ಉಡುಪಿ:ವರ್ಷಂಪ್ರತಿಯಂತೆ ಉಡುಪಿ ಶ್ರೀಕೃಷ್ಣಮಠದಲ್ಲಿ ಕದಿರುಕಟ್ಟುವ ಪರ್ವವು ಶನಿವಾರದ೦ದು ವಿಜೃ೦ಭಣೆಯಿಒದ ನೆರವೇರಿತು . ಮಠದ ಪುರೋಹಿತರು ಸಮೀಪದ ಗದ್ದೆಯಲ್ಲಿ ನೂತನವಾಗಿ ಬೆಳೆದ ಭತ್ತದ ಕದಿರಿಗೆ ಪೂಜೆ ಸಲ್ಲಿಸಿದ ಬಳಿಕ ರಥಬೀದಿಗೆ ತಂದು ಸ್ವರ್ಣಪಲ್ಲಕ್ಕಿಯಲ್ಲಿಟ್ಟು ವಾದ್ಯ, ಮಂತ್ರಘೋಷ ಸಹಿತ ಸಾಂಪ್ರದಾಯಿಕ ಬಿರುದಾವಳಿಗಳೊಂದಿಗೆ ಮೆರವಣಿಗೆಯಲ್ಲಿ ಶ್ರೀಕೃಷ್ಣಮಠಕ್ಕೆ ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಗಳು ,
ಚೆನ್ನೈ: 12578 ಮೈಸೂರು-ದರ್ಭಾಂಗ ಬಾಗ್ಮತಿ ಎಕ್ಸ್‌ಪ್ರೆಸ್ ರೈಲು ಚೆನ್ನೈ-ಗುಡೂರು ವಿಭಾಗದಲ್ಲಿ ಚೆನ್ನೈ ಸೆಂಟ್ರಲ್‌ನಿಂದ 41 ಕಿಲೋಮೀಟರ್ ದೂರದಲ್ಲಿರುವ ಕವರೈಪೆಟ್ಟೈ ನಿಲ್ದಾಣದಲ್ಲಿ ನಿಂತಿದ್ದ ಸರಕು ರೈಲಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಪರಿಣಾಮ ಆದರಲ್ಲಿದ್ದ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇದರಿಂದಾಗಿ ಬಾಗಮತಿ ಎಕ್ಸ್‌ಪ್ರೆಸ್‌ನ 12 ಬೋಗಿಗಳು ಹಳಿತಪ್ಪಿವೆ. ಮೈಸೂರು ದರ್ಭಾಂಗ ಎಕ್ಸ್ ಪ್ರೆಸ್ ರೈಲನ್ನು
ಬೆಂಗಳೂರು, ಅ.12: ಎಡಿಜಿಪಿ ಚಂದ್ರಶೇಖರ್ (ADGP Chandrashekar) ಅವರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ವಿರುದ್ದ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೆಚ್ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸುರೇಶ್ ಬಾಬು ವಿರುದ್ದ ಬೆದರಿಕೆ ಆರೋಪದಡಿ ದೂರು ದಾಖಲಾಗಿದೆ. ಎಡಿಜಿಪಿ ಚಂದ್ರಶೇಖರ್ ದೂರು ಆಧರಿಸಿ ಎನ್ಸಿಆರ್ ದಾಖಲಾಗಿದೆ. ಸೆ.28
ಉಡುಪಿ, ಅ.12: ರಾಜಧಾನಿ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಪ್ರಜೆಗಳ ಬಂಧನ ಕಾರ್ಯಾಚರಣೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಸುಮಾರು 20ಕ್ಕೂ ಹೆಚ್ಚು ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಲಾಗಿದ್ದು ದೆಹಲಿಯಲ್ಲಿ ಐವರು, ರಾಜಸ್ಥಾನದಲ್ಲಿ ಮೂವರು, ಉತ್ತರ ಪ್ರದೇಶದಲ್ಲಿ ಇಬ್ಬರು ಪಾಕ್ ಪ್ರಜೆಗಳನ್ನು ಬಂಧಿಸಲಾಗಿದೆ. ಇದರ ನಡುವೆ ಇದೀಗ ಉಡುಪಿಯ ಮಲ್ಪೆಯಲ್ಲಿ
ಮುಂಬೈ: ಟಾಟಾ ಗ್ರೂಪ್ ನ ಮಾಜಿ ಗೌರವಾಧ್ಯಕ್ಷ ದಿವಂಗತ ರತನ್ ಟಾಟಾ ಅವರ ಮಲ ಸಹೋದರ ನೋಯೆಲ್ ಟಾಟಾ ಅವರು ಟಾಟಾ ಟ್ರಸ್ಟ್‌ನ ಮುಂದಿನ ಅಧ್ಯಕ್ಷರಾಗಲಿದ್ದಾರೆ ಎಂದು ಮೂಲಗಳು ಶುಕ್ರವಾರ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿವೆ. ಅವರು ದೊರಬಾಜಿ ಟಾಟಾ ಟ್ರಸ್ಟ್‌ನ 11 ನೇ ಅಧ್ಯಕ್ಷ ಮತ್ತು ರತನ್ ಟಾಟಾ ಟ್ರಸ್ಟ್‌ನ ಆರನೇ
