ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಮಹತ್ವಾಕಾಂಕ್ಷಿ ಯೋಜನೆಯಾದ ಗಗನಯಾನ ಯೋಜನೆಯ ಭಾಗದ ಬಹು ನಿರೀಕ್ಷಿತ ಪ್ಯಾರಾಚೂಟ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಗಗನಯಾನಿಗಳನ್ನು ಹೊತ್ತ ಕೋಶವನ್ನು (ಮಾಡ್ಯೂಲ್) ಇಳಿಸುವಲ್ಲಿ ಬಳಕೆಯಾಗುವ ಪ್ಯಾರಾಚೂಟ್‌ಗಳ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೊ) ತಿಳಿಸಿದೆ. ಸದ್ಯ ಇಸ್ರೊ ಮಾನವಸಹಿತ ಗಗನಯಾನಕ್ಕೆ

ಚೆನ್ನೈ: ಭಾರತೀಯ ಜನತಾ ಪಕ್ಷದ ತಮಿಳುನಾಡು ಘಟಕದ ಒಟ್ಟು 13 ಪದಾಧಿಕಾರಿಗಳು ಬುಧವಾರ ಕೇಸರಿ ಪಕ್ಷ ತೊರೆದು ಮಿತ್ರ ಪಕ್ಷ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಸೇರಿದ್ದಾರೆ. ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ನಮ್ಮ ಪಕ್ಷದ ನಾಯಕರನ್ನು ಖರೀದಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕ ಆರೋಪಿಸಿದ ಬೆನ್ನಲ್ಲೇ

ನವದೆಹಲಿ: ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರನ್ನು ತಿಹಾರ್‌ ಜೈಲಿನ ಸೆಲ್‌ ನಂಬರ್‌ 1ರಲ್ಲಿ ಇರಿಸಲಾಗಿದ್ದು, ಅದರ ಪಕ್ಕದ ವಾರ್ಡ್‌ ನಂ 9ರಲ್ಲಿ ಘೋರ ಕೊಲೆ ಅಪರಾಧಿಗಳನ್ನು ಇರಿಸಲಾಗಿದೆ. ಈ ಮೂಲಕ "ರಾಜಕೀಯ ಕೊಲೆ"ಗೆ ಸಂಚು ರೂಪಿಸಲಾಗಿದೆ ಎಂದು ಆಮ್‌ ಆದ್ಮಿ ಪಕ್ಷದ(ಎಎಪಿ) ನಾಯಕ ಸೌರಭ್‌ ಭಾರದ್ವಾಜ್‌ ಅವರು

ಶಿವಮೊಗ್ಗ:ಮಾ 08 : ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಾರಿಖ್ ನನ್ನು ತೀರ್ಥಹಳ್ಳಿ ಹಾಗೂ ಶಿವಮೊಗ್ಗಕ್ಕೆ‌ ಸ್ಥಳ ಮಹಜರು ಮಾಡಲಾಗಿದೆ. ಶಾರಿಕ್ ನನ್ನು ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ‌ ಎದುರು ಕರೆತಂದಿರುವ ಎನ್ ಐಎ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ. ಇನ್ನು ತೀರ್ಥಹಳ್ಳಿ ಸೊಪ್ಪುಗುಡ್ಡೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಪ್ರಮುಖ ಆರೋಪಿ ಹೈದರಾಬಾದ್ ಮೂಲದ ಉದ್ಯಮಿ ಅರುಣ್ ರಾಮಚಂದ್ರನ್ ಪಿಳ್ಳೈ ಬಂಧನದ ಬಳಿಕ ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಬಿಆರ್ ಎಸ್ ನಾಯಕಿ ಕೆ ಕವಿತಾ

