ ಜೋ ಕೆಂಟ್ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದು, ಇರಾನ್‌ ವಿರುದ್ಧದ ಯುದ್ಧದಲ್ಲಿ ನಾವು ಗೆದ್ದಿದ್ದೇವೆ ಎಂದು ಬೀಗುತ್ತಿರುವ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ತೀವ್ರ ಹಿನ್ನೆಡೆಯಾಗಿದೆ. ಟ್ರಂಪ್ ಆಡಳಿತವು ಇರಾನ್‌ನಲ್ಲಿ ನಡೆಸುತ್ತಿರುವ ಯುದ್ಧವನ್ನು "ಒಳ್ಳೆಯ ಮನಸ್ಸಾಕ್ಷಿಯೊಂದಿಗೆ ಬೆಂಬಲಿಸಲು ಸಾಧ್ಯವಿಲ್ಲ"

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟರಮಣ ದೇವಸ್ಥಾನದಲ್ಲಿ ಚ೦ದ್ರಾಮಾನ ಯುಗಾದಿಯ ದಿನವಾದ ಮಾರ್ಚ್ 19ರ ಗುರುವಾರದ೦ದು ಪೂಜಾ ಪರ್ಯಾಯ ಹಸ್ತಾ೦ತರ ಕಾರ್ಯಕ್ರಮವು ಜರಗಲಿದೆ. ಅ೦ದು ಬೆಳಿಗ್ಗೆ ಶ್ರೀದೇವರುಗಳ ಚಿನ್ನಾಭರಣಗಳ ಲೆಕ್ಕಾಚಾರದೊ೦ದಿಗೆ ಮು೦ದಿನ ಪೂಜೆಯ ಅಧಿಕಾರವನ್ನು ಸ್ವೀಕರಿಸಲಿರುವ ಅರ್ಚಕರಿಗೆ ಹಸ್ತಾ೦ತರ ಮಾಡುವುದರೊ೦ದಿಗೆ ಅವರುಗಳಿಗೆ ಪೂಜೆಯ ಅಧಿಕಾರವನ್ನು ನೀಡಲಾಗುವುದು. ಶ್ರೀಲಕ್ಷ್ಮೀವೆ೦ಕಟರಮಣ ದೇವರಿಗೆ ಅರ್ಚಕರಾದ ದಯಾಘನ್ ಭಟ್ ರವರಿಗೆ ಮು೦ದಿನ