ಬೆಂಗಳೂರು: ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ (ಪೆರಿಫೆರಲ್ ರಿಂಗ್ ರೋಡ್)ಗಾಗಿ ಭೂ ಸ್ವಾಧೀನಪಡಿಸಿಕೊಳ್ಳುವ ಜನರಿಗೆ ಭೂಸ್ವಾಧೀನ ಕಾಯ್ದೆಯಡಿ ನೀಡಲಾಗುತ್ತಿರುವ ಪರಿಹಾರಕ್ಕಿಂತ ಹೆಚ್ಚಿನ ಪರಿಹಾರವನ್ನು ನೀಡುವ ಮಾರ್ಪಡಿಸಿದ ಆದೇಶಕ್ಕೆ ರಾಜ್ಯ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ದಿನಾಂಕ: 19.09.2024 ರಂದು ಸಲ್ಲಿಸಿರುವ ಪ್ರಸ್ತಾವನೆಯನ್ವಯ ಈಗಾಗಲೇ ದಿನಾಂಕ: 12.09.2024
ಬೆಂಗಳೂರು: ಪ್ರತ್ಯೇಕ ಸಭೆ, ವಿವಾದಾತ್ಮಕ ಹೇಳಿಕೆಗಳ ಮೂಲಕ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಹುಟ್ಟುಹಾಕುತ್ತಿರುವ ಸಚಿವರ ವಿರುದ್ಧ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿನ್ನೆ ನಡೆದ ಸಚಿವ ಸಂಪುಟದಲ್ಲಿ ಚಹಾ, ಭೋಜನದ ನೆಪದಲ್ಲಿ ಸಚಿವರಾದ ಸತೀಶ ಜಾರಕಿಹೊಳಿ, ಎಚ್.ಸಿ. ಮಹದೇವಪ್ಪ, ಜಿ. ಪರಮೆಶ್ವರ್ ಅವರು ಗೌಪ್ಯವಾಗಿ ಸಭೆ
ಬೆಂಗಳೂರು: ಈ ವರ್ಷ ನವೆಂಬರ್ 1ರಂದು 50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದು, ಎಲ್ಲಾ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲೇಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆದೇಶ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನವೆಂಬರ್ 1
ದೇಶಾದ್ಯಂತ ದೇವಿ ನವರಾತ್ರಿ ಸಂಭ್ರಮ ಜೋರಾಗಿದೆ. ದುರ್ಗಾಪೂಜೆ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ದುರ್ಗಾ ಪೂಜೆಯ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ಅಲ್ಲಿನ ಸರ್ಕಾರವು 4 ದಿನಗಳ ರಜೆಯನ್ನು ಘೋಷಿಸಿದೆ. ಇಡೀ ದೇಶವೇ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಿದೆ. ಮತ್ತೊಂದೆಡೆ, ಬಾಂಗ್ಲಾದೇಶದ ಸತ್ಖಿರಾ ನಗರದ ಶ್ಯಾಮನಗರದಲ್ಲಿರುವ ಪ್ರಸಿದ್ಧ ಜೇಶೋರೇಶ್ವರಿ ಕಾಳಿ ದೇವಸ್ಥಾನದ ಚಿನ್ನದ ಕಿರೀಟವನ್ನು
ಬೆಂಗಳೂರು, ಅಕ್ಟೋಬರ್ 11: ಸಾಮಾಜಿಕ ಕಾರ್ಯಕರ್ತೆ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಜತೆಗೆ, ಸಂತ್ರಸ್ತೆ ವಿರುದ್ಧ ವಿನಯ್ ಕುಲಕರ್ಣಿ ದಾಖಲಿಸಿರುವ ಪ್ರಕರಣವನ್ನೂ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಶಾಸಕ ವಿನಯ್ ಕುಲಕರ್ಣಿ ವಿರುದ್ಧ ರೈತ ಮಹಿಳೆ