ಬೆಂಗಳೂರು:  ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ನಾಯಕರು  ಮಾರ್ಚ್ 9 ರಂದು ಕರೆ ಕೊಟ್ಟಿದ್ದ ಕರ್ನಾಟಕ ಬಂದ್  ರದ್ದಾಗಿದೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ವಿರುದ್ಧ ನಾಳೆ ಬೆಳಿಗ್ಗೆ 9 ರಿಂದ 11ಗಂಟೆವರೆಗೆ  ಅಂದರೆ ಎರಡು ಗಂಟೆಗಳ ಕಾಲ ಬಂದ್ ಗೆ ಕಾಂಗ್ರೆಸ್ ನಾಯಕರು ಕರೆ ನೀಡಿದ್ದರು. ಆದರೆ ನಾಳೆಯಿಂದ ದ್ವಿತೀಯ ಪಿಯು

ದಾವಣಗೆರೆ: ಲೋಕಾಯುಕ್ತ ದಾಳಿಯ ನಂತರ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಹಾಗೂ ಕೆಎಸ್‌ಡಿಎಲ್‌ ಮಾಜಿ ಅಧ್ಯಕ್ಷ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ಮಂಗಳವಾರ ಹೈಕೋರ್ಟ್‌ನಿರೀಕ್ಷಣಾ ಜಾಮೀನು ನೀಡಿದ್ದು, ಜಾಮೀನು ಸಿಕ್ಕ ಬೆನ್ನಲ್ಲೇ ಚೆನ್ನಗಿರಿಯ ಚನ್ನೇಶಪುರದ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಅದ್ಧೂರಿ ಸ್ವಾಗತ: ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಮಾಡಾಳ್‌ ವಿರೂಪಾಕ್ಷಪ್ಪ

ಗುವಾಹಟಿ: 60 ಸದಸ್ಯ ಬಲದ ನಾಗಾಲ್ಯಾಂಡ್ ವಿಧಾನಸಭೆಗೆ ಆಯ್ಕೆಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕೇವಲ ಐದು ದಿನಗಳ ನಂತರ ಸಲ್ಹೌಟುವೊನುವೊ ಕ್ರೂಸ್ ಅವರು ಮಂಗಳವಾರ ರಾಜ್ಯದ ಮೊದಲ ಮಹಿಳಾ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದ್ದಾರೆ. ನಾಗಾಲ್ಯಾಂಡ್ ರಾಜ್ಯದ ಸ್ಥಾನಮಾನ ಪಡೆದು 60 ವರ್ಷಗಳ

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸದ್ಯಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಪುತ್ರ ಮಾಡಾಳ್ ಪ್ರಶಾಂತ್ ಮೇಲೆ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯ ನಂತರ ಅವರ ನಿವಾಸ ಮತ್ತು ಕಚೇರಿಯಲ್ಲಿ ಸಿಕ್ಕಿದ 8 ಕೋಟಿಗೂ ಅಧಿಕ ಲೆಕ್ಕಕ್ಕೆ ಸಿಗದ ನಗದು ಪ್ರಕರಣ ಹಿನ್ನೆಲೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ಆರು ಮಂದಿ

ಬೆಂಗಳೂರು: ಸಚಿವ ವಿ.ಸೋಮಣ್ಣ ಕಾಂಗ್ರೆಸ್‌ ಸೇರ್ಪಡೆಯಾಗುತ್ತಾರೆ ಅನ್ನೋ ಗುಸು ಗುಸು ರಾಜ್ಯ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.  ಈ ಚರ್ಚೆಯ ಬೆನ್ನಲ್ಲೇ ಬೆಂಗಳೂರು ಬಿಜೆಪಿ ನಾಯಕರ ನಡುವೆ ಭಿನ್ನಮತ ಸ್ಫೋಟಗೊಂಡಿದೆ. ಇಷ್ಟು ದಿನ ನಡೆಯುತ್ತಿದ್ದ ಕೋಲ್ಡ್‌ವಾರ್‌ ವಿಜಯಸಂಕಲ್ಪ ಯಾತ್ರೆ ವೇಳೆ ಬಹಿರಂಗಗೊಂಡಿದೆ. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ವೇಳೆ ಆರ್‌.ಅಶೋಕ್