ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 24 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಶನಿವಾರ ಕರೆ ನೀಡಿದೆ. ಕಳೆದ ನಾಲ್ಕು ದಿನಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದ ಸಾರಿಗೆ ನೌಕರರ ಸಮಾನ ಮನಸ್ಕರ

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ನಂತರ ಅವರ ಕಚೇರಿ ನಿವಾಸದಲ್ಲಿ ತೀವ್ರ ಶೋಧ ನಡೆಸಿದ ಲೋಕಾಯುಕ್ತ ಸಿಬ್ಬಂದಿ ಮತ್ತು ಪೊಲೀಸರು ಬೆಚ್ಚಿಬಿದ್ದಿದ್ದರು. ಲೆಕ್ಕಕ್ಕೆ ಸಿಗದ 8

ದಾವಣಗೆರೆ: ಭಾಸ್ಕರ್ ರಾವ್ ಅವರು ಬಿಜೆಪಿಗೆ ಜಿಗಿದಿದ್ದಾರೆ ಮತ್ತು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನದ ನಂತರ, ಎಎಪಿ ತನ್ನ ದಾವಣಗೆರೆ ಸಮಾವೇಶದಿಂದ ವಿಧಾನಸಭೆ ಚುನಾವಣೆಗೆ ದೊಡ್ಡ ಘೋಷಣೆಗಳನ್ನು ಮಾಡುವ ಸಾಧ್ಯತೆಯಿದೆ ಮತ್ತು ಚುನಾವಣಾ ಮಾರ್ಗಸೂಚಿಯನ್ನು ಹೊರಡಿಸಲಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ

ನವದೆಹಲಿ: ಸಂಪೂರ್ಣ ಕ್ಷೀಣವಾಗಿದ್ದ ಮಾರಕ ಕೋವಿಡ್ ಸೋಂಕು 97 ದಿನಗಳ ಬಳಿಕ ಮತ್ತೆ ಭಾರತದಲ್ಲಿ ಸುದ್ದಿಗೆ ಗ್ರಾಸವಾಗಿದ್ದು, ಕಳೆದ 24 ಗಂಟೆಗಳಲ್ಲಿ 300ಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿವೆ. ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ದೈನಂದಿನ ಕೋವಿಡ್ ಅಂಕಿ-ಅಂಶಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 334 ಹೊಸ

ಬೆಂಗಳೂರು: ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ . ನಿನ್ನೆ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದು ಲೋಕಾಯುಕ್ತ

ನವದೆಹಲಿ: ಮೇಘಾಲಯದ ನೂತನ ಸಿಎಂ ಆಗಿ ಮಾರ್ಚ್ 7ರಂದು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮುಖ್ಯಸ್ಥ ಕಾನ್ರಾಡ್  ಸಂಗ್ಮಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಅವರು ಮಾರ್ಚ್ 7 ರಂದು ಮೇಘಾಲಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ

ಬೆಂಗಳೂರು: ಚಂದ್ರಯಾನ-3 ಮಿಷನ್ ವಿಚಾರದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಒಂದು ಹೆಜ್ಜೆ ಮುಂದಡಿಯಿಟ್ಟಿದ್ದು, ಯೋಜನೆಯ ಕ್ರಯೋಜೆನಿಕ್ ಎಂಜಿನ್ ಪರೀಕ್ಷೆ ಯಶಸ್ವಿಯಾಗಿದೆ. ಹೌದು..  ಚಂದ್ರಯಾನ-3 ಮಿಷನ್ ಉಡಾವಣಾ ವಾಹನದ ಕ್ರಯೋಜೆನಿಕ್ ಮೇಲಿನ ಹಂತಕ್ಕೆ ಶಕ್ತಿ ತುಂಬುವ ಸಿಇ-20 ಕ್ರಯೋಜೆನಿಕ್ ರಾಕೇಟ್ ಎಂಜಿನ್‍ನ ಹಾರಾಟ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಇಸ್ರೋ ತಿಳಿಸಿದೆ.

ಚೆನ್ನೈ:ಫೆ 28. ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ತಿರುಪತ್ತೂರ್ ನ ವಾಣಿಯಂಪಾಡಿನಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. 7ನೇ ತರಗತಿಯ ವಿದ್ಯಾರ್ಥಿಗಳಾದ ವಿಜಯ್(13), ರಫೀಕ್(13) ಮತ್ತು ಸೂರ್ಯ(13) ಮೃತಪಟ್ಟವರು. ಗಿರಿಸಮುಥಿರಂನಲ್ಲಿರುವ ಸರ್ಕಾರಿ ಶಾಲೆಗೆ ತೆರಳಲು ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ವಿದ್ಯಾರ್ಥಿಗಳ ಗುಂಪು

ನವದೆಹಲಿ: ಗ್ರೇಟರ್ ನೋಯ್ಡಾದ ದಾದ್ರಿಯಲ್ಲಿ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿ ಸ್ಫೋಟಗೊಂಡು ವಾಹನದಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ಅಂದರೆ ಸೋಮವಾರ ಜಗನ್ನಾಥ ಯಾತ್ರೆ ಹೊರಡುತ್ತಿದ್ದ ವೇಳೆ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿಯಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿದೆ. ಈ ಸ್ಫೋಟದ ನಂತರ, ಸುತ್ತಮುತ್ತಲ ಪ್ರದೇಶ ಮತ್ತು ವಸ್ತುಗಳೂ

ಶ್ರೀನಗರ: ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಅವರನ್ನು ಗುಂಡಿಕ್ಕಿ ಕೊಂದ ಎರಡು ದಿನಗಳ ನಂತರ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಅಪರಾಧದಲ್ಲಿ ಭಾಗಿಯಾಗಿದ್ದ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭದ್ರತಾ ಪಡೆಗಳ ಜತೆ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಹತನಾದ ಉಗ್ರನನ್ನು