ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಮೈಸೂರು: ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ ಅವರು ಶನಿವಾರ ಬೆಳಗ್ಗೆ ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಒಂಟಿಕೊಪ್ಪಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೂ ಅವರು ಬದುಕುಳಿದಿಲ್ಲ. ಧ್ರುವನಾರಾಯಣ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್.ಧ್ರುವನಾರಾಯಣ ಅವರು ನಿಧನದ

ಕಾಪು:ಮಾ 11. ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಶಾಲಾ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ (13) ಮೃತ ವಿದ್ಯಾರ್ಥಿನಿ. ಶನಿವಾರ ಬೆಳಗ್ಗೆ ಶಾಲೆಗೆ ಬರುತ್ತಿದ್ದ ಆಕೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಯ ತಂತ್ರಗಾರಿಕೆ ಜೋರಾಗಿದೆ. ಚುನಾವಣೆ ಎದುರಿಸಲು ಹೊಸ ತಂಡವನ್ನ ರಚಿಸಿದ್ದು, ಕಮಲ ನಾಯಕರ ಹೆಗಲಿಗೆ ಪ್ರಮುಖ ಜವಾಬ್ದಾರಿ ವಹಿಸಲಾಗಿದೆ. ಕರ್ನಾಟಕ ಬಿಜೆಪಿಯ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಗೆ ಅಧ್ಯಕ್ಷರು, ಸಂಚಾಲಕರನ್ನ ನೇಮಿಸಲಾಗಿದೆ. ಪ್ರಚಾರ ಸಮಿತಿಗೆ 25 ಸದಸ್ಯರು, ಚುನಾವಣಾ ನಿರ್ವಹಣಾ

ನವದೆಹಲಿ: ಭಾರತೀಯ ವಾಯುಪಡೆಯು ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರನ್ನು ಪಶ್ಚಿಮ ವಲಯದಲ್ಲಿನ ಮುಂಚೂಣಿ ಯುದ್ಧ ಘಟಕದ ಕಮಾಂಡರ್‌ ಆಗಿ ನೇಮಕ ಮಾಡಲಾಗಿದೆ. ಆ ಮೂಲಕ ಐಎಎಫ್‌ನ ಯುದ್ಧ ಘಟಕವನ್ನು ಮುನ್ನಡೆಸಲಿರುವ ಮೊದಲ ಮಹಿಳೆ ಎನ್ನುವ ಹಿರಿಮೆಗೆ ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರು ಪಾತ್ರರಾಗಿದ್ದಾರೆ. 2003ರಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಅಲ್ಬನೀಸ್ ಅವರೊಂದಿಗೆ ಆಸ್ಟ್ರೇಲಿಯಾದಲ್ಲಿ ಇತ್ತೀಚಿಗೆ ದೇವಾಲಯಗಳ ಮೇಲೆ ನಡೆದ ದಾಳಿಯ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಉಭಯ ದೇಶಗಳ ನಡುವಿ ಸಂಬಂಧಗಳನ್ನು ವಿಸ್ತರಿಸುವ ಗುರಿ ಹೊಂದಿರುವ ಸಂವಾದದ ವೇಳೆ ದೇವಸ್ಥಾನಗಳ ಮೇಲಿನ ದಾಳಿಯ ವಿಷಯ ಚರ್ಚೆಗೆ ಬಂದಿತು. ಕಳೆದ ಕೆಲವು ವಾರಗಳಿಂದ ಆಸ್ಟ್ರೇಲಿಯದಲ್ಲಿ

ಮಂಡ್ಯ: ಆಕಸ್ಮಿಕವಾಗಿ ನಾನು ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದು, ಅಂದಿನ ಮೈತ್ರಿ ಸರ್ಕಾರವನ್ನೇ ಎದುರು ಹಾಕಿಕೊಂಡು ಚುನಾವಣೆಯನ್ನು ಮಂಡ್ಯದ ಸ್ವಾಭಿಮಾನ ಜನತೆಯ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸಿ ಗೆದ್ದೆ. ಈ ವೇಳೆ ಹಲವು ಸವಾಲುಗಳು ಎದುರಾದವು. ನನ್ನನ್ನು ಹೆಜ್ಜೆಹೆಜ್ಜೆಗೂ ಅವಮಾನ ಮಾಡುತ್ತಾ ಹೋದರು ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಭಾವುಕರಾಗಿ ಹೇಳಿದರು. ಇಂದು

ಬೆಂಗಳೂರು: ಹಾಸನ ಜಿಲ್ಲೆಯ ಈರೇಗೌಡ ಎಂಬ 82 ವರ್ಷದ ವಯೋವೃದ್ಧ ಹೆಚ್ 3ಎನ್ 2 ವೈರಸ್ ಗೆ ಬಲಿಯಾಗಿದ್ದಾರೆ. ಇವರು ಮೊನ್ನೆ ಮಾರ್ಚ್ 6ರಂದು ಮೃತಪಟ್ಟಿದ್ದು, ಅದು ಹೆಚ್3ಎನ್2 ಇನ್ಫ್ಲುಯೆಂಜಾ ವೈರಸ್‌ಗೆ ಎಂದು ದೃಢಪಟ್ಟಿದ್ದು, ಈ ಮೂಲಕ ಕರ್ನಾಟಕದಲ್ಲಿ ಮೊದಲ ಪ್ರಕರಣವಾಗಿದೆ. H3N2 ವೈರಸ್‌ನಿಂದ ಉಂಟಾದ ಮೊದಲ ಎರಡು ಸಾವುಗಳು ಎಂದು

ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಬಿಹಾರದ ಅನೇಕ ನಗರಗಳು ಮತ್ತು ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಮೂವರು ಪುತ್ರಿಯರು ಹಾಗೂ ಆರ್‌ಜೆಡಿ ನಾಯಕರಿಗೆ ಸೇರಿದ ಸ್ಥಳಗಳು ಸೇರಿದಂತೆ ಇತರ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿತು. ಲಾಲು ಪ್ರಸಾದ್ ಅವರ ಪುತ್ರಿಯರಾದ ರಾಗಿಣಿ

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಇವತ್ತು ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ನಿರ್ಧಾರ ಪ್ರಕಟಿಸುತ್ತಾರೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುಳಿವು ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಿನ್ನೆ ನಮ್ಮ ನಾಯಕರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಅದರಲ್ಲಿ

ಬೆಂಗಳೂರು: ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ  ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸುದೀರ್ಘ ವಿಚಾರಣೆಗೊಳಪಡಿಸಿದರು. ಲಂಚ ಸ್ವೀಕರಿಸಿದ ಪ್ರಕರಣ ಸಂಬಂಧ ತಮ್ಮ ಪುತ್ರನನ್ನು ಬಂಧನಕ್ಕೊಳಪಡಾದ ಬಳಿಕ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ಅಧ್ಯಕ್ಷ ಸ್ಥಾನಕ್ಕೆ