ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆದರಿಕೆ ವಿಚಾರವಾಗಿ ನಿರ್ಮಾಪಕ ದಾಖಲಿಸಿದ್ದ ಕೇಸ್ ಮರುಜೀವ ಪಡೆದುಕೊಂಡಿದೆ. ಈ ಹಿಂದೆ `ಭಗವಾನ್ ಶ್ರೀ ಕೃಷ್ಣಾ’ ಎಂಬ ಭರತ್ ನಿರ್ಮಾಣದ ಸಿನಿಮಾದಲ್ಲಿ ಧೃವನ್ ನಾಯಕನಾಗಿ ನಟಿಸುತ್ತಿದ್ದ. 2020ರಲ್ಲಿ ನಿರ್ಮಾಪಕ ಭರತ್ ಸಿನಿಮಾದ ಶೂಟಿಂಗ್ ಶುರು ಮಾಡಿದ್ದರು.
ಟೆಲ್ ಅವೀವ್: ಅಕ್ಟೋಬರ್ 7ರಂದು ಇಸ್ರೇಲಿಗರ ಮೇಲಿನ ದಾಳಿಯ ರೂವಾರಿ, ಹಮಾಸ್ ಉಗ್ರ ಸಂಘಟನೆ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಕೊನೆಗೂ ಇಸ್ರೇಲ್ ಸೇನೆ ಹೊಡೆದುರುಳಿಸಿದ್ದು, ಇಡೀ ಇಸ್ರೇಲ್ ಇದೀಗ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಗಾಜಾದಲ್ಲಿ ನಡೆದ ದಾಳಿಯಲ್ಲಿ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಅವರನ್ನು ಕೊಂದಿರುವುದಾಗಿ ಇಸ್ರೇಲ್ ಸೇನೆ ಗುರುವಾರ ಹೇಳಿಕೊಂಡಿದೆ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಗಳಲ್ಲಿ ಒಂದಾದ ಕನ್ನಡ ಚಿತ್ರರಂಗದ ಮಾಣಿಕ್ಯ ಕಿಚ್ಚ ಸುದೀಪ್ ಹೋಸ್ಟ್ ಮಾಡುತ್ತಿರುವ ಬಿಗ್ ಬಾಸ್ 11 ನೇ ಸೀಸನ್ ಗೆ ಒಂದಲ್ಲ ಒಂದು ಸಂಕಷ್ಟ ಎದುರಾಗುತ್ತಲೇ ಇದೆ. ಬಿಗ್ ಬಾಸ್ 11 ನೇ ಸೀಸನ್
ಬೆಂಗಳೂರು, ಅಕ್ಟೋಬರ್ 18: ಪಂಚಮಸಾಲಿ 2ಎ ಮೀಸಲಾತಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸಭೆ ನಡೆಯಿತು. ಸಭೆಯಲ್ಲಿ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯಶ್ರೀ ಸೇರಿದಂತೆ ಸಮುದಾಯದ ಘಟನಾನುಘಟಿ ನಾಯಕರೇ ಭಾಗಿಯಾದರು. ಸಚಿವರಾದ ಶಿವರಾಜ ತಂಗಡಗಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ವಿಜಯಾನಂದ್ ಕಾಶಪ್ಪನವರ್, ವಿನಯ್ ಕುಲಕರ್ಣಿ, ಶಾಸಕ
ನವದೆಹಲಿ: ಕೇಂದ್ರ ಸರ್ಕಾರವು ಈ ತಿಂಗಳು ಅಥವಾ ಮುಂದಿನ ತಿಂಗಳೊಳಗೆ ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಗವರ್ನರ್ ಹುದ್ದೆಗಳನ್ನು ಪುನರ್ರಚಿಸುವ ಸಾಧ್ಯತೆಯಿದೆ. ಹಲವಾರು ಗವರ್ನರ್ಗಳು ಮತ್ತು ಲೆಫ್ಟಿನೆಂಟ್ ಗವರ್ನರ್ಗಳು ಈಗಾಗಲೇ ಮೂರರಿಂದ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ, ವಿಶೇಷವಾಗಿ ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ, ಎಡ-ಆಡಳಿತದ ಕೇರಳ, ಜಮ್ಮು
ಕಲಬುರಗಿ: ಕಲಬುರಗಿಯ ಜೇವರ್ಗಿ ರಸ್ತೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ನಿನ್ನೆ ರಾತ್ರಿ 8.30ರ ಸುಮಾರಿಗೆ ಲಾರಿ, ಕಾರು, ದ್ವಿಚಕ್ರ ವಾಹನಗಳ ನಡುವೆ ಈ ಸರಣಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೈಕ್ ಮತ್ತು ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ
ಬೆಂಗಳೂರು, ಅಕ್ಟೋಬರ್ 17: ಕಳೆದ ಎರಡ್ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆಗೆ ಬೆಂಗಳೂರು ಅಕ್ಷರಶಃ ನಲುಗಿ ಹೋಗಿದೆ. ನಾನಾ ಅವಾಂತರಗಳು ಸಂಭವಿಸಿವೆ. ಇಷ್ಟು ದಿನ ಕಾಣಿಯಾಗಿದ್ದ ಸೂರ್ಯದೇವ ಇಂದು ಆಚೆ ಬಂದಿದ್ದಾನೆ. ಆದರೆ ಮಳೆ ಹೊಡೆತಕ್ಕೆ ಸಿಲುಕಿ ಅದರಿಂದ ಸಹಜ ಸ್ಥಿತಿಯತ್ತ ಮರಳುತ್ತಿರುವಾಗಲೇ ಬೆಂಗಳೂರಿಗೆ ಮತ್ತೆ ವರುಣನ ಎಚ್ಚರಿಕೆ
ಬೆಂಗಳೂರು, ಅಕ್ಟೋಬರ್ 16: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಮೊನ್ನೆ ಜಾಮೀನು ಮಂಜೂರು ಆಗಿದೆ. ಜನಪ್ರತಿನಿಧಿಗಳ ಕೋರ್ಟ್, ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ ಜೈಲಧಿಕಾರಿಗಳಿಗೆ ಜಾಮೀನು ಪ್ರತಿ ತಡವಾಗಿ ಕೈ ಸೇರಿದ ಹಿನ್ನೆಲೆ ಇಂದು ಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನಿಂದ ನಾಗೇಂದ್ರ ಬಿಡುಗಡೆ ಆಗಿದ್ದಾರೆ.
ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ವಿಪರೀತ ಮಳೆಯಾಗುತ್ತಿದೆ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು
ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಮೊದಲ ಬಾರಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜಯಗಳಿಸಿದ ನಂತರ ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಾಂಗ್ರೆಸ್ ಪಕ್ಷ ಒಮರ್ ಅಬ್ದುಲ್ಲಾ